ಶಹಜಹಾನ್‌ಪುರ NEWS DESK ಡಿ.25 : ಹಳಿ ದಾಟುತ್ತಿದ್ದ ಬೈಕ್ ಗೆ ರೈಲೊಂದು ಡಿಕ್ಕಿಯಾದ ಪರಿಣಾಮ ದಂಪತಿ ಹಾಗೂ ಅವರ ಇಬ್ಬರು ಮಕ್ಕಳು ಸೇರಿದಂತೆ ಐವರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಶಹಜಹಾನ್‌ಪುರ ಜಿಲ್ಲೆಯಲ್ಲಿ ನಡೆದಿದೆ. ಈ ಐವರು ಒಂದೇ ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರೌಜಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ರೌಜಾ ರೈಲ್ವೆ ನಿಲ್ದಾಣದ ಬಳಿ ಪಾದಚಾರಿ ಮಾರ್ಗದ ಮೂಲಕ ಬೈಕ್ ರೈಲು ಮಾರ್ಗವನ್ನು ದಾಟುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ರಾಜೇಶ್ ದ್ವಿವೇದಿ ತಿಳಿಸಿದ್ದಾರೆ.










