ಮಡಿಕೇರಿ ಡಿ.27 NEWS DESK : ಮಡಿಕೇರಿ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಕ್ಕೆ ಸಮಾಜದ ನಿರ್ದೇಶಕರಾದ ಕಾಳಚಂಡ ಅಪ್ಪಣ್ಣ ಅವರನ್ನು ಮಡಿಕೇರಿ ಕೊಡವ ಸಮಾಜದ ವತಿಯಿಂದ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಕೊಡವ ಸಮಾಜದ ಅಧ್ಯಕ್ಷರಾದ ಮಂಡುವಂಡ ಪಿ.ಮುತ್ತಪ್ಪ, ಉಪಾದ್ಯಕ್ಷರಾದ ಕೇಕಡ ವಿಜು ದೇವಯ್ಯ, ಗೌರವ ಕಾರ್ಯದರ್ಶಿ ಬೊಪ್ಪಂಡ ಸರಳ ಕರುಂಬಯ್ಯ, ಜಂಟಿಕಾರ್ಯದರ್ಶಿ ನಂದಿನೆರವಂಡ ದಿನೇಶ್, ನಿರ್ದೇಶಕರಾದ ಶಾಂತೆಯಂಡ ವಿಶಾಲ್ ಕಾರ್ಯಪ್ಪ, ಮಂಡೀರ ಸದಾಮುದ್ದಪ್ಪ, ಕಾಳಚಂಡ ಅಪ್ಪಣ್ಣ, ಮೂವೆರ ಜಯರಾಂ, ಪುತ್ತರಿರ ಕರುಣ್ ಕಾಳಯ್ಯ, ನಂದಿನೆವಂಡ ರವಿ ಬಸಪ್ಪ, ಕನ್ನಂಡ ಕವಿತ ಕಾವೇರಮ್ಮ, ಕಾಂಡೇರ ಲಲ್ಲು , ಪಾಲೆಯಂಡ ರೂಪ, ಪುಲ್ಲೆರ ವಸಂತ್ ಹಾಗೂ ವ್ಯವಸ್ಥಾಪಕಿ ಭೋಜಮ್ಮ ಹಾಜರಿದ್ದರು.











