Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಎಚ್1-ಎನ್1 : ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸೂಚನೆ*
  • *ಅರೆಭಾಷೆಗೆ ಸಾಂಸ್ಕೃತಿಕ ನೆಲೆಗಟ್ಟು, ವ್ಯಾಕರಣದ ಶಿಸ್ತು ರೂಢಿಸಿದವರು ಕೋಡಿ ಕುಶಾಲಪ್ಪ ಗೌಡರು : ಸದಾನಂದ ಮಾವಜಿ*
  • *ಅಂತರ ಶಾಲಾ ಶಟಲ್ ಬ್ಯಾಡ್ಮಿಂಟನ್: ಶ್ರೀ ರಾಜರಾಜೇಶ್ವರಿ ಶಾಲೆ ವಿದ್ಯಾರ್ಥಿಗಳ ಸಾಧನೆ*
  • ಕೊಡಗಿನಲ್ಲಿ ಕರವೇ ಸ್ವಾಭಿಮಾನಿ ಸೇನೆಗೆ ನೂತನ ಸದಸ್ಯರ ಸೇರ್ಪಡೆ
  • *ತೀವ್ರಗೊಳಿಸಿದ ಐಇಸಿ ಅಭಿಯಾನ : ಮ್ಯಾರಥಾನ್ ಮೂಲಕ ಎಚ್‌ಐವಿ/ಏಡ್ಸ್ ಜಾಗೃತಿ*
  • *ಮಡಿಕೇರಿಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ : ಸ್ವಾವಲಂಬಿ ಮಹಿಳಾ ಫಲಾನುಭವಿಗಳ ಗುರುತಿಸಿ ಸನ್ಮಾನಕ್ಕೆ ಕ್ರಮ*
  • *ಶಿಸ್ತುಬದ್ಧ ಶಿಕ್ಷಣದಿಂದಲೇ ಸಮಾಜದ ಯಶಸ್ಸು, ದೇಶದ ಪ್ರಗತಿ : ಶಾಸಕ ಎ.ಎಸ್.ಪೊನ್ನಣ್ಣ*
  • *ಫೀ.ಮಾ. ಕಾರ್ಯಪ್ಪ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ: ಶಿಸ್ತುಬದ್ಧ ಜೀವನವೇ ಸಾಧನೆಯ ದಾರಿದೀಪ: ಕರ್ನಲ್ ಸಂಜೀವ್ ಕುಮಾರ್*
  • *ಕೊಡಗು ವಿದ್ಯಾಲಯದಲ್ಲಿ ಬ್ರಹ್ಮಗಿರಿ ಸಹೋದಯ ಸಿಬಿಎಸ್ಇ ಶಾಲೆಗಳ ಸಾಂಸ್ಕೃತಿಕ ಸ್ಪರ್ಧೆ*
  • *ಮಡಿಕೇರಿ ನಗರಸಭೆ : ತ್ಯಾಜ್ಯ ನಿರ್ವಹಣೆಗೆ ವೈಜ್ಞಾನಿಕ ವಿಧಾನಕ್ಕೆ ಒತ್ತು : ಶಾಸಕ ಮಂತರ್ ಗೌಡ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕುಶಾಲನಗರ : ಅಪರಾಧ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಸಾರ್ವಜನಿಕ ಸ್ಥಳಗಳಲ್ಲಿ ಸಿಸಿ ಕ್ಯಾಮರ ಅಳವಡಿಸಲು ಸಲಹೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕುಶಾಲನಗರ : ಅಪರಾಧ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಸಾರ್ವಜನಿಕ ಸ್ಥಳಗಳಲ್ಲಿ ಸಿಸಿ ಕ್ಯಾಮರ ಅಳವಡಿಸಲು ಸಲಹೆ*

