ಮಡಿಕೇರಿ ಡಿ.29 NEWS DESK : ತಿತಿಮತಿಯ ಲ್ಯಾಂಪ್ಸ್ ಅಕಾಡೆಮಿಯ ಬೆಳ್ಳಿಹಬ್ಬ ಸಂಭ್ರಮದಿಂದ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎ.ಎಸ್.ಪೊನ್ನಣ್ಣ ಬೆಳ್ಳಿ ಹಬ್ಬದ ಶುಭಾಶಯಗಳು ಹಾರೈಸುತ್ತಾ ಮಾತನಾಡಿದ ಮಾನ್ಯ ಶಾಸಕರು, ಲ್ಯಾಂಪ್ ಅಕಾಡೆಮಿಯು ದಶಕಗಳಿಂದ ಉತ್ತಮ ಸೇವೆ ಸಲ್ಲಿಸುತ್ತಾ ಈ ಭಾಗದ ಮಕ್ಕಳ ವಿದ್ಯಾರ್ಜನೆಗೆ ಶ್ರಮವಹಿಸುತ್ತಿದೆ. ಇಲ್ಲಿ ಕಲಿತ ಮಕ್ಕಳು ಸಮಾಜದಲ್ಲಿ ಉತ್ತಮ ಹೆಸರು ಗಳಿಸುತ್ತಿದ್ದಾರೆ. ಮುಂದೆಯೂ ಸಹ ನಾಡಿಗೆ ಉತ್ತಮ ವ್ಯಕ್ತಿಗಳನ್ನು ಈ ಅಕಾಡೆಮಿಯ ಮೂಲಕ ಕೊಡುವಂತಾಗಲಿ ಎಂದು ಹಾರೈಸಿದರು. :: ವಿದ್ಯಾರ್ಥಿನಿಗೆ ವಿದ್ಯಾರ್ಥಿವೇತನ ಘೋಷಣೆ :: ಎಸ್‍ಎಸ್‍ಎಲ್‍ಸಿಯಲ್ಲಿ ಗರಿಷ್ಠ ಅಂಕಗಳಿಸಿದ ವಿದ್ಯಾರ್ಥಿನಿ ಮೋಕ್ಷಿತಾಗೆ ಗೆ ಇದೇ ಸಂದರ್ಭ ಮುಂದಿನ ಐದು ವರ್ಷಗಳ ಕಾಲ ವಿದ್ಯಾರ್ಥಿವೇತನ ಘೋಷಿಸಿದರು. ಕಳೆದ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ 613 ಅಂಕ ಗಳಿಸಿದ ಬಡ ವಿದ್ಯಾರ್ಥಿನಿ ಮೋಕ್ಷಿತ ಗೆ ಶಾಸಕರು ಅವರ ದತ್ತಿನಿದಿಯಿಂದ ಮುಂದಿನ ಐದು ವರ್ಷಗಳ ವಿದ್ಯಾಭ್ಯಾಸಕ್ಕೆ ವಿದ್ಯಾರ್ಥಿ ವೇತನವನ್ನು ಘೋಷಿಸಿದರು. ಬಡ ಕುಟುಂಬದಿಂದ ಬಂದಿರುವ ಮೋಕ್ಷಿತ ಲೈನ್ ಮನೆಯಲ್ಲಿ ವಾಸವಿದ್ದುಕೊಂಡು ಸ್ವ ಪ್ರಯತ್ನದಿಂದ ಈ ಅಂಕ ಗಳಿಸಿದ್ದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಶಾಸಕರು ಅವರ ಭವಿಷ್ಯ ಉಜ್ವಲವಾಗಿರಲಿ ಹಾಗೂ ಮುಂದಿನ ದಿನಗಳಲ್ಲಿ ವಿದ್ಯಾರ್ಥಿನಿಯ ವಿದ್ಯಾಭ್ಯಾಸಕ್ಕಾಗಿ, ತನ್ನ ಕೈಲಾಗುವ ಎಲ್ಲಾ ಸಹಾಯ ಮಾಡುವುದಾಗಿ ಇದೇ ಸಂದರ್ಭದಲ್ಲಿ ಘೋಷಿಸಿದರು. ಕಾರ್ಯಕ್ರಮದಲ್ಲಿ ಶಾಲೆಯ ಪ್ರಮುಖರನ್ನು ಹಾಗೂ ಸ್ಥಾಪಕರನ್ನು ಮಾನ್ಯ ಶಾಸಕರು ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾದ ಚೆಪ್ಪುಡೀರ ಅರುಣ್ ಮಾಚಯ್ಯ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ತಿತೀರ ಧರ್ಮಜ ಉತ್ತಪ್ಪ, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮಿದೇರೀರ ನವೀನ್, ವಲಯ ಅಧ್ಯಕ್ಷರಾದ ನವೀನ್, ಆಡಳಿತ ಮಂಡಳಿಯವರು, ಶಾಲೆಯ ಮುಖ್ಯೋಪಾಧ್ಯಾಯರು, ಸಿಬ್ಬಂದಿ ವರ್ಗದವರು, ಶಾಲಾ ಮಕ್ಕಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು.











