Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಎಚ್1-ಎನ್1 : ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸೂಚನೆ*
  • *ಅರೆಭಾಷೆಗೆ ಸಾಂಸ್ಕೃತಿಕ ನೆಲೆಗಟ್ಟು, ವ್ಯಾಕರಣದ ಶಿಸ್ತು ರೂಢಿಸಿದವರು ಕೋಡಿ ಕುಶಾಲಪ್ಪ ಗೌಡರು : ಸದಾನಂದ ಮಾವಜಿ*
  • *ಅಂತರ ಶಾಲಾ ಶಟಲ್ ಬ್ಯಾಡ್ಮಿಂಟನ್: ಶ್ರೀ ರಾಜರಾಜೇಶ್ವರಿ ಶಾಲೆ ವಿದ್ಯಾರ್ಥಿಗಳ ಸಾಧನೆ*
  • ಕೊಡಗಿನಲ್ಲಿ ಕರವೇ ಸ್ವಾಭಿಮಾನಿ ಸೇನೆಗೆ ನೂತನ ಸದಸ್ಯರ ಸೇರ್ಪಡೆ
  • *ತೀವ್ರಗೊಳಿಸಿದ ಐಇಸಿ ಅಭಿಯಾನ : ಮ್ಯಾರಥಾನ್ ಮೂಲಕ ಎಚ್‌ಐವಿ/ಏಡ್ಸ್ ಜಾಗೃತಿ*
  • *ಮಡಿಕೇರಿಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ : ಸ್ವಾವಲಂಬಿ ಮಹಿಳಾ ಫಲಾನುಭವಿಗಳ ಗುರುತಿಸಿ ಸನ್ಮಾನಕ್ಕೆ ಕ್ರಮ*
  • *ಶಿಸ್ತುಬದ್ಧ ಶಿಕ್ಷಣದಿಂದಲೇ ಸಮಾಜದ ಯಶಸ್ಸು, ದೇಶದ ಪ್ರಗತಿ : ಶಾಸಕ ಎ.ಎಸ್.ಪೊನ್ನಣ್ಣ*
  • *ಫೀ.ಮಾ. ಕಾರ್ಯಪ್ಪ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ: ಶಿಸ್ತುಬದ್ಧ ಜೀವನವೇ ಸಾಧನೆಯ ದಾರಿದೀಪ: ಕರ್ನಲ್ ಸಂಜೀವ್ ಕುಮಾರ್*
  • *ಕೊಡಗು ವಿದ್ಯಾಲಯದಲ್ಲಿ ಬ್ರಹ್ಮಗಿರಿ ಸಹೋದಯ ಸಿಬಿಎಸ್ಇ ಶಾಲೆಗಳ ಸಾಂಸ್ಕೃತಿಕ ಸ್ಪರ್ಧೆ*
  • *ಮಡಿಕೇರಿ ನಗರಸಭೆ : ತ್ಯಾಜ್ಯ ನಿರ್ವಹಣೆಗೆ ವೈಜ್ಞಾನಿಕ ವಿಧಾನಕ್ಕೆ ಒತ್ತು : ಶಾಸಕ ಮಂತರ್ ಗೌಡ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಜಮ್ಮಾ ವಿಧೇಯಕ ಅಂಗೀಕಾರ : ಮಡಿಕೇರಿಯಲ್ಲಿ ಶಾಸಕ ಡಾ.ಮಂತರ್ ಗೌಡ ಅವರಿಗೆ ಅಭಿನಂದನೆ* 
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಜಮ್ಮಾ ವಿಧೇಯಕ ಅಂಗೀಕಾರ : ಮಡಿಕೇರಿಯಲ್ಲಿ ಶಾಸಕ ಡಾ.ಮಂತರ್ ಗೌಡ ಅವರಿಗೆ ಅಭಿನಂದನೆ* 

