ನವದೆಹಲಿ ಡಿ.26 NEWS DESK : ಕೇಂದ್ರ ರೈಲ್ವೆ ಸಚಿವಾಲಯವು ಡಿಸೆಂಬರ್ 21ರಂದು ಘೋಷಿಸಿದ್ದ ರೈಲು ಟಿಕೆಟ್ ದರ ಏರಿಕೆ ಇಂದಿನಿಂದ (ಶುಕ್ರವಾರ) ಜಾರಿಗೆ ಬಂದಿದೆ. 215 ಕಿಲೋಮೀಟರ್‌ಗಿಂತ ಹೆಚ್ಚು ದೂರದ ಪ್ರಯಾಣಗಳಿಗೆ ಅನ್ವಯವಾಗುವಂತೆ ಈ ಹೊಸ ದರವನ್ನು ಜಾರಿಗೊಳಿಸಲಾಗಿದೆ. ಸಾಮಾನ್ಯ (ಆರ್ಡಿನರಿ) ರೈಲುಗಳಲ್ಲಿ ಪ್ರತಿ ಕಿಲೋಮೀಟರ್‌ಗೆ 1 ಪೈಸೆ, ಹಾಗೂ ಎಸಿ ಮತ್ತು ಎಸಿ ಇಲ್ಲದ ಮೇಲ್ ಮತ್ತು ಎಕ್ಸ್‌ಪ್ರೆಸ್ ರೈಲುಗಳಲ್ಲಿ ಪ್ರತಿ ಕಿಲೋಮೀಟರ್‌ಗೆ 2 ಪೈಸೆಯಷ್ಟು ದರ ಹೆಚ್ಚಳ ಮಾಡಲಾಗಿದೆ. ಈ ದರ ಪರಿಷ್ಕರಣೆ ಅಲ್ಪ ಪ್ರಮಾಣದ ಏರಿಕೆಯಾಗಿದ್ದು, ಸಾಮಾನ್ಯ ಪ್ರಯಾಣಿಕರ ಮೇಲೆ ಅತಿಯಾದ ಹೊರೆ ಆಗದಂತೆ ನೋಡಿಕೊಳ್ಳಲಾಗಿದೆ ಎಂದು ರೈಲ್ವೆ ಸಚಿವಾಲಯ ಸ್ಪಷ್ಟಪಡಿಸಿದೆ.










