ಮಡಿಕೇರಿ ಡಿ.23 NEWS DESK : ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ವಿರಾಜಪೇಟೆ ಪುರಸಭಾ ವ್ಯಾಪ್ತಿಯ ಗೌರಿ ಕೆರೆಯಲ್ಲಿ ಶಾಸಕರ 8ಲಕ್ಷ ರೂ ಅನುದಾನದಲ್ಲಿ ನಿರ್ಮಾಣಗೊಂಡ ನೂತನ ರಸ್ತೆಯನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಿದರು. ಪುರಸಭಾ ವ್ಯಾಪ್ತಿಯ ರಸ್ತೆಗಳನ್ನು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವ ಶಾಸಕರು, ಈ ಹಿಂದೆ ಗೌರಿ ಕೆರೆಯ ಈ ಭಾಗಕ್ಕೆ ರಸ್ತೆಗೆ ಅನುದಾನ ಒದಗಿಸಿದ್ದರು. ಇದೀಗ ಪೂರ್ಣಗೊಂಡ ರಸ್ತೆಯನ್ನು ಲೋಕಾರ್ಪಣೆಗೊಳಿಸಿ ಜನಸಾಮಾನ್ಯರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಕರೆ ನೀಡಿದರು. ಈ ಸಂದರ್ಭದಲ್ಲಿ ಪುರಸಭೆ ಮಾಜಿ ಸದಸ್ಯರುಗಳು, ಪಕ್ಷದ ಹಿರಿಯ-ಕಿರಿಯ ಮುಖಂಡರು, ಮುಖ್ಯ ಅಧಿಕಾರಿ,ಸ್ಥಳೀಯರ ಉಪಸ್ಥಿತರಿದ್ದರು.











