ಮಡಿಕೇರಿ ಡಿ.23 NEWS DESK : ಜಿಲ್ಲಾಡಳಿತ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಜಿಲ್ಲಾ ಗ್ರಾಹಕರ ಆಯೋಗ ಹಾಗೂ ಜಿಲ್ಲಾ ಗ್ರಾಹಕರ ಮಾಹಿತಿ ಕೇಂದ್ರ ಕುಶಾಲನಗರ ಇವರ ಸಂಯುಕ್ತಾಶ್ರಯದಲ್ಲಿ ‘ಡಿಜಿಟಲ್ ನ್ಯಾಯದ ಮೂಲಕ ಪರಿಣಾಮಕಾರಿ ಮತ್ತು ತ್ವರಿತ ವಿಲೇವಾರಿ’ ಎಂಬ ವಿಷಯದಡಿ ರಾಷ್ಟ್ರೀಯ ಗ್ರಾಹಕರ ದಿನಾಚರಣೆಯು ಡಿ.29 ರಂದು ಬೆಳಗ್ಗೆ 11 ಗಂಟೆಗೆ ಗೋಣಿಕೊಪ್ಪಲು ಕಾವೇರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಲಿದೆ. ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಡಾ.ರೇಣುಕಾಂಭ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದ ಸದಸ್ಯರಾದ ಗೌರಮ್ಮಣ್ಣಿ, ಕುಶಾಲನಗರದ ಜಿಲ್ಲಾ ಗ್ರಾಹಕರ ಮಾಹಿತಿ ಕೇಂದ್ರದ ಅಧ್ಯಕ್ಷರಾದ ಎ.ಎ.ಚಂಗಪ್ಪ, ಗೋಣಿಕೊಪ್ಪಲು ಕಾವೇರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಎಸ್.ಎಸ್.ಮಾದಯ್ಯ, ಗ್ರಾಹಕ ಹಕ್ಕುಗಳ ಶಿಕ್ಷಣ ಮತ್ತು ಜಾಗೃತಿ ಟ್ರಸ್ಟ್‍ನ ಟ್ರಸ್ಟ್ ಸ್ಥಾಪಕರಾದ ವೈ.ಜಿ.ಮುರಳೀಧರನ್, ತೂಕ, ಅಳತೆ ಮತ್ತು ಕಾನೂನು ಮಾಪನ ಶಾಸ್ತ್ರ ಇಲಾಖೆ ಸಹಾಯಕ ನಿಯಂತ್ರಕರಾದ ಸರಳ ನಾಯರ್, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕರಾದ ಡಾ.ಮಂಟೇಸ್ವಾಮಿ ಇತರರು ಪಾಲ್ಗೊಳ್ಳಲಿದ್ದಾರೆ.










