
ಮಡಿಕೇರಿ ಡಿ.22 NEWS DESK : ಪಾಲಿಬೆಟ್ಟದ ಚೆಶೈರ್ ಹೋಮ್ಸ್ ಇಂಡಿಯಾ ಕೂರ್ಗ್ ವಿಶೇಷ ಶಾಲೆಯಲ್ಲಿ ಎರಡನೇಯ ವಿಶ್ವ ಧ್ಯಾನ ದಿನಾಚರಣೆಯನ್ನು ಆಚರಿಸಲಾಯಿತು. ಮುಖ್ಯೋಪಾಧ್ಯಾಯರಾದ ಶಿವರಾಜ್ ಅವರು ಧ್ಯಾನ ಮಾಡುವುದರಿಂದ ಆಗುವ ಪ್ರಯೋಜನದ ಕುರಿತು ಮಾಹಿತಿಯನ್ನು ನೀಡುವುದರ ಜೊತೆಗೆ ವಿಶೇಷ ಚೇತನ ವಿದ್ಯಾರ್ಥಿಗಳೊಂದಿಗೆ ಸೇರಿ ಸಾಮೂಹಿಕ ಧ್ಯಾನದಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ವಿಶೇಷ ಶಾಲೆಯ ಅಧ್ಯಕ್ಷರಾದ ಗೀತಾಚೆಂಗಪ್ಪ, ಕಾರ್ಯದರ್ಶಿ ಆಶಾ ಸುಬ್ಬಯ್ಯ, ಖಜಾಂಚಿ ಡಾ.ಎ.ಸಿ.ಗಣಪತಿ ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.











