ಮಡಿಕೇರಿ ಡಿ.24 NEWS DESK : ಕೊಡಗು ಜಿಲ್ಲಾ ಯೋಜನಾ ಸಮಿತಿಗೆ ನಗರ ಸ್ಥಳೀಯ ಸಂಸ್ಥೆಗಳಿಂದ ಚುನಾಯಿತ ಸದಸ್ಯರ ಪೈಕಿ 8 ಸದಸ್ಯರನ್ನು ಚುನಾವಣೆ ಮೂಲಕ ಆಯ್ಕೆ ಮಾಡಲು ಚುನಾವಣಾ ವೇಳಾಪಟ್ಟಿ ಪಟ್ಟಿ ಪ್ರಕಟಿಸಲಾಗಿದೆ. ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳು ತಮ್ಮ ನಾಮನಿರ್ದೆಶನ ಪತ್ರವನ್ನು ನಿಗದಿತ ನಮೂನೆ-1 ರಲ್ಲಿ ಚುನಾವಣಾಧಿಕಾರಿಗಳಾದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ, ಕೊಡಗು ಜಿಲ್ಲಾ ಪಂಚಾಯತ್ ರವರಿಗೆ ಕೆಳಕಂಡ ಚುನಾವಣಾ ವೇಳಾಪಟ್ಟಿಯಂತೆ ಸಲ್ಲಿಸಬಹುದಾಗಿದೆ. ಚುನಾವಣಾ ಪ್ರಕ್ರಿಯೆಯಲ್ಲಿ ಚುನಾವಣಾ ಅಧಿಕಾರಿಗಳಿಗೆ ಸಹಕರಿಸಲು ಸಹಾಯಕ ಚುನಾವಣಾಧಿಕಾರಿಯಾಗಿ ಯೋಜನಾ ನಿರ್ದೇಶಕರು, ಜಿಲ್ಲಾ ನಗರಾಭಿವೃದ್ಧಿ ಕೋಶ, ಕೊಡಗು ಜಿಲ್ಲೆ ಅವರನ್ನು ನೇಮಿಸಲಾಗಿದೆ. ನಗರ ಸ್ಥಳೀಯ ಸಂಸ್ಥೆಗಳ ಚುನಾಯಿತ ಸದಸ್ಯರ ಪೈಕಿ ಜಿಲ್ಲಾ ಯೋಜನಾ ಸಮಿತಿಗೆ ಚುನಾವಣೆ ಮೂಲಕ ಆಯ್ಕೆ ಮಾಡಬೇಕಾದ ಸದಸ್ಯರ ಸಂಖ್ಯೆ 08, ಜನವರಿ, 02 ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 3 ಗಂಟೆವರೆಗೆ ಕೊಡಗು ಜಿಲ್ಲಾ ಪಂಚಾಯತ್ ಕೆಡಿಪಿ ಸಭಾಂಗಣದಲ್ಲಿ ನಾಮಪತ್ರ ಸಲ್ಲಿಸುವುದು. ಜ.2 ರಂದು ಅಪರಾಹ್ನ 4 ಗಂಟೆಯಿಂದ 5.30 ಗಂಟೆವರೆಗೆ ಕೊಡಗು ಜಿಲ್ಲಾ ಪಂಚಾಯತ್ ಕೆಡಿಪಿ ಸಭಾಂಗಣದಲ್ಲಿ ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನಾಮಪತ್ರಗಳನ್ನು ಹಿಂಪಡೆದುಕೊಳ್ಳಲು ಜನವರಿ, 03 ರಂದು ಬೆಳಗ್ಗೆ 11 ಗಂಟೆಯಿಂದ 1 ಗಂಟೆಯವರೆಗೆ ಕೊನೆಯ ದಿನವಾಗಿದೆ. ಮತದಾನ ಅವಶ್ಯವಿದ್ದರೆ ಜ.4 ರಂದು ಬೆಳಗ್ಗೆ 11 ಗಂಟೆಯಿಂದ 1.30 ಗಂಟೆವರೆಗೆ ಕೊಡಗು ಜಿಲ್ಲಾ ಪಂಚಾಯತ್ ಕೆಡಿಪಿ ಸಭಾಂಗಣದಲ್ಲಿ ಮತದಾನ ನಡೆಯಲಿದೆ. ಜನವರಿ, 04 ರಂದು ಮಧ್ಯಾಹ್ನ 3 ಗಂಟೆಯಿಂದ 5 ಗಂಟೆಯವರೆಗೆ ಮತಗಳ ಎಣಿಕೆ ನಡೆಯಲಿದೆ. ನಂತರ ಫಲಿತಾಂಶ ಘೋಷಣೆಯಾಗಲಿದೆ. (ಸೂಚನೆ: ಸಮಾನ ಮತಗಳು ಬಂದಲ್ಲಿ ಲಾಟರಿ ಮೂಲಕ ಆಯ್ಕೆ) ಜ.4 ರಂದು ಮಧ್ಯಾಹ್ನ 3 ಗಂಟೆಯಿಂದ 5 ಗಂಟೆವರೆಗೆ. ಜ.4 ರಂದು ಚುನಾವಣೆ ಪ್ರಕ್ರಿಯೆಯನ್ನು ಮುಕ್ತಾಯಗೊಳಿಸಲಾಗುವುದು ಎಂದು ಕೊಡಗು ಜಿಲ್ಲಾ ಯೋಜನಾ ಸಮಿತಿ ಚುನಾವಣಾಧಿಕಾರಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆನಂದ ಪ್ರಕಾಶ್ ಮೀನಾ ಅವರು ತಿಳಿಸಿದ್ದಾರೆ.