ಡಿಸೆಂಬರ್ 27, 20253 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಡಿ.27 NEWS DESK : ಹಲವು ದಶಕಗಳಿಂದ ಸಮಸ್ಯೆಯಾಗಿ ಉಳಿದಿದ್ದ ಕೊಡಗಿನ ಜಮ್ಮಾ ಭೂಮಿಗೆ  ಶಾಶ್ವತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಕರ್ನಾಟಕ ಭೂ ಕಂದಾಯ ಕಾಯ್ದೆಗೆ ತಿದ್ದುಪಡಿ ವಿದೇಯಕವನ್ನು ಸದನದಲ್ಲಿ ಮಂಡಿಸಿ ಕಾಯ್ದೆ ರೂಪಕ್ಕೆ ಜಾರಿಗೊಳಿಸುವಲ್ಲಿ ಶ್ರಮಿಸಿದ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್‍ಗೌಡ ಅವರನ್ನು ಶುಕ್ರವಾರ ಅಭಿನಂದಿಸಲಾಯಿತು.  ನಗರದ ಲಯನ್ಸ್ ಸಂಸ್ಥೆ ಸಭಾಂಗಣದಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ಶಾಸಕರಾದ ಡಾ.ಮಂತರ್ ಗೌಡ ಅವರಿಗೆ ಜಿಲ್ಲೆಯ ವಿವಿಧ ಸಂಘಟನೆಗಳು ಹಾಗೂ ಅಭಿಮಾನಿಗಳು ಶಾಲೂ, ಫಲ ತಾಂಬೂಲ, ನೀಡಿ ಗೌರವಿಸಿ, ಸನ್ಮಾನಿಸಿದರು.   ಸನ್ಮಾನ ಸ್ವೀಕರಿಸಿ ಮಾತನಾಡಿದ ಡಾ.ಮಂತರ್ ಗೌಡ ಅವರು ಕೊಡಗು ಜಿಲ್ಲೆಯ ಕೃಷಿಕರಲ್ಲಿ ನೂರಾರು ವರ್ಷಗಳಲ್ಲಿ ಕಾಡಿದ್ದ ಜಮ್ಮಾ ಬಾಣೆ ಸಮಸ್ಯೆಯನ್ನು ಒಂದು ತಾರ್ಕಿಕ ಹಂತಕ್ಕೆ ಕೊಂಡೊಯ್ಯುವಲ್ಲಿ ಪ್ರಯತ್ನಿಸಲಾಗಿದೆ ಎಂದು ಹೇಳಿದರು.  ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರನ್ನು ಸದಾ ಸ್ಮರಿಸಬೇಕು. ಆ ನಿಟ್ಟಿನಲ್ಲಿ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಅವರ ನಿರಂತರ ಪ್ರಯತ್ನ ಹಾಗೂ ಕಂದಾಯ ಸಚಿವರ ನೇತೃತ್ವದಲ್ಲಿ ಈ ಸಂಬಂಧ ಹಲವು ಬಾರಿ ಸಭೆ ನಡೆಸಿ ಸದನಕ್ಕೆ ಮಂಡಿಸುವ ಮೂಲಕ ಜಮ್ಮಾ ಬಾಣೆ ಸಮಸ್ಯೆಯನ್ನು ಕಾಯ್ದೆರೂಪಕ್ಕೆ ಜಾರಿಗೊಳಿಸುವಲ್ಲಿ ಪ್ರಯತ್ನಿಸಲಾಗಿದೆ ಎಂದು ಡಾ.