ಚಿತ್ರದುರ್ಗ NEWS DESK ಡಿ.25 : ಲಾರಿ ಡಿಕ್ಕಿಯಾಗಿ ಖಾಸಗಿ ಸ್ಲೀಪರ್ ಕೋಚ್ ಬಸ್ಗೆ ಬೆಂಕಿ ಹೊತ್ತಿಕೊಂಡು ಉರಿದ ಪರಿಣಾಮ ಮೃತಪಟ್ಟವರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ. ಈ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಮಧ್ಯರಾತ್ರಿ ಸಂಭವಿಸಿದೆ. ಬೆಂಗಳೂರಿನಿಂದ ಹೊರಟಿದ್ದ ಈ ಬಸ್ಸಿನಲ್ಲಿ 29 ಮಂದಿ ಪ್ರಯಾಣಿಸುತ್ತಿದ್ದರು. 9 ಮಂದಿ ಮೃತಪಟ್ಟಿರುವುದಾಗಿ ಪ್ರಾಥಮಿಕ ವರದಿ ತಿಳಿಸಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಘಟನೆ ಕುರಿತು ಬೇಸರ ವ್ಯಕ್ತಪಡಿಸಿ ಪರಿಹಾರ ಘೋಷಿಸಿದ್ದಾರೆ. ಮೃತರ ಕುಟುಂಬಕ್ಕೆ ರೂ.2 ಲಕ್ಷ ಹಾಗೂ ಗಾಯಾಳುಗಳಿಗೆ ರೂ.50 ಸಾವಿರ ನೀಡಲಾಗುವುದು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘಟನೆ ಕುರಿತು ದು:ಖ ವ್ಯಕ್ತಪಡಿಸಿದ್ದಾರೆ.










