
ಮಡಿಕೇರಿ ಡಿ.27 NEWS DESK : ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಎಲ್ಲಾ ನ್ಯಾಯಾಲಯಗಳಲ್ಲಿರುವ ರಾಜಿಯಾಗುವಂತಹ ಬಾಕಿ ಪ್ರಕರಣಗಳನ್ನು ಮಧ್ಯಸ್ಥಿಕೆಗಾರಿಕೆಯ ಮೂಲಕ ಇತ್ಯರ್ಥಪಡಿಸಲು ಮುಖ್ಯ ನ್ಯಾಯಮೂರ್ತಿಗಳು ಸರ್ವೋಚ್ಚ ನ್ಯಾಯಾಲಯರವರು ದೇಶಾದಾದ್ಯಂತ ಜ.2 ರಿಂದ 90 ದಿನಗಳ ವಿಶೇಷ ಮಧ್ಯಸ್ಥಗಾರಿಕಾ ಅಭಿಯಾನ 2.0 ಮಧ್ಯಸ್ಥಿಕೆ ರಾಷ್ಟ್ರಕ್ಕಾಗಿ 90 ದಿನಗಳ ಮಧ್ಯಸ್ಥಿಕೆ ಎಂಬ ಅಭಿಯಾನಕ್ಕೆ ಚಾಲನೆ ನೀಡಿರುತ್ತಾರೆ. ಅದರಂತೆ ಜಿಲ್ಲೆಯ ನ್ಯಾಯಾಲದಯಲ್ಲಿರುವ ರಾಜಿಯಾಗುವಂತಹ ಪ್ರಕರಣಗಳನ್ನು ಮಧ್ಯಸ್ಥಿಕೆಯ ಮೂಲಕ ಇತ್ಯರ್ಥಪಡಿಸುತ್ತಿದ್ದು. ಕಕ್ಷಿದಾರರು ಈ 90 ದಿನಗಳ ವಿಶೇóಷ ಅಭಿಯಾನದ ಸದುಪಯೋಗ ಪಡಿಸಿಕೊಳ್ಳುವಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರು, ಪ್ರಭಾರ ಸದಸ್ಯ ಕಾರ್ಯದರ್ಶಿ ಅವರು ತಿಳಿಸಿದ್ದಾರೆ.










