
ಮಡಿಕೇರಿ NEWS DESK ಡಿ.28 : “ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ವಿಧೇಯಕ 2025” ನ್ನು ವಿರೋಧಿಸಿ ಡಿ.29 ರಂದು ಸೋಮವಾರಪೇಟೆ ಬಿಜೆಪಿ ಮಂಡಲದ ವತಿಯಿಂದ ಪ್ರತಿಭಟನೆ ನಡೆಸಲಾಗುವುದು ಎಂದು ಸೋಮವಾರಪೇಟೆ ಬಿಜೆಪಿಯ ವಕ್ತಾರ ಬಲ್ಲಾರಂಡ ಕಂಠಿ ಕಾರ್ಯಪ್ಪ ತಿಳಿಸಿದ್ದಾರೆ. ಸೋಮವಾರಪೇಟೆ ಪಟ್ಟಣದಲ್ಲಿ ಬೆಳಿಗ್ಗೆ 10.30 ಗಂಟೆಗೆ ಪ್ರತಿಭಟನೆ ನಡೆಸಿ ಕಾಂಗ್ರೆಸ್ ಸರಕಾರದ ನಿರ್ಧಾರವನ್ನು ಖಂಡಿಸುವುದಾಗಿ ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ.
ಸರಕಾರದ ಜನವಿರೋಧಿ ನೀತಿಗಳ ವಿರುದ್ಧ ಟೀಕೆ ಮತ್ತು ಚರ್ಚೆ ಮಾಡುವುದನ್ನು ಅಥವಾ ಸತ್ಯವನ್ನು ಬಹಿರಂಗ ಪಡಿಸುವುದನ್ನು ಕೂಡ ದ್ವೇಷ ಎಂದು ಪರಿಗಣಿಸುವ ಹುನ್ನಾರ ಈ ವಿಧೇಯಕದ ಹಿಂದೆ ಇದೆ ಎನ್ನುವ ಸಂಶಯ ಮೂಡುತ್ತಿದೆ. ಡಾ.ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನದಡಿ ನೀಡಿರುವ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಕಾಂಗ್ರೆಸ್ ಸರಕಾರ ಕಿತ್ತುಕೊಳ್ಳುವ ಪ್ರಯತ್ನ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.