ಮಂತರ್ ಗೌಡ ಅವರು ವಿವರಿಸಿದರು. ಕೊಡಗು ಜಿಲ್ಲೆಯ ಕೃಷಿಕರ ಅನುಕೂಲಕ್ಕಾಗಿ ಜಮ್ಮಾ ಬಾಣೆ ಸಮಸ್ಯೆಯನ್ನು ಇತ್ಯರ್ಥಪಡಿಸಲು ಶ್ರಮಿಸಲಾಗಿದೆ. ಕೃಷಿಕರು ಸಹಕಾರ ಸಂಘದಲ್ಲಿ ಅಥವಾ ಬ್ಯಾಂಕ್‍ಗಳಲ್ಲಿ ಸಾಲ ಸೌಲಭ್ಯ ಪಡೆಯಲು, ಬೆಳೆ ವಿಮೆ, ಬೆಳೆ ಹಾನಿ ಮತ್ತಿತರ ಸರ್ಕಾರದ ಸೌಲಭ್ಯ ಪಡೆಯಲು ಆಯಾಯ ತೋಟದ ಮಾಲೀಕರಿಗೆ ಆರ್‍ಟಿಸಿ ಮಾಡಿಕೊಡಲು ಈ ಕಾಯ್ದೆ ಅನುಕೂಲವಾಗಲಿದೆ ಎಂದು ಹೇಳಿದರು. ಕೊಡಗು ಜಿಲ್ಲೆಯಲ್ಲಿ ಪಟ್ಟೆದಾರರ ಹೆಸರಿನಲ್ಲಿ ಭೂಮಿ ಇದೆ. ಆದರೆ ಅವರ ಕುಟುಂಬದವರು ತೋಟವನ್ನು ಅನುಭವಿಸಿಕೊಂಡು ಬರುತ್ತಾರೆ. ಆದರೆ ಆರ್‍ಟಿಸಿ ಇಲ್ಲದೆ ಸೌಲಭ್ಯ ಪಡೆಯುವುದು ಕಷ್ಟವಾಗಿದೆ. ಜಮ್ಮಾಬಾಣೆ ಕಾಯ್ದೆ ತಿದ್ದುಪಡಿಯಿಂದ ಸರ್ಕಾರದ ಸೌಲಭ್ಯ ಪಡೆಯಲು ಸಹಕಾರಿಯಾಗಲಿದೆ. ಸ್ವತಂತ್ರ ಭೂಮಿ ಹಕ್ಕು ಪಡೆಯಲು ಅನುಕೂಲವಾಗಲಿದೆ ಎಂದು ಹೇಳಿದರು.  ಪ್ರತಿಯೊಂದು ಕ್ಷೇತ್ರದಲ್ಲೂ ಸಹ ಒಳಿತು ಕೆಡುಕು ಇರುತ್ತದೆ. ಆದರೆ ಭೂಮಿ ಮಾರಿಕೊಳ್ಳದೆ ಭೂಮಿಯನ್ನು ಉಳಿಸಿಕೊಳ್ಳಬೇಕು. ಪ್ರತಿ ಕ್ಷೇತ್ರದಲ್ಲೂ ಕೆಲವು ಲೋಪದೋಷಗಳು ಇದ್ದು, ಅದನ್ನು ಸರಿಪಡಿಸಲು ಮುಂದಾಗಲಾಗಿದೆ. ಇದರಿಂದ ಸಣ್ಣ ಕೃಷಿಕರಿಗೆ ಅನುಕೂಲವಾಗಿದೆ ಎಂದರು. ಭೂ ಕಾಯ್ದೆ ತಿದ್ದುಪಡಿಯಲ್ಲಿ ವಿಧಾನಸಭೆ ಮತ್ತು ವಿಧಾನ ಪರಿಷತ್ತಿನಲ್ಲಿ ಆಡಳಿತ ಮತ್ತು ವಿರೋಧ ಪಕ್ಷಗಳು ಪಕ್ಷಾತೀತವಾಗಿ ಎಲ್ಲರೂ ಸಹಕರಿಸಿದ್ದಾರೆ ಎಂದು ಡಾ.ಮಂತರ್ ಗೌಡ ಅವರು ಸ್ಮರಿಸಿದರು.  ‘ಕೊಡಗು ಜಿಲ್ಲೆಯಲ್ಲಿ ಜಮ್ಮಾ ಭೂಮಿಗೆ ಸಂಬಂಧಿಸಿದಂತೆ ಎಷ್ಟೋ ವರ್ಷಗಳಿಂದ ಸರ್ವೇ ಕಾರ್ಯ ಆಗಿಲ್ಲ. ಆದ್ದರಿಂದ ಮರು ಸರ್ವೆ ಮಾಡಿ ಗಡಿಯನ್ನು ಗುರುತಿಸುವುದು ಅತ್ಯಗತ್ಯ ಎಂದು ಡಾ.