ಬೆಂಗಳೂರು ಡಿ.29 NEWS DESK : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಕಚೇರಿ ಕೃಷ್ಣಾದಲ್ಲಿ “ಸಿಎಂ ಮೂಲ ಸೌಕರ್ಯ ಅಭಿವೃದ್ಧಿ ಯೋಜನೆ”ಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಚರ್ಚಿಸಿದರು. ಸಚಿವರಾದ ಹೆಚ್.ಕೆ.ಪಾಟೀಲ್, ಎಂ.ಬಿ.ಪಾಟೀಲ್, ಕೆ.ಹೆಚ್.ಮುನಿಯಪ್ಪ, ಪ್ರಿಯಾಂಕ್ ಖರ್ಗೆ, ರಹೀಂ ಖಾನ್, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್, ಆರ್ಥಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್ ಹಾಗೂ ಸಂಬಂಧಿಸಿದ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು ಹಾಗೂ ವೀಡಿಯೋ ಕಾನ್ಫರೆನ್ಸ್ ಮೂಲಕ ರಾಜ್ಯದ ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಪಾಲ್ಗೊಂಡರು.











