ಮಡಿಕೇರಿ NEWS DESK ಡಿ.29 : ಜೀವನದಿ ಕಾವೇರಿಯ ಸಂರಕ್ಷಣೆಗೆ ಸರಕಾರ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಕೊಡಗು ಅಭಿವೃದ್ಧಿ ಸಮಿತಿಯ ನೇತೃತ್ವದಲ್ಲಿ ವಿವಿಧ ಸಂಘಟನೆಗಳು ಮಡಿಕೇರಿಯಲ್ಲಿ ಪ್ರತಿಭಟನೆ ನಡೆಯಿತು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದ ಕೊಡಗು ಅಭಿವೃದ್ಧಿ ಸಮಿತಿ, ಕರ್ನಾಟಕ ರಕ್ಷಣಾ ವೇದಿಕೆ, ಕರ್ನಾಟಕ ಯುವ ರಕ್ಷಣಾ ವೇದಿಕೆ ಮತ್ತಿತರ ಸಂಘಟನೆಗಳ ಪ್ರಮುಖರು ಕಾವೇರಿ ನದಿ ಕಲುಷಿತಗೊಳ್ಳುವುದನ್ನು ಮತ್ತು ನದಿದಂಡೆ ಒತ್ತುವರಿಯಾಗುವುದನ್ನು ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಕೋಟ್ಯಾಂತರ ಜನರಿಗೆ ಕುಡಿಯುವ ನೀರನ್ನು ಒದಗಿಸುವ ಕಾವೇರಿ ನದಿಯ ಸಂರಕ್ಷಣೆಯ ವಿಚಾರದಲ್ಲಿ ಯಾವುದೇ ಕಾರಣಕ್ಕೂ ಸರಕಾರ ನಿರ್ಲಕ್ಷ್ಯ ತೋರಬಾರದು ಎಂದು ಒತ್ತಾಯಿಸಿದರು.
ಪ್ರತಿಭಟನಾಕಾರರು ಜಿಲ್ಲಾಡಳಿತದ ಮೂಲಕ ಸರಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.










