ಮಡಿಕೇರಿ ಡಿ.27 NEWS DESK : ಮಡಿಕೇರಿ ತಾಲ್ಲೂಕಿನ ಕಟ್ಟೆಮಾಡು ಗ್ರಾಮದ ಶ್ರೀ ಮಹಾಮೃತ್ಯುಂಜಯ ಮಹದೇಶ್ವರ ಕ್ಷೇತ್ರದ ವಾರ್ಷಿಕ ಜಾತ್ರಾ ಮಹೋತ್ಸವದ ಪ್ರಯುಕ್ತ ಇಂದುವಿಶೇಷ ಪೂಜೆ ಶ್ರದ್ಧಾಭಕ್ತಿಯಿಂದ ನೆರವೇರಿತು. ದೇವಾಲಯದಲ್ಲಿ ಮುಂಜಾನೆಯಿಂದಲೇ ಕವಟ ಪೂಜೆ, ತೈಲಾಭ್ಯಂಜನ, ಪಂಚಭೂತ ಅಭಿಷೇಕ, ಧ್ವಜಸ್ತಂಭ ಪೂಜೆ, ದೇವರು ಜಳಕಕ್ಕೆ ಹೊರಡುವುದು, ದೇವಾಲಯದ ಆವರಣದಲ್ಲಿ ನೃತ್ಯ ಬಲಿ ಸೇರಿದಂತೆ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ಜರುಗಿದವು. ಗ್ರಾಮದ ವಿವಿಧೆಡೆಯಿಂದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ದೇವರಿಗೆ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದರು.











