ಮಡಿಕೇರಿ ಡಿ.26 NEWS DESK : ಭಾರತ ಕಂಡ ಶ್ರೇಷ್ಠ ಪ್ರಧಾನಿ, ಅಜಾತಶತ್ರು, ಅಟಲ್ ಬಿಹಾರಿ ವಾಜಪೇಯಿ ಅವರ ಗೌರವಾರ್ಥ ಸುಶಾಸನ ದಿನ (ಉತ್ತಮ ಆಡಳಿತ ದಿನ)ದ ಅಂಗವಾಗಿ ಮೇಕೇರಿಯ ಸ್ವಾಗತ ಯುವಕ ಸಂಘ ಹಾಗೂ ವಿವಿಧ ಸಂಘ, ಸಂಸ್ಥೆಗಳ ಸಹಯೋಗದಲ್ಲಿ 14 ನೇ ವರ್ಷದ ಗ್ರಾಮೀಣ ಮಟ್ಟದ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ನಡೆಯಿತು. ಯುವಜನ ವ್ಯವಹಾರ ಹಾಗೂ ಕ್ರೀಡಾ ಸಚಿವಾಲಯ, ಮೈ ಭಾರತ್, ಜಿಲ್ಲಾ ಯುವ ಒಕ್ಕೂಟ, ಮಡಿಕೇರಿ ತಾಲ್ಲೂಕು ಯುವ ಒಕ್ಕೂಟ, ಕೊಡಗು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಡಿಕೇರಿ ಲಯನ್ಸ್ ಕ್ಲಬ್, ರೋಟರಿ ಕ್ಲಬ್ ಆಫ್ ಮಡಿಕೇರಿ ವುಡ್ಸ್, ಭಾರತೀಯ ರೆಡ್‍ಕ್ರಾಸ್ ಸಂಸ್ಥೆ, ರೋಟರಿ ಮಿಸ್ಟಿಹಿಲ್ಸ್, ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾಸ್ಪತ್ರೆ ಮಡಿಕೇರಿ, ಮೇಕೇರಿ ಗ್ರಾಮ ಪಂಚಾಯಿತಿ ಮತ್ತು ಮಡಿಕೇರಿ ಎಸ್‍ಡಿಎಂಸಿ ಸಹಯೋಗದಲ್ಲಿ ಮೇಕೇರಿಯ ಸರ್ಕಾರಿ ಹಿರಿಯ ಪ್ರಾಥಾರ್ಮಿಕ ಶಾಲೆಯಲ್ಲಿ ನಡೆದ ಶಿಬಿರದಲ್ಲಿ ಕೇಂದ್ರ ಸರಕಾರದ ಮೈಭಾರತ್, ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆ,ಕೊಡಗು ಜಿಲ್ಲಾ ಯುವ ಒಕ್ಕೂಟ, ತಾಲ್ಲೂಕು ಯುವ ಒಕ್ಕೂಟ ಮಡಿಕೇರಿ,ರೋಟರಿ ಮಿಸ್ಟಿಹಿಲ್ಸ್ , ರೋಟರಿ ಇನ್ನರ್ ವೀಲ್, ಲಯನ್ಸ್ ಕ್ಲಬ್ ಮಡಿಕೇರಿ,ರೋಟರಿ ಕ್ಲಬ್ ಆಫ್ ಮಡಿಕೇರಿ ವುಡ್ಸ್, ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಕಾರ್ಮಿಕ ಇಲಾಖೆ ಮಡಿಕೇರಿ, ರೋಟರಿ ಸಮುದಾಯದಳ ಮೇಕೇರಿ, ಎಸ್.ಡಿ.ಎಂ.