ಮಡಿಕೇರಿ ಡಿ.25 NEWS DESK : ಭಾರತ ಕಂಡ ಶ್ರೇಷ್ಠ ಪ್ರಧಾನಿ, ಅಜಾತಶತ್ರು, ಅಟಲ್ ಬಿಹಾರಿ ವಾಜಪೇಯಿ ಅವರ ಗೌರವಾರ್ಥ ಸುಶಾಸನ ದಿನ (ಉತ್ತಮ ಆಡಳಿತ ದಿನ)ದ ಅಂಗವಾಗಿ ಮೇಕೇರಿಯ ಸ್ವಾಗತ ಯುವಕ ಸಂಘ ಹಾಗೂ ವಿವಿಧ ಸಂಘ, ಸಂಸ್ಥೆಗಳ ಸಹಯೋಗದಲ್ಲಿ ಡಿ.26 ರಂದು 14ನೇ ಗ್ರಾಮೀಣ ಮಟ್ಟದ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ನಡೆಯಲಿದೆ. ಯುವಜನ ವ್ಯವಹಾರ ಹಾಗೂ ಕ್ರೀಡಾ ಸಚಿವಾಲಯ, ಮೈ ಭಾರತ್, ಜಿಲ್ಲಾ ಯುವ ಒಕ್ಕೂಟ, ಮಡಿಕೇರಿ ತಾಲ್ಲೂಕು ಯುವ ಒಕ್ಕೂಟ, ಕೊಡಗು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಡಿಕೇರಿ ಲಯನ್ಸ್ ಕ್ಲಬ್, ರೋಟರಿ ಕ್ಲಬ್ ಆಫ್ ಮಡಿಕೇರಿ ವುಡ್ಸ್, ಭಾರತೀಯ ರೆಡ್‍ಕ್ರಾಸ್ ಸಂಸ್ಥೆ, ರೋಟರಿ ಮಿಸ್ಟಿಹಿಲ್ಸ್, ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾಸ್ಪತ್ರೆ ಮಡಿಕೇರಿ, ಮೇಕೇರಿ ಗ್ರಾಮ ಪಂಚಾಯಿತಿ ಮತ್ತು ಮಡಿಕೇರಿ ಎಸ್‍ಡಿಎಂಸಿ ಸಹಯೋಗದಲ್ಲಿ ನಡೆಯಲಿದೆ. ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 2 ಗಂಟೆಯ ವರೆಗೆ ಮೇಕೇರಿಯ ಸರ್ಕಾರಿ ಹಿರಿಯ ಪ್ರಾಥಾರ್ಮಿಕ ಶಾಲೆಯಲ್ಲಿ ಶಿಬಿರ ನಡೆಯಲಿದ್ದು, ಸಾರ್ವಜನಿಕರು ಹಾಗೂ ರಕ್ತದಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನ ಶಿಬಿರದಲ್ಲಿ ಪಾಲ್ಗೊಳ್ಳವಂತೆ ಸಂಘದ ಪ್ರಮುಖರು ಮನವಿ ಮಾಡಿದ್ದಾರೆ. ಅಲ್ಲದೇ ಶಿಬಿರದಲ್ಲಿ ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆಯಲ್ಲಿ ಅಸಂಘಟಿತ ಕಾರ್ಮಿಕರ ನೋಂದಣಿ ಮತ್ತು ಸ್ಮಾರ್ಟ್ ಕಾರ್ಡ್ ವಿತರಣೆ, ಕರ್ನಾಟಕ ರಾಜ್ಯ ಮೋಟಾರು ಸಾರಿಗೆ ಹಾಗೂ ಇತರೆ ಸಂಬಂಧಿತ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿಯಿಂದ ನೋಂದಣಿ ಮತ್ತು ಸ್ಮಾರ್ಟ್ ಕಾರ್ಡ್ ವಿತರಿಸಲಾಗುವುದೆಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.











