ಮಡಿಕೇರಿ NEWS DESK ಡಿ.28 : ಕೊಡವ ಹಾಕಿ ಅಕಾಡೆಮಿ ವತಿಯಿಂದ ಮೂರ್ನಾಡಿನಲ್ಲಿ ನಡೆಯುತ್ತಿರುವ ಲೆವಿಸ್ಟಾ ಕೊಡವ ಹಾಕಿ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿಯ ಸೆಮಿಫೈನಲ್ ಡಿ.29 ರಂದು ಬೆಳಿಗ್ಗೆ 10.30 ಗಂಟೆಗೆ ಚೆಪ್ಪುಡಿರ ಮತ್ತು ಮಂಡೇಪಂಡ ಹಾಗೂ 12.30 ಗಂಟೆಗೆ ಕುಲ್ಲೇಟಿರ ಮತ್ತು ಕುಪ್ಪಂಡ (ಕೈಕೇರಿ) ತಂಡಗಳ ನಡುವೆ ನಡೆಯಲಿದೆ. ಮೊದಲ ಪಂದ್ಯದ ಉದ್ಘಾಟನೆಯ ಸಂದರ್ಭ ಮುಖ್ಯ ಅತಿಥಿಗಳಾಗಿ ಬೆಂಗಳೂರು ಕೊಡವ ಸಮಾಜದ ಅಧ್ಯಕ್ಷ ಚೆರಿಯಪಂಡ ಸುರೇಶ್ ನಂಜಪ್ಪ ಹಾಗೂ ಬಾಡಗ ಸ್ಪೋರ್ಟ್ಸ್ ಹಾಗೂ ಕಲ್ಚರಲ್ ಅಸೋಸಿಯೇಷನ್ ಅಧ್ಯಕ್ಷ ಕಂಬೀರಂಡ ಸತೀಶ್ ಮುತ್ತಪ್ಪ ಪಾಲ್ಗೊಳ್ಳಿದ್ದಾರೆ. ಎರಡನೇ ಪಂದ್ಯದ ಉದ್ಘಾಟನೆಯ ಸಂದರ್ಭ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಅಜ್ಜಿನಿಕಂಡ ಮಹೇಶ್ ನಾಚಯ್ಯ, ಮೂರ್ನಾಡು ಎಜುಕೇಷನ್ ಸೊಸೈಟಿಯ ಅಧ್ಯಕ್ಷ ಡಾ.ಚೌರಿರ ಜಗತ್ ತಿಮ್ಮಯ್ಯ ಹಾಗೂ ಕಾರ್ಯದರ್ಶಿ ಪೆಮ್ಮುಡಿಯಂಡ ಅಪ್ಪಣ್ಣ ಉಪಸ್ಥಿತರಿರುವರು. ಕೊಡವ ಹಾಕಿ ಅಕಾಡೆಮಿಯ ಅಧ್ಯಕ್ಷ ಪಾಂಡಂಡ ಕೆ.ಬೋಪಣ್ಣ ಅಧ್ಯಕ್ಷತೆ ವಹಿಸಲಿದ್ದಾರೆ.










