ಮಡಿಕೇರಿ ಡಿ.24 NEWS DESK : ಶತಮಾನೋತ್ಸವದ ಸಂಭ್ರಮದಲ್ಲಿರುವ ಕೊಡಗು ವಿದ್ಯಾ ಇಲಾಖಾ ನೌಕರರ ಪತ್ತಿನ ಸೌಹಾರ್ದ ಸಹಕಾರಿ ಸಂಘ ನಿಯಮಿತದ ‘ಶತ ಸಂಭ್ರಮ’ದ ಅಂಗವಾಗಿ ಕ್ರೀಡಾಕೂಟ ಮತ್ತು ಸಾಂಸ್ಕøತಿಕ ಸ್ಪರ್ಧಾ ಕಾರ್ಯಕ್ರಮ ಡಿ.25 ರಂದು ಮಡಿಕೇರಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಕಾರ್ಯಕ್ರಮವನ್ನು ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರಾದ, ರಾಷ್ಟ್ರ ಪ್ರಶಸ್ತಿ ವಿಜೇತ ಕಲಾವಿದೆ ಮಿಲನ ಭರತ್ ಉದ್ಘಾಟಿಸಲಿದ್ದಾರೆ. ಕೊಡಗು ವಿದ್ಯಾ ಇಲಾಖಾ ನೌಕರರ ಪತ್ತಿನ ಸೌಹಾರ್ದ ಸಹಕಾರಿ ಸಂಘ ನಿಯಮಿತದ ಅಧ್ಯಕ್ಷ ಹೆಚ್.ಎಸ್.ಚೇತನ್ ಅವರ ಅಧ್ಯಕ್ಷತೆಯಲ್ಲಿ ಬೆಳಿಗ್ಗೆ 10.30 ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ನಗರಸಭಾ ಅಧ್ಯಕ್ಷರಾದ ಪಿ.ಕಲಾವತಿ, ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಮೈಸೂರು ಪ್ರಾಂತೀಯ ವ್ಯವಸ್ಥಾಪಕ ಗುರು ಪ್ರಸಾದ್ ಬಂಗೇರ, ಮಡಿಕೇರಿಯ ವೃತ್ತ ನಿರೀಕ್ಷ ಪಿ.ಕೆ.ರಾಜು ಹಾಗೂ ಮಡಿಕೇರಿ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ ಎಸ್‍ಡಿಎಂಸಿ ಅಧ್ಯಕ್ಷ ಜಗದೀಶ್ ಎಂ.ಎನ್. ಅವರು ಪಾಲ್ಗೊಳ್ಳಲಿದ್ದಾರೆ. ಸೌಹಾರ್ದ ಸಹಕಾರಿಯ ಶತಮಾನೋತ್ಸವದ ಅಂಗವಾಗಿ ಕೊಡಗು ಜಿಲ್ಲಾ ಸರಕಾರಿ ಶಾಲಾ ಶಿಕ್ಷಕರು, ಅನುದಾನಿತ ಶಾಲಾ ಶಿಕ್ಷಕರು, ನಿವೃತ್ತ ಶಿಕ್ಷಕರು ಹಾಗೂ ಶಿಕ್ಷಣ ಇಲಾಖೆಯ ನೌಕರರಿಗಾಗಿ ವಿವಿಧ ಕ್ರೀಡೆ ಮತ್ತು ಸಾಂಸ್ಕೃತಿಕ ಸ್ಪರ್ಧೆ ನಡೆಯಲಿದೆ.