ಡಿಸೆಂಬರ್ 27, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ NEWS DESK  ಡಿ.27 : ಸಾರ್ವಜನಿಕ ಸ್ಥಳಗಳಲ್ಲಿ ಸಿಸಿ ಕ್ಯಾಮರಗಳ ಅಳವಡಿಕೆ ಮೂಲಕ ಅಪರಾಧ ಮುಕ್ತ ವ್ಯವಸ್ಥೆ ನಿರ್ಮಾಣವಾಗಲು ಸಹಕಾರಿಯಾಗುತ್ತದೆ ಎಂದು ಕೊಡಗು ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬಿ ಪಿ ದಿನೇಶ್ ಕುಮಾರ್ ತಿಳಿಸಿದ್ದಾರೆ. ಅವರು ಕುಶಾಲನಗರ ಗುಮ್ಮನಕೊಲ್ಲಿ ಬಸವೇಶ್ವರ ಬಡಾವಣೆ, ಬಯಲು ಬಸವೇಶ್ವರ ದೇವಾಲಯ ಸಮಿತಿ ಕುಶಾಲನಗರದ ವ್ಯಾಪ್ತಿಯ ಆಯಕಟ್ಟಿನ ಪ್ರದೇಶಗಳಲ್ಲಿ ಅಳವಡಿಸಲಾಗಿರುವ ಸಿಸಿಟಿವಿ ಕ್ಯಾಮೆರಾಗಳ ಉದ್ಘಾಟನೆ ಮತ್ತು ಅದರ ನಿರ್ವಹಣೆಗಾಗಿ ಪೊಲೀಸ್ ಇಲಾಖೆ ಮತ್ತು ಪುರಸಭೆಗೆ ಹಸ್ತಾಂತರ ಮಾಡುವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಪ್ರಸಕ್ತ ದಿನಗಳಲ್ಲಿ ಅಪರಾಧಗಳನ್ನು ಪತ್ತೆಹಚ್ಚಲು ಸಿಸಿ ಕ್ಯಾಮೆರಾ ಮಹತ್ತರ ಪಾತ್ರ ವಹಿಸುತ್ತಿದೆ ಎಂದ ಅವರು, ಪ್ರತಿಯೊಬ್ಬರು ತಮ್ಮ ಮನೆ ವ್ಯಾಪಾರ ವಹಿವಾಟು ಮಾಡುವ ಸ್ಥಳಗಳಲ್ಲಿ ಕಡ್ಡಾಯವಾಗಿ ಸಿಸಿ ಕ್ಯಾಮೆರಾ ಅಳವಡಿಸಬೇಕು. ಆ ಮೂಲಕ ಅಪರಾಧ ತಡೆ ಸಾಧ್ಯ ಎಂದರು.  ಸಮಿತಿ ಮೂಲಕ ಅತ್ಯಾಧುನಿಕ ತಂತ್ರಜ್ಞಾನದ ಕ್ಯಾಮೆರಾಗಳನ್ನು ಸಾರ್ವಜನಿಕವಾಗಿ  ಅಳವಡಿಸಿ ಸ್ವಚ್ಛ ಹಾಗೂ ಸ್ವಸ್ಥ ಸಮಾಜ ನಿರ್ಮಾಣದ ಗುರಿಯೊಂದಿಗೆ ಸಮಾಜಮುಖಿ ಸೇವೆ ಸಲ್ಲಿಸಿರುವ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದರು. ಕುಶಾಲನಗರ ಡಿ ವೈ ಎಸ್ ಪಿ ಚಂದ್ರಶೇಖರ್ ಪಿ ಅವರು ಮಾತನಾಡಿ ಪೊಲೀಸ್ ಇಲಾಖೆಯೊಂದಿಗೆ ನಾಗರಿಕರ ಸಹಭಾಗಿತ್ವ ಮೂಲಕ ಅಪರಾಧ ಮುಕ್ತ ಸಮಾಜ ನಿರ್ಮಾಣ ಸಾಧ್ಯ ಎಂದರು. ಅತಿಥಿಗಳಾಗಿ ಪಾಲ್ಗೊಂಡಿದ್ದ ಕೊಡಗು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕೆ ಪಿ ಚಂದ್ರಕಲಾ ಸಮಿತಿಯ ಕಾರ್ಯ ವೈಖರಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಪ್ರತಿಯೊಬ್ಬರೂ ಸೇವಾ ಮನೋಭಾವನೆ ಬೆಳೆಸಿಕೊಳ್ಳಬೇಕಾಗಿದೆ ಎಂದು ಹೇಳಿದರು. ಬಯಲು ಬಸವೇಶ್ವರ ದೇವಸ್ಥಾನ ಸಮಿತಿಯ ಅಧ್ಯಕ್ಷರಾದ ಬಿ ಕೆ ಸುದೀಪ್ ಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಪೌರಕಾರ್ಮಿಕರಾದ ಸತೀಶ್ ಮತ್ತು ರಾಜೇಶ್ವರಿ ಅವರುಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ಅಂದಾಜು 20 ಲಕ್ಷಕ್ಕೂ ಅಧಿಕ ವೆಚ್ಚದಲ್ಲಿ ಹಾರಂಗಿ ರಸ್ತೆ, ಗುಡ್ಡೆ ಹೊಸೂರು ಹೆದ್ದಾರಿ ಜಂಕ್ಷನ್, ಹುಡುಗಿ ರಸ್ತೆಯ ಕೈಗಾರಿಕಾ ಬಡಾವಣೆ, ಕುಶಾಲನಗರ ಪಟ್ಟಣ ವ್ಯಾಪ್ತಿಯಲ್ಲಿ  ಕ್ಯಾಮರಗಳನ್ನು ಅಳವಡಿಸಲಾಗಿದೆ ಎಂದು ಅಧ್ಯಕ್ಷರಾದ ಸುದೀಪ್ ಕುಮಾರ್ ಮಾಹಿತಿ ನೀಡಿದರು. ಹಾರಂಗಿ ರಸ್ತೆಯಲ್ಲಿ ಎಲ್ಲೆಂದರಲ್ಲಿ ತ್ಯಾಜ್ಯ ಎಸೆಯುತ್ತಿದ್ದ ಪ್ರಕರಣಗಳು ಈ ಮೂಲಕ ಪತ್ತೆಹಚ್ಚಲಾಗಿದ್ದು ಇದೀಗ ಶೇ. 100ರಷ್ಟು ಸ್ವಚ್ಛತೆ ಕಂಡು ಬಂದಿದೆ ಎಂದರು.  ಹೆದ್ದಾರಿಯಲ್ಲಿ ಸಾಗುವ ಪ್ರತಿ ವಾಹನಗಳ ನೊಂದಣಿ ಸಂಖ್ಯೆ ಕ್ಯಾಮೆರಾಗಳಲ್ಲಿ  ಸ್ಪಷ್ಟವಾಗಿ ದಾಖಲೆ ಮೂಲಕ  ಅಪರಾಧ ಪತ್ತೆ ಕಾರ್ಯ ಸುಸೂತ್ರವಾಗಿ ಕಲೆ ಹಾಕಲು ಸಾಧ್ಯ ಎಂದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪುರಸಭೆಯ ಕಂದಾಯ ಅಧಿಕಾರಿ ರಾಮು, ಎಸ್ ಎಲ್ ಎನ್ ಕಾಫಿ ಸಂಸ್ಥೆಯ ಮಾಲೀಕರಾದ ಎನ್ ಸಾತಪ್ಪನ್, ಕಾಫಿ ಉದ್ಯಮಿ ಈಶ್ವರನ್ ಜವಾಹರ್ ಮತ್ತಿತರರು ಇದ್ದರು. ಕುಶಾಲನಗರ ಸುತ್ತಮುತ್ತ ಆಯಕಟ್ಟಿನ ಪ್ರದೇಶಗಳಲ್ಲಿ ಅಳವಡಿಸಲಾಗಿರುವ ಸಿಸಿ ಕ್ಯಾಮರ ವ್ಯವಸ್ಥೆ  ಕಲ್ಪಿಸಲು ಕೈ ಜೋಡಿಸಿದ ಕುಶಾಲನಗರ ಕೈಗಾರಿಕಾ ಬಡಾವಣೆಯಲ್ಲಿರುವ 25 ಕ್ಕೂ ಅಧಿಕ ಉದ್ಯಮಿಗಳಿಗೆ ಮತ್ತು ಈ ಸಂದರ್ಭ ಸಹಕರಿಸಿದ ಸಿ ಸಿ ಕ್ಯಾಮೆರಾ ತಂತ್ರಜ್ಞ ರಜನಿಕಾಂತ್ ಮತ್ತು ಸ್ಥಳೀಯರಿಗೆ ಸಮಿತಿ ಪರವಾಗಿ ಕಿರು ಕಾಣಿಕೆ ನೀಡಿ ಗೌರವಿಸಲಾಯಿತು. ಸಮಿತಿಯ ಕಾರ್ಯದರ್ಶಿ ರವಿಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಸಮಿತಿಯ ನಿರ್ದೇಶಕರು ಮತ್ತು ಬಡಾವಣೆಯ ನಿವಾಸಿಗಳು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಎಚ್1-ಎನ್1 : ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸೂಚನೆ*

