ಮಡಿಕೇರಿ ಡಿ.29 NEWSDESK : ಸರ್ವ ಧರ್ಮದಲ್ಲು ಸಮಾನತೆ ಮುಖ್ಯ ಆಗಿದ್ದಲ್ಲಿ ಮಾತ್ರ ಸದೃಢ ಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಹೇಳಿದರು. ಅಮ್ಮತ್ತಿಯ ಸಂತ ಅಂತೋಣಿ ದೇವಾಲಯದ ಸಭಾಂಗಣದಲ್ಲಿ ನಡೆದ ದಕ್ಷಿಣ ಕೊಡಗು ಕ್ರಿಶ್ಚಿಯನ್ ಅಸೋಸಿಯೇಷನ್ ಆಯೋಜಿಸಿದ ಕ್ರಿಸ್ಮಸ್ ಹಾಗೂ ಹೊಸ ವರ್ಷದ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿ ಕೇಕ್ ಕತ್ತರಿಸಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಜಾತಿ ಧರ್ಮ ಗಳಲ್ಲಿ ಸಮಾನತೆ ಕಾಣುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಸರಕಾರ ಮಾಡುತ್ತಿದ್ದು, ಜನತೆಗೆ ನೀಡಿದ ಭರವಸೆಯನ್ನು ಈಡೇರಿಸುವ ಕೆಲಸ ಮಾಡುತ್ತಿದ್ದೇವೆ ಎಂದು ತಿಳಿಸಿದರು. ಅಮ್ಮತ್ತಿಯ ಸಂತ ಅಂತೋಣಿ ದೇವಾಲಯದ ಧರ್ಮ ಗುರುಗಳಾದ ಫಾಧರ್ ಮಧುಲೈ ಮುತ್ತು ಪ್ರಾಸ್ತಾವಿಕವಾಗಿ ಮಾತನಾಡಿದ್ದರು. ದಕ್ಷಿಣ ಕೊಡಗು ಕ್ರಿಶ್ಚಿಯನ್ ಅಸೋಸಿಯೇಷನ್ ನ ಅಧ್ಯಕ್ಷ ಎ.ಜೆ.ಬಾಬು ಅಧ್ಯಕ್ಷರ ನುಡಿಗಳನ್ನು ತಿಳಿಸಿದರು. ಈ ಸಂದರ್ಭ ವೇದಿಕೆಯಲ್ಲಿ ಸಿಸ್ಟರ್ ಎಲಿಜಬೆತ್, ಸಮಾಜ ಸೇವಕರಾದ ಜಾರ್ಜ್, ಸಂಘದ ಸಹ ಕಾರ್ಯದರ್ಶಿಯಾದ ಅಂತೋಣಿ ಜೊಸೆಫ್, ಹ್ಯಾಂಡೊ ಸಿ.ಜೆ.ಖಜಾಂಚಿ ಜಾರ್ಜ್ ಎಂ, ಸಂಚಾಲಕರಾದ ಅಂಟೋನಿ ರೋಬಿನ್ ಸೇರಿದಂತೆ ಕ್ರೈಸ್ತ ಸಮುದಾಯದ ಬಾಂಧವರು ಹಾಜರಿದ್ದರು.











