ಮಡಿಕೇರಿ ಡಿ.22 NEWS DESK : ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನಾ ಸಭೆಯು ಗ್ಯಾರಂಟಿ ಯೋಜನಾ ಅನುಷ್ಠಾನ ತಾಲ್ಲೂಕು ಸಮಿತಿ ಅಧ್ಯಕ್ಷರಾದ ಎಂ.ಜಿ.ಮೋಹನ್ ದಾಸ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಹಿಂದಿನ ಪ್ರಗತಿ ಪರಿಶೀಲನಾ ಸಭೆಯ ಅನುಷ್ಠಾನ ವರದಿ ಮಂಡಿಸುವ ಮೂಲಕ ಯಾವ ಹಂತದಲ್ಲಿ ಅಧಿಕಾರಿಗಳು ಯೋಜನೆಯ ಪ್ರಗತಿಗೆ ಕಾರ್ಯೊನ್ಮುಖರಾಗಿದ್ದಾರೆ ಎಂಬುದರ ಬಗ್ಗೆ ಚರ್ಚೆಗಳು ನಡೆಯಿತು. ಎಲ್ಲಾ ಫಲಾನುಭವಿಗಳಿಗೆ ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಒಟ್ಟು 23 ಕಂತುಗಳು ಬಿಡುಗಡೆಯಾಗಿದ್ದು ಹಾಗೂ ಯಾರಿಗೆಲ್ಲ ಹಣ ಬಂದಿಲ್ಲ ಅಂತವರು ಬ್ಯಾಂಕುಗಳಿಗೆ ಹೋಗಿ ಪಾಸ್ ಪುಸ್ತಕಗಳನ್ನು ಎಂಟ್ರಿ ಮಾಡಿಕೊಳ್ಳುವುದು ಉತ್ತಮ ಎಂದು ತಾಲೂಕು ಪಂಚಾಯಿತಿ ಇಒ. ಶೇಖರ್ ಹೇಳಿದರು. ಶಕ್ತಿ ಯೋಜನೆ ಪ್ರಗತಿ ಬಗ್ಗೆ ಪರಿಶೀಲಿಸಿ ಸಭೆಯಲ್ಲಿ ಇತ್ತೀಚಿನ ದಿನಗಳಲ್ಲಿ ಬೆಳಿಗ್ಗೆ 8.30 ಗಂಟೆಗೆ ಹೊರಡುವ ಬಸ್ಸು 7.30 ಗಂಟೆಗೆ ಹೋಗುತ್ತದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸದಸ್ಯರಾದ ದಯಾನಂದ ಅವರಿಗೆ ಪ್ರಶ್ನಿಸಿದರು. ಆದ್ದರಿಂದ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ತೊಂದರೆ ಉಂಟಾಗಿದೆ. ಸರಿಯಾದ ಸಮಯಕ್ಕೆ ಬಸ್‍ಗಳನ್ನು ಒದಗಿಸಬೇಕು ಎಂದು ಸದಸ್ಯರು ಮನವಿ ಮಾಡಿದರು. ಯುವನಿಧಿಗೆ ಸಂಬಂಧಿಸಿದಂತೆ ಮಡಿಕೇರಿ ತಾಲೂಕಿನಲ್ಲಿ 2025ರ ಅಂತ್ಯದವರೆಗೆ ನೋಂದಣಿ ಆಗಿರುವ ಪದವೀದರರು 3871, ಡಿಪೆÇ್ಲೀಮಾ 59 ಒಟ್ಟು 1,17,01,500 ಹಾಗೂ 2025 ಅಂತ್ಯದವರೆಗೆ 443 ಮಂದಿ ಯುವನಿಧಿ ಯೋಜನೆಯ ಪ್ರಯೋಜನ ಪಡೆದಿದ್ದಾರೆ ಎಂದು ಮಾಹಿತಿ ನೀಡಿದರು. ಗೃಹ ಜ್ಯೋತಿ ಯೋಜನೆಗಳಿಗೆ ಸಂಬಂಧಪಟ್ಟಂತೆ ಪ್ರಗತಿ ಪರಿಶೀಲನೆ ನಡೆಸಿ ಮಡಿಕೇರಿ ತಾಲೂಕಿನಲ್ಲಿ ಒಟ್ಟು ಅರ್ಹ ವಿದ್ಯುತ್ ಸ್ವಾವರಗಳು 52313, ನೋಂದಣಿಗೊಂಡ ಒಟ್ಟು ಅರ್ಜಿಗಳು 51964, ಬಾಕಿ ಇರುವ ಸ್ವಾವರಗಳು 349, ಶೇಕಡವಾರು ಪ್ರಗತಿ 99.33, ಸಹಾಯಧನ 414.88 ಲಕ್ಷ ರೂ. ಸಹಾಯಧನ ಪಡೆಯುತ್ತಿದ್ದಾರೆ ಎಂದು ಮಾಹಿತಿ ನೀಡಿದರು. ಗೃಹ ಜ್ಯೋತಿ ಯೋಜನೆಗಳಿಗೆ ಸಂಬಂಧಪಟ್ಟಂತೆ ಆಧಾರ್ ನಂಬರ್ ಲಿಂಕ್ ಮೂಲಕ ಅನುಸರಿಸಬೇಕು ಎಂದು ಅಧಿಕಾರಿ ಸೂಚಿಸಿದರು. ಅನ್ನಭಾಗ್ಯ ಯೋಜನೆಗಳಿಗೆ ಸಂಬಂಧಪಟ್ಟಂತೆ ಮಡಿಕೇರಿ ತಾಲೂಕಿನಲ್ಲಿ ಒಟ್ಟು ಪಡಿತರ ಚೀಟಿ 38336 ಆಗಿದ್ದು ಒಟ್ಟು 121107 ಫಲಾನುಭವಿಗಳಿದ್ದಾರೆ. ವೈದ್ಯಕೀಯ ಸೌಲಭ್ಯಕ್ಕಾಗಿ ಹೊಸ ಪಡಿತರ ಚೀಟಿಗಳಿಗೆ ಅರ್ಜಿ ಸಲ್ಲಿಸಬಹುದು. ಈಗಾಗಲೇ ಪ್ರಸ್ತುತ ಚಾಲ್ತಿಯಲ್ಲಿರುವ ಪಡಿತರ ಚೀಟಿಗಳಲ್ಲಿ ವಿಳಾಸ ಬದಲಾವಣೆ, ಹೆಸರು ಸೇರ್ಪಡೆ ಹಾಗೂ ಹೆಸರು ತೆಗೆದು ಹಾಕುವುದಕ್ಕೆ ಅರ್ಜಿ ಸಲ್ಲಿಸಬಹುದು ಎಂದು ಮಾಹಿತಿ ನೀಡಿದರು. ಸಭೆಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರಾದ ದಯಾನಂದ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರಾದ ಪಾರ್ವತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸದಸ್ಯರಾದ ತೇಜಸ್ವಿನಿ, ಗ್ಯಾರಂಟಿ ಯೋಜನೆಗಳಿಗೆ ಸಂಬಂಧಿಸಿದ ಅಧಿಕಾರಿಗಳು, ಸದ್ಯಸರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.