ಮಂತರ್‍ಗೌಡ ಅವರು ಅಭಿಪ್ರಾಯ ವ್ಯಕ್ತಪಡಿಸಿದರು.’ ಜೊತೆಗೆ ಸಿ ಮತ್ತು ಡಿ ಭೂಮಿಯ ಸಮಸ್ಯೆಯನ್ನು ಸಹ ಪರಿಹರಿಸಲು ಪ್ರಯತ್ನಿಸಲಾಗುವುದು. ರೈತರ ಪರವಾಗಿ ಸದಾ ಕೆಲಸ ಮಾಡಲು ಸಿದ್ದವಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಕಂದಾಯ ಸಚಿವರಾದ ಕೃಷ್ಣ ಬೈರೇಗೌಡರು ಹೀಗೆ ಎಲ್ಲರ ಸಹಕಾರದಿಂದ ನಾವು ರೈತರ ಜೊತೆಗಿದ್ದೇವೆ ಎಂದರು. ಶಾಸಕಾಂಗದ ಮೂಲಕ ಕಾಯ್ದೆ, ಕಾನೂನನ್ನು ಜಾರಿಗೊಳಿಸಲಾಗುತ್ತದೆ. ಆ ನಿಟ್ಟಿನಲ್ಲಿ ಅಧಿಕಾರಿಗಳು ಪಾಲಿಸುವುದು ಅತೀ ಮುಖ್ಯ ಎಂದರು. ಪ್ರಮುಖರಾದ ಟಿ.ಪಿ.ರಮೇಶ್ ಅವರು ಮಾತನಾಡಿ ರಾಜ್ಯದಲ್ಲಿ ಜಾರಿಗೊಂಡ ಏಕರೂಪ ಭೂ ಕಾಯ್ದೆ ಕೊಡಗು ಜಿಲ್ಲೆಯಲ್ಲಿ ಜಾರಿಗೊಂಡಿರಲಿಲ್ಲ. ಹಾಗಾಗಿ ಸಮಸ್ಯೆಯಾಗಿ ಉಳಿದಿತ್ತು ಎಂದು ಸ್ಮರಿಸಿದರು. ಕೊಡಗು ಜಮ್ಮಾ ಹಿಡುವಳಿದಾರರಿಗೆ ನ್ಯಾಯ ಒದಗಿಸುವಲ್ಲಿ ಸರ್ಕಾರ ಮುಂದಾಗಿದೆ. ಆ ನಿಟ್ಟಿನಲ್ಲಿ ಕೊಡಗು ಜಿಲ್ಲೆಯ ಕೃಷಿಕರಿಗೆ ಅನುಕೂಲವಾಗುವಲ್ಲಿ ಜಿಲ್ಲೆಯ ಶಾಸಕರು ದೊಡ್ಡ ಕಾಣಿಕೆ ನೀಡಿದ್ದು, ಹೊಸ ಚೈತನ್ಯ ತುಂಬಿದ್ದಾರೆ ಎಂದು ಹೇಳಿದರು. ವಕೀಲರಾದ ಎಂ.ಎ.ನಿರಂಜನ ಅವರು ಮಾತನಾಡಿ ಜಮ್ಮಾ ಭೂಮಿ ಇಂದಿಗೂ ಸಹ ಕುಟುಂಬದ ಪಟ್ಟೆದಾರರ ಹೆಸರಿನಲ್ಲಿದೆ. ಬಹಳ ಕಾಲದಿಂದಲೂ ಜಟಿಲವಾಗಿದ್ದ ಸಮಸ್ಯೆಯನ್ನು ಪರಿಹರಿಸುವಲ್ಲಿ ಶಾಸಕರು ಶ್ರಮಿಸಿದ್ದಾರೆ ಎಂದರು.  ‘ಜಮ್ಮಾ ಬಾಣೆ ಭೂಮಿ ಸಂಬಂಧ ಹೊಸ ಕಾಯ್ದೆ ಅನುಷ್ಠಾನಗೊಳಿಸುವಲ್ಲಿ ಕೆಎಎಸ್ ದರ್ಜೆಯ ವಿಶೇಷ ಕಂದಾಯ ಅಧಿಕಾರಿಯನ್ನು ನಿಯೋಜಿಸುವಂತಾಗಬೇಕು ಎಂದು ಎಂ.ಎ.ನಿರಂಜನ ಅವರು ಸಲಹೆ ಮಾಡಿದರು.’ ‘ಭೂ ಮಾಲೀಕತ್ವದ ಸಂಬಂಧ ಭೂಮಿ ಅನುಭವಿಸುತ್ತಿರುವ ಕುಟುಂಬಗಳು ಪಾಲು ಮಾಡಿಕೊಳ್ಳಬಹುದು. ಆದರೆ ಮಾಲೀಕತ್ವ ಎಂದು ಹೇಳಲು ಬರುವುದಿಲ್ಲ. ಆದ್ದರಿಂದ ಈ ಬಗ್ಗೆ ಚರ್ಚೆ ನಡೆಯಬೇಕು ಎಂದು ಸಲಹೆ ಮಾಡಿದರು.’ ಕೊಡಗು ಗೌಡ ಸಮಾಜಗಳ ಒಕ್ಕೂಟದ ಉಪಾಧ್ಯಕ್ಷರಾದ ತೇನನ ರಾಜೇಶ್ ಅವರು ಮಾತನಾಡಿ ಕರ್ನಾಟಕ ಭೂ ಕಂದಾಯ ಕಾಯ್ದೆ ತಿದ್ದುಪಡಿ ವಿದೇಯಕ ಜಾರಿಗೊಳಿಸುವಲ್ಲಿ ಶಾಸಕರು ಶ್ರಮಿಸಿರುವುದು ಶ್ಲಾಘನೀಯ ಕಾರ್ಯವಾಗಿದೆ. ಇದರಿಂದ ಸಣ್ಣ ಸಣ್ಣ ಕೃಷಿಕರಿಗೆ ಅನುಕೂಲವಾಗಲಿದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು. ಪ್ರಮುಖರಾದ ತೆನ್ನಿರಾ ಮೈನಾ ಅವರು ಮಾತನಾಡಿ ಕೊಡಗಿನ ಜ್ವಲಂತ ಸಮಸ್ಯೆಯನ್ನು ಪರಿಹರಿಸುವಲ್ಲಿ ಶಾಸಕದ್ವಯರು ಶ್ರಮಿಸಿದ್ದಾರೆ. ನೂರಾರು ವರ್ಷಗಳ ಸಮಸ್ಯೆಯನ್ನು ಬಗೆಹರಿಸುವಲ್ಲಿ ಪ್ರಯತ್ನಿಸಿದ್ದಾರೆ ಎಂದರು. ಪ್ರಮುಖರಾದ ಚುಮ್ಮಿ ದೇವಯ್ಯ ಅವರು ಮಾತನಾಡಿ ತೋಟದ ಮಾಲೀಕರ ಹೆಸರಿಗೆ ಕಂದಾಯ ನಿಗಧಿಯಾಗಬೇಕು. ಆ ನಿಟ್ಟಿನಲ್ಲಿ ಈ ಕಾಯ್ದೆ ಜಾರಿಗೊಳಿಸಿರುವುದು ಸಹಕಾರಿಯಾಗಿದೆ ಎಂದರು.  ಕೂರ್ಗ್ ಪ್ಲಾಂಟೇಶನ್ ಅಸೋಷಿಯೇಷನ್‍ನ ನಂದ ಬೆಳ್ಯಪ್ಪ ಅವರು ಮಾತನಾಡಿ ಕರ್ನಾಟಕ ಭೂ ಕಂದಾಯ ಜಾರಿಗೊಳಿಸಿರುವುದರಿಂದ ಕೊಡಗು ಜಿಲ್ಲೆಯ ಕೃಷಿಕರಿಗೆ ಅನುಕೂಲವಾಗಿದೆ. ಹಲವು ವರ್ಷಗಳ ಸಮಸ್ಯೆ ಪರಿಹಾರ ಕಂಡುಕೊಳ್ಳುವಲ್ಲಿ ಪ್ರಯತ್ನಿಸಿರುವುದು ಶ್ಲಾಘನೀಯ ಎಂದರು. ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಜೇಶ್ ಯಲ್ಲಪ್ಪ, ಪ್ರಮುಖರಾದ ಜಿ.ಚಿದ್ವಿಲಾಸ್, ಪ್ರಕಾಶ್ ಆಚಾರ್ಯ, ಹಂಸ, ಮಡಿಕೇರಿ ಕೊಡವ ಸಮಾಜದ ಉಪಾಧ್ಯಕ್ಷರಾದ ಕೆ.ಎ.ದೇವಯ್ಯ, ಅಂಬೆಕಲ್ಲು ನವೀನ್, ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಅಭಿಮಾನಿಗಳು ಇತರರು ಇದ್ದರು.

