ಚಿತ್ರದುರ್ಗ ಡಿ.25 NEWS DESK : ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಬಳಿ ನಡೆದ ಭೀಕರ ಬಸ್ ಅಪಘಾತದಲ್ಲಿ ಕನಿಷ್ಠ 9 ಮಂದಿ ಸಜೀವ ದಹನವಾಗಿದ್ದಾರೆ. ಈ ದುರಂತದ ಬಗ್ಗೆ ಸಂಪೂರ್ಣ ಮಾಹಿತಿ ಪಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ ಮೃತಪಟ್ಟವರ ಕುಟುಂಬಗಳಿಗೆ ಪರಿಹಾರ ಘೋಷಣೆ ಮಾಡಿದ್ದಾರೆ. ಮೃತಪಟ್ಟವರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಮತ್ತು ಗಾಯಾಳುಗಳಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ಘೋಷಿಸಿದ್ದಾರೆ. :: ಮೃತರ ಕುಟುಂಬಕ್ಕೆ 5 ಲಕ್ಷ ರೂಪಾಯಿ ನೆರವು :: ಅಪಘಾತದ ಬಗ್ಗೆ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಯಿಂದ ಸಂಪೂರ್ಣ ವರದಿ ಪಡೆದ ಬಳಿಕ ಸಿಎಂ ಸಿದ್ದರಾಮಯ್ಯ ಈ ನಿರ್ಧಾರ ಕೈಗೊಂಡಿದ್ದಾರೆ. ರಾಜ್ಯ ಸರ್ಕಾರದಿಂದ ಮೃತರ ಕುಟುಂಬಕ್ಕೆ 5 ಲಕ್ಷ ರೂಪಾಯಿ ನೆರವು ನೀಡಲಾಗುವುದು. :: ಗಾಯಾಳುಗಳಿಗೆ ತಲಾ 50 ಸಾವಿರ ಘೋಷಣೆ :: ಗಾಯಾಳುಗಳ ಸ್ಥಿತಿಯನ್ನು ಗಮನಿಸಿ ರಾಜ್ಯ ಸರ್ಕಾರದಿಂದ ತಲಾ 50 ಸಾವಿರ ರೂಪಾಯಿ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.










