ನಾಪೋಕ್ಲು ಡಿ.26 NEWS DESK : ಆಕ್ಸ್ಫರ್ಡ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಪ್ರತಿಷ್ಠಿತ ಫ್ಯಾಕ್ಸ್ (FACEX) ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿ ಅತ್ಯುತ್ತಮ ಸಾಧನೆ ಮಾಡುವುದರ ಮೂಲಕ ಕೀರ್ತಿ ತಂದಿದ್ದಾರೆ. ಕಕ್ಕಬೆ ಗ್ರಾಮ ಪಂಚಾಯತಿಯ ಕುಂಜಿಲ ಗ್ರಾಮದ ಆಕ್ಸ್ಫರ್ಡ್ ಇಂಗ್ಲಿಷ್ ಮೀಡಿಯಂ ಶಾಲೆಯ ಮೂವರು ವಿದ್ಯಾರ್ಥಿಗಳು ಕೋಝಿಕೋಡ್ನ ಟ್ರೇಡ್ ಸೆಂಟರ್‍ನಲ್ಲಿ ನಡೆದ ಪ್ರತಿಷ್ಠಿತ ಫ್ಯಾಕ್ಸ್ (FACEX) ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿ ಅತ್ಯುತ್ತಮ ಸಾಧನೆ ಮಾಡುವ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾರೆ. ಈ ಸ್ಪರ್ಧೆಯಲ್ಲಿ ರಾಜ್ಯಾದ್ಯಂತ ಸುಮಾರು 2,000 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕಠಿಣವಾದ ಆರಂಭಿಕ ಸುತ್ತುಗಳ ನಂತರ ಕೇವಲ 70 ವಿದ್ಯಾರ್ಥಿಗಳು ಮಾತ್ರ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದರು. ಇವರಲ್ಲಿ ಆಕ್ಸ್ಫರ್ಡ್ ಶಾಲೆಯಲ್ಲಿ ಹತ್ತನೇ ತರಗತಿ ವ್ಯಾಸಂಗ ಮಾಡುತ್ತಿರುವ ಮೂವರು ವಿದ್ಯಾರ್ಥಿನಿಯರಾದ ಹನ್ನತ್ ಅಬ್ದುಲ್ ಅಜೀಜ್, ಆಯಿಷಾ ಕೆ.ಮೊಹಮ್ಮದ್ ಮತ್ತು ಸಫಾ ಕೆ.ಮಜಿದ್ ಫೈನಲಿಸ್ಟ್‍ಗಳಾಗಿ ಹೊರಹೊಮ್ಮಿರುವುದು ವಿಶೇಷ. ಅಂತಿಮ ಹಂತದ ಸ್ಪರ್ಧೆಯಲ್ಲಿ ದೇಶದ ವಿವಿಧ ಭಾಗಗಳ ಪ್ರತಿಭೆಗಳು ಭಾಗವಹಿಸಿದ್ದವು. ಇದರಲ್ಲಿ ಆಕ್ಸ್ಫರ್ಡ್ ಶಾಲೆಯ ವಿದ್ಯಾರ್ಥಿನಿ ಆಯಿಷಾ ಕೆ.ಎಂ ರಾಜ್ಯ ಮಟ್ಟದ ಟಾಪ್ 10 ವಿಜೇತರಲ್ಲಿ ಸ್ಥಾನ ಪಡೆದಿದ್ದಾರೆ. ಇವರು ನಗದು ಬಹುಮಾನದೊಂದಿಗೆ ಪಶ್ಚಿಮ ಬಂಗಾಳದಲ್ಲಿ ನಡೆಯಲಿರುವ ರಾಷ್ಟ್ರ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಸಫಾ ಕೆ.ಎಂ ಇವರು ತಮ್ಮ ಪ್ರತಿಭೆಯ ಮೂಲಕ ರಾಷ್ಟ್ರ ಮಟ್ಟದ ಫೈನಲಿಸ್ಟ್ ಆಗಿ ಸ್ಥಾನ ಗಿಟ್ಟಿಸಿಕೊಂಡಿದ್ಫು ಹನ್ನತ್ ಅಬ್ದುಲ್ ಅಜೀಜ್ ಅತ್ಯುತ್ತಮ ಪ್ರದರ್ಶನ ನೀಡಿದರೂ, ಕೂದಲೆಳೆ ಅಂತರದಲ್ಲಿ ರಾಷ್ಟ್ರ ಮಟ್ಟದ ಅರ್ಹತೆಯನ್ನು ತಪ್ಪಿಸಿಕೊಂಡಿದ್ದಾರೆ. ಇವರ ಸಾಧನೆಗೆ ಆಕ್ಸ್ಫರ್ಡ್ ಶಾಲೆ ಆಡಳಿತ ಮಂಡಳಿ ಹಾಗೂ ಶಾಲೆಯ ಮುಖ್ಯ ಶಿಕ್ಷಕರು ಮತ್ತು ಎಲ್ಲಾ ಶಿಕ್ಷಕ ವೃಂದದವರು ಮುಂದಿನ ರಾಷ್ಟ್ರ ಮಟ್ಟ ದ ಸ್ಪರ್ಧೆಗೆ ಶುಭ ಹಾರೈಸಿದ್ದಾರೆ.
ವರದಿ : ದುಗ್ಗಳ ಸದಾನಂದ