 

 

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಎಚ್1-ಎನ್1 : ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸೂಚನೆ*

ಆಗಷ್ಟ್ 29, 2026

*ಅರೆಭಾಷೆಗೆ ಸಾಂಸ್ಕೃತಿಕ ನೆಲೆಗಟ್ಟು, ವ್ಯಾಕರಣದ ಶಿಸ್ತು ರೂಢಿಸಿದವರು ಕೋಡಿ ಕುಶಾಲಪ್ಪ ಗೌಡರು : ಸದಾನಂದ ಮಾವಜಿ*

ಆಗಷ್ಟ್ 29, 2026

*ಅಂತರ ಶಾಲಾ ಶಟಲ್ ಬ್ಯಾಡ್ಮಿಂಟನ್: ಶ್ರೀ ರಾಜರಾಜೇಶ್ವರಿ ಶಾಲೆ ವಿದ್ಯಾರ್ಥಿಗಳ ಸಾಧನೆ*

ಆಗಷ್ಟ್ 29, 2026

*ಅರೆಭಾಷೆಗೆ ಸಾಂಸ್ಕೃತಿಕ ನೆಲೆಗಟ್ಟು, ವ್ಯಾಕರಣದ ಶಿಸ್ತು ರೂಢಿಸಿದವರು ಕೋಡಿ ಕುಶಾಲಪ್ಪ ಗೌಡರು : ಸದಾನಂದ ಮಾವಜಿ*

ಆಗಷ್ಟ್ 29, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, ಆ.29 NEWS DESK : ಅರೆಭಾಷೆಗೆ ಸಾಂಸ್ಕೃತಿಕ ನೆಲೆಗಟ್ಟನ್ನು ಹಾಕಿಕೊಟ್ಟು, ವ್ಯಾಕರಣದ ಶಿಸ್ತನ್ನು ರೂಢಿಸಿದವರು ಭಾಷಾ ವಿಜ್ಞಾನಿ ಡಾ.…

*ಅಂತರ ಶಾಲಾ ಶಟಲ್ ಬ್ಯಾಡ್ಮಿಂಟನ್: ಶ್ರೀ ರಾಜರಾಜೇಶ್ವರಿ ಶಾಲೆ ವಿದ್ಯಾರ್ಥಿಗಳ ಸಾಧನೆ*

ಆಗಷ್ಟ್ 29, 2026

ಕೊಡಗಿನಲ್ಲಿ ಕರವೇ ಸ್ವಾಭಿಮಾನಿ ಸೇನೆಗೆ ನೂತನ ಸದಸ್ಯರ ಸೇರ್ಪಡೆ

ಆಗಷ್ಟ್ 29, 2026

*ತೀವ್ರಗೊಳಿಸಿದ ಐಇಸಿ ಅಭಿಯಾನ : ಮ್ಯಾರಥಾನ್ ಮೂಲಕ ಎಚ್‌ಐವಿ/ಏಡ್ಸ್ ಜಾಗೃತಿ*

ಆಗಷ್ಟ್ 29, 2026

*ಮಡಿಕೇರಿಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ : ಸ್ವಾವಲಂಬಿ ಮಹಿಳಾ ಫಲಾನುಭವಿಗಳ ಗುರುತಿಸಿ ಸನ್ಮಾನಕ್ಕೆ ಕ್ರಮ*

ಆಗಷ್ಟ್ 29, 2026

*ಶಿಸ್ತುಬದ್ಧ ಶಿಕ್ಷಣದಿಂದಲೇ ಸಮಾಜದ ಯಶಸ್ಸು, ದೇಶದ ಪ್ರಗತಿ : ಶಾಸಕ ಎ.ಎಸ್.ಪೊನ್ನಣ್ಣ*

ಆಗಷ್ಟ್ 29, 2026

*ಫೀ.ಮಾ. ಕಾರ್ಯಪ್ಪ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ: ಶಿಸ್ತುಬದ್ಧ ಜೀವನವೇ ಸಾಧನೆಯ ದಾರಿದೀಪ: ಕರ್ನಲ್ ಸಂಜೀವ್ ಕುಮಾರ್*

ಆಗಷ್ಟ್ 29, 2026

*ಕೊಡಗು ವಿದ್ಯಾಲಯದಲ್ಲಿ ಬ್ರಹ್ಮಗಿರಿ ಸಹೋದಯ ಸಿಬಿಎಸ್ಇ ಶಾಲೆಗಳ ಸಾಂಸ್ಕೃತಿಕ ಸ್ಪರ್ಧೆ*

ಆಗಷ್ಟ್ 29, 2026

*ಮಡಿಕೇರಿ ನಗರಸಭೆ : ತ್ಯಾಜ್ಯ ನಿರ್ವಹಣೆಗೆ ವೈಜ್ಞಾನಿಕ ವಿಧಾನಕ್ಕೆ ಒತ್ತು : ಶಾಸಕ ಮಂತರ್ ಗೌಡ*

ಆಗಷ್ಟ್ 29, 2026

*ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಕುಂದುಕೊರತೆ ಸಭೆ : ಪರಿಶಿಷ್ಟರ ಸಮಸ್ಯೆಗಳನ್ನು ಕಾಲಮಿತಿಯಲ್ಲಿ ಪರಿಹರಿಸುವುದು ಆದ್ಯ ಕೆಲಸವಾಗಿದೆ : ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ*

ಆಗಷ್ಟ್ 29, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.