ಮಡಿಕೇರಿ ಡಿ.24 NEWS DESK : ಸರ್ಕಾರದ ವತಿಯಿಂದ ಕೊಡಗು ಜಿಲ್ಲೆಯ ಅಲ್ಪಸಂಖ್ಯಾತ ಸಮುದಾಯದ ಅಭಿವೃದ್ಧಿಗೆ ಸುಮಾರು 20 ಕೋಟಿ ರೂ. ಅನುದಾನ ಬಿಡುಗಡೆ ಮಾಡಿಸಿದ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ಜಿಲ್ಲೆಯ ಮಸೀದಿಯ ಅಧ್ಯಕ್ಷರುಗಳು ಆಗಮಿಸಿ ಸನ್ಮಾನ ಮಾಡಿದರು. ಈ ಸಂದರ್ಭ ಜಿಲ್ಲಾ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಹನೀಫ್, ತಾಲ್ಲೂಕು ಅಲ್ಪಸಂಖ್ಯಾತ ಅಧ್ಯಕ್ಷರಾದ ಕೋಳುಮಂಡ ರಫೀಕ್, ಹಿರಿಯರಾದ ಎರ್ಮು ಹಾಜಿ, ಡಿಸಿಸಿ ಉಪಾಧ್ಯಕ್ಷರು ಅಬ್ದುಲ್ ರೆಹಮಾನ್,ಶಾಫಿ ಎಡಪಾಲ, ನಾಪೋಕ್ಲು ಬ್ಲಾಕ್ ಅಧ್ಯಕ್ಷರು ಇಸ್ಮಾಯಿಲ್, ಪ್ರಮುಖರಾದ ಸಲಾಂ, ಇಸ್ಮಾಯಿಲ್, ಹಮೀದ್, ಅಂದಾಯಿ, ನೌಶಾದ್, ರಜಾಕ್, ಶಬೀರ್, ಸಿರಾಜ್, ಸೇರಿದಂತೆ ಅಲ್ಪಸಂಖ್ಯಾತ ಸಮುದಾಯದ ಬಂದುಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು. ಅಲ್ಲದೆ ಮುಂದಿನ ದಿನಗಳಲ್ಲಿ, ಅಲ್ಪಸಂಖ್ಯಾತ ಸಚಿವರನ್ನು ಜಿಲ್ಲೆಗೆ ಆಹ್ವಾನಿಸಿ, ಬೃಹತ್ ಸಮಾವೇಶ ನಡೆಸಿ ಕೊಡುವಂತೆ ಮಾನ್ಯ ಶಾಸಕರಲ್ಲಿ ಮನವಿ ಮಾಡಿದರು.











