
ವಿರಾಜಪೇಟೆ ಡಿ.24 NEWS DESK : ವಿರಾಜಪೇಟೆ ಸಮೀಪದ ಪಾಲಿಬೆಟ್ಟ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕೂತಂಡ ಪೂವಯ್ಯ ಮತ್ತು ಪಾರ್ವತಿ ಪೂವಯ್ಯ ಜ್ಞಾಪಕಾರ್ಥವಾಗಿ ಸ್ವಾಮಿ ವಿವೇಕಾನಂದರ ಜೀವನ ಮತ್ತು ಸಾಧನೆ ಬಗ್ಗೆ ಹಮ್ಮಿಕೊಂಡಿದ್ದ ಜಿಲ್ಲಾಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ಪಾಲಿಬೆಟ್ಟ ಸರಕಾರಿ ಪದವಿ ಪೂರ್ವ ಕಾಲೇಜಿನ ಹರ್ಷ ಹಾಗೂ ಪುಣ್ಯ ಪ್ರಥಮ ಸ್ಥಾನವನ್ನು ಗಳಿಸಿದ್ದಾರೆ. ಏಕಲವ್ಯ ವಸತಿ ಕಾಲೇಜಿನ ಪವಿತ್ರ ಹಾಗೂ ನವಿತಾ ದ್ವಿತೀಯ ಸ್ಥಾನವನ್ನು ಗಳಿಸಿದರು. ವಿದ್ಯಾನಿಕೇತನ ಪದವಿಪೂರ್ವ ಕಾಲೇಜಿನ ಹರಿಕೃಷ್ಣ ಹಾಗೂ ಕಾರ್ಯಪ್ಪ ತೃತೀಯ ಸ್ಥಾನವನ್ನು ಪಡೆದುಕೊಂಡರು. ಕಾರ್ಯಕ್ರಮದಲ್ಲಿ ಕೂರ್ಗ್ ಎಜುಕೇಶನ್ ಫಂಡಿನ ಸದಸ್ಯರಾದ ಕೆ.ಪಿ.ಉತ್ತಪ್ಪ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಎಂ.ಎಲ್.ಚಿದಾನಂದ ಕುಮಾರ್, ಭಾಗಮಂಡಲ ಕಾವೇರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾದ ಕೆ.ಜೆ.ದಿವಾಕರ್, ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಸಾಬು ಕಾಳಪ್ಪ ಎಂ.ಎಂ, ಪಾಲಿಬೆಟ್ಟ ಪ್ರೌಢಶಾಲೆಯ ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯ ಕೆ.ವಾಣಿ ಉತ್ತಪ್ಪ ಮಾತನಾಡಿ, ಸ್ವಾಮಿ ವಿವೇಕಾನಂದರ ಜೀವನ ಹಾಗೂ ಸಂದೇಶಗಳನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಂಡು ದೇಶಕ್ಕೆ ಉತ್ತಮ ಪ್ರಜೆಗಳಾಗಿ ಬದುಕಬೇಕೆಂದು ಕಿವಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಕೆ.ಕೆ.ಶೈನಾ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕರುಗಳಾದ ಪಿ.ಆರ್.ಶಿವದಾಸ್, ಪಾರ್ವತಿ ಎಂ.ಬಿ, ಶ್ರೀರಕ್ಷಾ, ಸವಿತಾ, ನಂದನ ಹಾಗೂ ಶಾಲಿನಿ ಉಪಸ್ಥಿತರಿದ್ದರು. ಜಿಲ್ಲೆಯ 20 ಕ್ಕಿಂತಲೂ ಹೆಚ್ಚು ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು.