ಸಿ. ಮೇಕೇರಿ ಗ್ರಾಮ ಪಂಚಾಯಿತಿ ಮೇಕೇರಿ, ಜಿಲ್ಲಾಸ್ಪತ್ರೆ ರಕ್ತನಿಧಿ ಕೇಂದ್ರ ಮಡಿಕೇರಿ ಹಾಗೂ ಸ್ವಾಗತ ಯುವಕ ಸಂಘ ಮೇಕೇರಿ ಸಂಯುಕ್ತಾಶ್ರಯದಲ್ಲಿಂದು ಕೇಂದ್ರ ಸರ್ಕಾರದ ಸುಶಾಸನ ದಿನ ದ ಪ್ರಯುಕ್ತ 14 ನೇ ವರ್ಷದ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ನಡೆಯಿತು. ಕಾರ್ಯಕ್ರಮದಲ್ಲಿ ಮಡಿಕೇರಿ ರಕ್ತನಿಧಿ ಕೇಂದ್ರದ ವೈದ್ಯಾಧಿಕಾರಿ ಡಾ.ಕರುಂಬಯ್ಯ ರಕ್ತದಾನದ ಮಹತ್ವದ ಬಗ್ಗೆ ಮಾಹಿತಿ ನೀಡಿದರು. ಕಾರ್ಮಿಕ ಇಲಾಖೆಯಿಂದ ಕಾರ್ಮಿಕರಿಗೆ ದೊರೆಯುವ ವಿವಿಧ ಸವಲತ್ತುಗಳ ಬಗ್ಗೆ ಇಲಾಖಾ ಸಿಬ್ಬಂಧಿಗಳು ಮಾಹಿತಿ ನೀಡಿದರು. ಬಿಜೆಪಿ ಮಹಿಳಾ ಮೋರ್ಚಾದ ಜಿಲ್ಲಾಧ್ಯಕ್ಷೆ ಅನಿತಾ ಪೂವಯ್ಯ ಮಾತನಾಡಿ, ಈ ದೇಶದ ಮಾಜಿ ಪ್ರಧಾನಿಗಳು ಅಜಾತಶತ್ರು ಅಟಲ್ ಬಿಹಾರಿ ವಾಜಪೇಯಿಯವರ ಜನ್ಮದಿನದ ಪ್ರಯುಕ್ತ ಕೇಂದ್ರ ಸರ್ಕಾರವು ಸುಶಾಸನ ದಿನ(ಉತ್ತಮ ಆಡಳಿತ ದಿನ)ವೆಂದು ಘೋಷಿಸಿದ್ದು, ದೇಶದ ಅಭಿವೃದ್ಧಿಗೆ ವಾಜಪೇಯಿಯವರು ನೀಡೀರುವ ಕೊಡುಗೆ ಅಪಾರವಾಗಿದೆ ಎಂದು ಹೇಳಿದರು. ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ರವೀಂದ್ರ ರೈ ಹಾಗೂ ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷ ಸುಕುಮಾರ್ ಯುವಕ ಸಂಘದ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ರೋಟರಿ ಮಿಸ್ಟಿಹಿಲ್ಸ್ ಅಧ್ಯಕ್ಷ ರತ್ನಾಕರ ರೈ, ಲಯನ್ಸ್ ಕ್ಲಬ್ ಅಧ್ಯಕ್ಷ ಮದನ್ ಮುದ್ದಯ್ಯ, ಇನ್ನರ್ ವೀಲ್ ನ ಲಲಿತಾ ರಾಘವನ್ , ಧರ್ಮಸ್ಥಳ ಸ್ವಸಹಾಯ ಸಂಘಗಳ ಒಕ್ಕೂಟದ ಅಧ್ಯಕ್ಷೆ ನಳಿನಿ ಸೇರಿದಂತೆ ಪ್ರಮುಖರು ಭಾಗವಹಿಸಿದ್ದರು. ಶಿಬಿರದಲ್ಲಿ ಒಟ್ಟು 59 ರಕ್ತದಾನಿಗಳು ರಕ್ತದಾನ ಮಾಡಿದರು.











