ಮಡಿಕೇರಿ ಡಿ.26 NEWS DESK : ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ–48ರಲ್ಲಿ ಲಾರಿ ಮತ್ತು ಸ್ಲೀಪರ್ ಕೋಚ್ ಬಸ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಹಲವು ಪ್ರಯಾಣಿಕರು ಸಜೀವ ದಹನಗೊಂಡಿರುವ ಘಟನೆಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಮತ್ತು ಟ್ರಕ್ ನಡುವೆ, ಚಿತ್ರದುರ್ಗದ ಹಿರಿಯೂರು ಬಳಿ ಅಪಘಾತ ಸಂಭವಿಸಿ, ಹಲವು ಪ್ರಯಾಣಿಕರು ಸಜೀವ ದಹನಗೊಂಡಿದ್ದು, ಉಳಿದವರು ಗಾಯಗೊಂಡಿರುವ ಸುದ್ದಿ ತಿಳಿದು ತೀವ್ರ ಆಘಾತವಾಗಿದೆ. ಮೃತಪಟ್ಟವರ ಆತ್ಮಕ್ಕೆ ಶಾಂತಿಯನ್ನು ಕೋರುತ್ತಾ ಅವರ ಕುಟುಂಬ ವರ್ಗದವರಿಗೆ ನನ್ನ ಸಂತಾಪಗಳನ್ನು ತಿಳಿಸುತ್ತೇನೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ ಎಂದು ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ.