ಆಗಷ್ಟ್ 29, 2026

*ಅರೆಭಾಷೆಗೆ ಸಾಂಸ್ಕೃತಿಕ ನೆಲೆಗಟ್ಟು, ವ್ಯಾಕರಣದ ಶಿಸ್ತು ರೂಢಿಸಿದವರು ಕೋಡಿ ಕುಶಾಲಪ್ಪ ಗೌಡರು : ಸದಾನಂದ ಮಾವಜಿ*

ಆಗಷ್ಟ್ 29, 2026

*ಅಂತರ ಶಾಲಾ ಶಟಲ್ ಬ್ಯಾಡ್ಮಿಂಟನ್: ಶ್ರೀ ರಾಜರಾಜೇಶ್ವರಿ ಶಾಲೆ ವಿದ್ಯಾರ್ಥಿಗಳ ಸಾಧನೆ*

ಆಗಷ್ಟ್ 29, 2026

*ಅರೆಭಾಷೆಗೆ ಸಾಂಸ್ಕೃತಿಕ ನೆಲೆಗಟ್ಟು, ವ್ಯಾಕರಣದ ಶಿಸ್ತು ರೂಢಿಸಿದವರು ಕೋಡಿ ಕುಶಾಲಪ್ಪ ಗೌಡರು : ಸದಾನಂದ ಮಾವಜಿ*

ಆಗಷ್ಟ್ 29, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, ಆ.29 NEWS DESK : ಅರೆಭಾಷೆಗೆ ಸಾಂಸ್ಕೃತಿಕ ನೆಲೆಗಟ್ಟನ್ನು ಹಾಕಿಕೊಟ್ಟು, ವ್ಯಾಕರಣದ ಶಿಸ್ತನ್ನು ರೂಢಿಸಿದವರು ಭಾಷಾ ವಿಜ್ಞಾನಿ ಡಾ.…

*ಅಂತರ ಶಾಲಾ ಶಟಲ್ ಬ್ಯಾಡ್ಮಿಂಟನ್: ಶ್ರೀ ರಾಜರಾಜೇಶ್ವರಿ ಶಾಲೆ ವಿದ್ಯಾರ್ಥಿಗಳ ಸಾಧನೆ*

ಆಗಷ್ಟ್ 29, 2026

ಕೊಡಗಿನಲ್ಲಿ ಕರವೇ ಸ್ವಾಭಿಮಾನಿ ಸೇನೆಗೆ ನೂತನ ಸದಸ್ಯರ ಸೇರ್ಪಡೆ

ಆಗಷ್ಟ್ 29, 2026

*ತೀವ್ರಗೊಳಿಸಿದ ಐಇಸಿ ಅಭಿಯಾನ : ಮ್ಯಾರಥಾನ್ ಮೂಲಕ ಎಚ್‌ಐವಿ/ಏಡ್ಸ್ ಜಾಗೃತಿ*

ಆಗಷ್ಟ್ 29, 2026

*ಮಡಿಕೇರಿಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ : ಸ್ವಾವಲಂಬಿ ಮಹಿಳಾ ಫಲಾನುಭವಿಗಳ ಗುರುತಿಸಿ ಸನ್ಮಾನಕ್ಕೆ ಕ್ರಮ*

ಆಗಷ್ಟ್ 29, 2026

*ಶಿಸ್ತುಬದ್ಧ ಶಿಕ್ಷಣದಿಂದಲೇ ಸಮಾಜದ ಯಶಸ್ಸು, ದೇಶದ ಪ್ರಗತಿ : ಶಾಸಕ ಎ.ಎಸ್.ಪೊನ್ನಣ್ಣ*

ಆಗಷ್ಟ್ 29, 2026

*ಫೀ.ಮಾ. ಕಾರ್ಯಪ್ಪ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ: ಶಿಸ್ತುಬದ್ಧ ಜೀವನವೇ ಸಾಧನೆಯ ದಾರಿದೀಪ: ಕರ್ನಲ್ ಸಂಜೀವ್ ಕುಮಾರ್*

ಆಗಷ್ಟ್ 29, 2026

*ಕೊಡಗು ವಿದ್ಯಾಲಯದಲ್ಲಿ ಬ್ರಹ್ಮಗಿರಿ ಸಹೋದಯ ಸಿಬಿಎಸ್ಇ ಶಾಲೆಗಳ ಸಾಂಸ್ಕೃತಿಕ ಸ್ಪರ್ಧೆ*

ಆಗಷ್ಟ್ 29, 2026

*ಮಡಿಕೇರಿ ನಗರಸಭೆ : ತ್ಯಾಜ್ಯ ನಿರ್ವಹಣೆಗೆ ವೈಜ್ಞಾನಿಕ ವಿಧಾನಕ್ಕೆ ಒತ್ತು : ಶಾಸಕ ಮಂತರ್ ಗೌಡ*

ಆಗಷ್ಟ್ 29, 2026

*ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಕುಂದುಕೊರತೆ ಸಭೆ : ಪರಿಶಿಷ್ಟರ ಸಮಸ್ಯೆಗಳನ್ನು ಕಾಲಮಿತಿಯಲ್ಲಿ ಪರಿಹರಿಸುವುದು ಆದ್ಯ ಕೆಲಸವಾಗಿದೆ : ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ*

ಆಗಷ್ಟ್ 29, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.