ನಾಪೋಕ್ಲು ಡಿ.25 NEWS DESK : ನಾಪೋಕ್ಲು ಹೋಬಳಿ ವ್ಯಾಪ್ತಿಯ ವಿವಿಧ ರಸ್ತೆಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಹೇಳಿದರು. ನಾಪೋಕ್ಲುವಿನಲ್ಲಿ 20 ಲಕ್ಷ ರೂ.ವೆಚ್ಚದಲ್ಲಿ ನಿರ್ಮಿಸಲಾದ ಕೊಡವ ಸಮಾಜ ರಸ್ತೆಯ ಉದ್ಘಾಟನೆಯನ್ನು ನೆರವೇರಿಸಿ ಅವರು ಮಾತನಾಡಿದರು. ಕೊಡವ ಸಮಾಜದ ಅಧ್ಯಕ್ಷ ಮುಂಡಂಡ ನಾಣಯ್ಯ ಹಾಗೂ ಗ್ರಾಮಸ್ಥರು ಹದಗೆಟ್ಟ ರಸ್ತೆ ದುರಸ್ತಿಗೆ ಮನವಿ ಮಾಡಿ ಕೋರಿಕೆ ಮೇರೆಗೆ ಪಂಚಾಯತ್ ರಾಜ್ ಇಲಾಖೆಯ ಮೂಲಕ ಕೊಡವ ಸಮಾಜ ರಸ್ತೆಯನ್ನು ಅಭಿವೃದ್ಧಿ ಪಡಿಸಲಾಗಿದೆ. ಬಾಕಿ ಉಳಿದಿರುವ ಅಜ್ಜಿಮುಟ್ಟ ಮೂಲಕ ಎಮ್ಮೆಮಾಡು ಸಂಪರ್ಕಿಸುವ ಮೂರುವರೆ ಕಿಲೋಮೀಟರ್ ಈ ರಸ್ತೆಯನ್ನು ಪಂಚಾಯತ್ ರಾಜ್ ಇಲಾಖೆಯ ಪ್ರಗತಿಪತ ಯೋಜನೆ ಮೂಲಕ ಅಭಿವೃದ್ಧಿಪಡಿಸಲಾಗುವುದು ಎಂದರು. ವಲಯ ಕಾಂಗ್ರೆಸ್ ಅಧ್ಯಕ್ಷ ಮಾಚೆಟ್ಟಿರ ಕುಸು ಕುಶಾಲಪ್ಪ, ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು. ಈ ಸಂದರ್ಭ ಗ್ರಾ.ಪಂ ಅಧ್ಯಕ್ಷೆ ವನಜಾಕ್ಷಿ ರೇಣುಕೇಶ್ ಹಾಗೂ ಸದಸ್ಯರು, ಕೊಡವ ಸಮಾಜದ ಉಪಾಧ್ಯಕ್ಷ ಕರವಂಡ ಲವನಾಣಯ್ಯ ಪದಾಧಿಕಾರಿಗಳು, ಸದಸ್ಯರು, ಕೊಡವ ಸಮಾಜದ ಪೊಮ್ಮಕ್ಕಡ ಪರಿಷತ್ ಅಧ್ಯಕ್ಷ ನಿಶಾ ಮೇದಪ್ಪ ಹಾಗೂ ಸದಸ್ಯರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎ.ಇಸ್ಮಾಯಿಲ್, ಕೆಡಿಪಿ ಸದಸ್ಯರಾದ ಎಂ.ಹೆಚ್.ಅಬ್ದುಲ್ ರಹಮಾನ್, ಅಕ್ರಮ ಸಕ್ರಮ ಸಮಿತಿ ತಾಲ್ಲೂಕು ಅಧ್ಯಕ್ಷ ನೆರವಂಡ ಉಮೇಶ್, ಎಂ.ಎ.ಮನ್ಸೂರ್ ಆಲಿ, ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು, ಯುವ ಕಾಂಗ್ರೆಸ್ ಮುಖಂಡರು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.
ವರದಿ : ದುಗ್ಗಳ ಸದಾನಂದ.











