ಮಡಿಕೇರಿ ಡಿ.26 NEWS DESK : ಮೈಸೂರಿನಲ್ಲಿರುವ ಎಂ.ಸಿ.ಪಿ.ಸಿ.ಎಸ್ ಸಂಘದ ಆಡಳಿತ ಮಂಡಳಿಯ ಮಾಹಿತಿ ಇರುವ ವರದಿಯನ್ನು ಬೆಂಗಳೂರಿನ ವಿಧಾನಸೌಧದ ಕಚೇರಿಯಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಸಂಘದ ಮತ್ತು ಅಧ್ಯಕ್ಷ ಎ.ಎಸ್.ಪೊನ್ನಣ್ಣ ಅವರಿಗೆ ನೀಡಲಾಯಿತು. ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರಿಂದ ವರದಿಯನ್ನು ಸ್ವೀಕರಿಸಿ ಅದನ್ನು ಕುಲಂಕುಶಲವಾಗಿ ಪರಿಶೀಲಿಸಲಾಗುವುದು ಎಂದು ಹೇಳಿದರು.











