ಮಡಿಕೇರಿ ಡಿ.27 NEWSDESK : ಜಿಲ್ಲೆಯ ಅಮ್ಮತ್ತಿ ಕಾರ್ಮಾಡು ಗ್ರಾಮ ಪಂಚಾಯತಿ ವ್ಯಾಪ್ತಿಯ ಎಸ್‌ಸಿ-ಎಸ್‌ಟಿ ಸಮುದಾಯದ ವಸತಿ ನಿರಾಶ್ರಿತರಿಗೆ ಸೂರು ಕಲ್ಪಿಸಿ ಕೊಡುವಂತೆ ಕೊಡಗು ಜಿಲ್ಲಾ ಜೆಡಿಎಸ್ ಪಕ್ಷದ ಎಸ್‌ಸಿ, ಎಸ್‌ಟಿ ಘಟಕದ ಮುಖಂಡರುಗಳ ನಿಯೋಗ ಸಂಸದ ಯದುವೀರ್ ಒಡಯರ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. ಘಟಕದ ಜಿಲ್ಲಾಧ್ಯಕ್ಷೆ ಜಯಮ್ಮ ಅಮ್ಮತ್ತಿ ಅವರ ನೇತೃತ್ವದಲ್ಲಿ ಸಂಸದರನ್ನು ಭೇಟಿಯಾಗಿ ಬೇಡಿಕೆಯ ಈಡೇರಿಕೆಗೆ ಕ್ರಮ ಕೈಗೊಳ್ಳುವಂತೆ ಮನವಿ ಪತ್ರ ಸಲ್ಲಿಸಲಾಯಿತು. ನಿಯೋಗದಲ್ಲಿ ಕೊಡಗು ಜಿಲ್ಲಾ ಜೆಡಿಎಸ್ ಸಾಮಾಜಿಕ ಜಾಲತಾಣ ಉಪಾಧ್ಯಕ್ಷ ಶಿಯಾಬುದ್ದೀನ್, ಮಡಿಕೇರಿ ಅಲ್ಪಸಂಖ್ಯಾತ ಘಟಕ ಅಧ್ಯಕ್ಷ ಅಶ್ರಫ್ ಹಾಕತ್ತೂರು, ವಿರಾಜಪೇಟೆ ತಾಲೂಕು ಯುವ ಘಟಕದ ಅಧ್ಯಕ್ಷ ಸೈಫುದ್ದೀನ್ ಜಾಮಿಯಾಲ, ಅಲ್ಪಸಂಖ್ಯಾತ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಆಬಿದ್ ಹುಸೈನ್, ಮೈಸೂರು ಜಿಲ್ಲಾ ಯುವ ಜೆಡಿಎಸ್ ಮುಖಂಡ ಪ್ರವೀಣ್ ಸಂದರ್ಭ ಹಾಜರಿದ್ದರು.











