ಮಡಿಕೇರಿ ಡಿ.26 NEWS DESK : ಕೊಡಗು ಜಿಲ್ಲಾ ಜೆಡಿಎಸ್ ಪಕ್ಷದ ಅಲ್ಪಸಂಖ್ಯಾತ ಮುಖಂಡರುಗಳ ನಿಯೋಗ ಸಂಸದ ಯದುವೀರ್ ಒಡೆಯರ್ ಅವರನ್ನು ಭೇಟಿ ಮಾಡಿ ವಿವಿಧ ಬೇಡಿಕೆಗಳ ಮನವಿ ಸಲ್ಲಿಸಿದರು. ಮೈಸೂರಿನ ಸಂಸದರ ಕಚೇರಿಯಲ್ಲಿ ಭೇಟಿ ಮಾಡಿದ ಪಕ್ಷದ ಮುಖಂಡರು ಜಿಲ್ಲೆಯ ಅಲ್ಪಸಂಖ್ಯಾತ ಸಮುದಾಯದ ಮಸೀದಿ, ಮದರಸ, ಕಬರ್ ಸ್ಥಾನ ಹಾಗೂ ಸಮುದಾಯದ ಭವನಗಳಿಗೆ ಮೂಲ ಸೌಕರ್ಯ ಒದಗಿಸಲು ಹಾಗೂ ಅಲ್ಪಸಂಖ್ಯಾತ ಸಮುದಾಯದವರು ಹೆಚ್ಚಾಗಿ ವಾಸವಿರುವ ಭಾಗಗಳಿಗೆ ರಸ್ತೆ, ನೀರು ಸೇರಿದಂತೆ ಮೂಲಭೂತ ಸೌಕರ್ಯ ಒದಗಿಸಲು, ವಿಶೇಷ ಯೋಜನೆಯನ್ನು ರೂಪಿಸಲು ಹಾಗೂ ಹೆಚ್ಚಿನ ಅನುದಾನವನ್ನು ಬಿಡುಗಡೆಗೊಳಿಸಲು ಮನವಿ ಮಾಡಿದರು. ನಿಯೋಗದಲ್ಲಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಅಶ್ರಫ್ ಹಾಕತ್ತೂರು, ಕುಶಾಲನಗರ ತಾಲೂಕು ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಶಿಯಾಬುದ್ದೀನ್, ವಿರಾಜಪೇಟೆ ತಾಲೂಕು ಯುವ ಘಟಕದ ಅಧ್ಯಕ್ಷ ಸೈಫುದ್ದೀನ್ ಜಾಮಿಯಾಳ ,ಮೈಸೂರು ಜಿಲ್ಲಾ ಅಲ್ಪಸಂಖ್ಯಾತ ಘಟಕ ಕಾರ್ಯದರ್ಶಿಹಬಿದ್ ಹುಸೈನ್ ಸೇರಿದಂತೆ ಪಕ್ಷದ ಪ್ರಮುಖರು ಹಾಜರಿದ್ದರು.











