Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಪರಿಹಾರಕ್ಕಿಂತಲೂ ಅಮೂಲ್ಯವಾದದ್ದು ಮನುಷ್ಯನ ಜೀವ : ಕಾಡಾನೆ ಸೆರೆಗೆ ಶಾಸಕರ ಸೂಚನೆ*
  • *ಹಮ್ಮಿಯಾಲದಲ್ಲಿ ಸಾರಿಗೆ ಸಮಸ್ಯೆ : ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ*
  • *ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*
  • *ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*
  • *ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*
  • *ಕ.ಸಾ.ಪ ದತ್ತಿ ಕಾರ್ಯಕ್ರಮ : ಕೊಡಗಿನ ಸಂಸ್ಕೃತಿಯ ಮೂಲ ಸ್ವರೂಪ ಪ್ರಕೃತಿ ಆರಾಧನೆ : ಮಧೋಶ್ ಪೂವಯ್ಯ*
  • *ಪಂಜರಪೇಟೆ ಕೊಡವ ಕೇರಿಯಿಂದ ವೃದ್ಧಾಶ್ರಮಕ್ಕೆ ಭೇಟಿ*
  • *ಕೊಡವ ಕೂಟಾಳಿಯಡ ಕೂಟದಿಂದ ಸಾಧಕ ಮಹಿಳೆಯರಿಗೆ ಸನ್ಮಾನ*
  • *ಆಫ್ ರೋಡ್ ಚಾಲೆಂಜರ್ಸ್ ಸ್ಪರ್ಧೆ : ಮಡಿಕೇರಿಯ ಜತೀನ್ ಕರ್ಕೆರ ಹಾಗೂ ಹಾರ್ಧಿಕ್ ಕರ್ಕೆರ ದ್ವಿತೀಯ*
  • *ಸೋಮವಾರಪೇಟೆಯಲ್ಲಿ ಬಿಜೆಪಿ ಮಂಡಲ ಯುವ ಮೋರ್ಚಾದಿಂದ ಪ್ರತಿಭಟನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿಯಲ್ಲಿ ‘ವಿಶ್ವ ಮಾನವ ದಿನಾಚರಣೆ’ : ರಾಷ್ಟ್ರಕವಿ ಕುವೆಂಪು ಅವರ ಕಂಚಿನ ಪ್ರತಿಮೆ ನಿರ್ಮಾಣ ಮಾಡಲಿ : ಕೆ.ಪಿ.ಚಂದ್ರಕಲಾ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿಯಲ್ಲಿ ‘ವಿಶ್ವ ಮಾನವ ದಿನಾಚರಣೆ’ : ರಾಷ್ಟ್ರಕವಿ ಕುವೆಂಪು ಅವರ ಕಂಚಿನ ಪ್ರತಿಮೆ ನಿರ್ಮಾಣ ಮಾಡಲಿ : ಕೆ.ಪಿ.ಚಂದ್ರಕಲಾ*

ಡಿಸೆಂಬರ್ 29, 20253 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಡಿ.29 NEWS DESK : ಕನ್ನಡ ನಾಡು ಹಾಗೂ ಭಾಷೆಗೆ ಅಪಾರ ಕೊಡುಗೆ ನೀಡಿರುವ ರಾಷ್ಟ್ರಕವಿ ಕುವೆಂಪು ಅವರ ಈಗಿರುವ ಪ್ರತಿಮೆ ಜಾಗದಲ್ಲಿ ಕಂಚಿನ ಪ್ರತಿಮೆ ನಿರ್ಮಾಣ ಮಾಡುವಂತಾಗಬೇಕು ಎಂದು ಜಿ.ಪಂ.ಮಾಜಿ ಅಧ್ಯಕ್ಷರು ಹಾಗೂ ಕುವೆಂಪು ಕುಟುಂಬದ ಸಂಬಂಧಿಕರಾದ ಕೆ.ಪಿ.ಚಂದ್ರಕಲಾ ಅವರು ಕೋರಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಹಯೋಗದೊಂದಿಗೆ ನಗರದ ಗಾಂಧಿ ಭವನದಲ್ಲಿ ರಾಷ್ಟ್ರಕವಿ ಕುವೆಂಪುರವರ ಜನ್ಮದಿನದ ಪ್ರಯುಕ್ತ ನಡೆದ ವಿಶ್ವಮಾನವ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಕನ್ನಡ ಭಾಷೆಯಲ್ಲಿ ಜ್ಞಾನಪೀಠ ಪ್ರಶಸ್ತಿ ಪಡೆದ ಮೊದಲ ಕವಿ ಕುವೆಂಪು ಅವರ ದೊಡ್ಡ ಕಂಚಿನ ಪ್ರತಿಮೆಯನ್ನು ನಿರ್ಮಿಸಬೇಕು ಎಂದು ಅವರು ಮನವಿ ಮಾಡಿದರು. ಕುವೆಂಪು ಅವರ ಮಂತ್ರ ಮಾಂಗಲ್ಯ ಸರಳ ವಿವಾಹವನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು. ಇದರಿಂದ ಉತ್ತಮ ಬದುಕು ಕಾಣಬಹುದು. ಕುವೆಂಪು ಅವರ ರಾಮಾಯಣ ದರ್ಶನಂ, ಮಲೆಗಳಲ್ಲಿ ಮದುಮಗಳು ಸೇರಿದಂತೆ ಹಲವು ಕೃತಿಗಳನ್ನು ಅಧ್ಯಯನ ಮಾಡಬೇಕು. ಮುಂದಿನ ಬಾರಿ ಕುಶಾಲನಗರದಲ್ಲಿ ಕಾರ್ಯಕ್ರಮ ಆಯೋಜಿಸಬೇಕು ಎಂದು ಕೆ.ಪಿ.ಚಂದ್ರಕಲಾ ಅವರು ಹೇಳಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರು ಮಾತನಾಡಿ ರಾಷ್ಟ್ರಕವಿ ಕುವೆಂಪು ಅವರ ಸಂದೇಶ ಇಡೀ ಮಾನವ ಜಗತ್ತಿಗೆ ಕನ್ನಡಿ ಹಿಡಿದಿದೆ ಎಂದು ಹೇಳಿದರು. ಜಾತಿ, ಮತ, ಪಂಥದ ಗಡಿ ದಾಟಿರುವುದು ಅವರ ಕಾವ್ಯ, ಕವನ, ಕೃತಿಗಳಲ್ಲಿ ಕಾಣಬಹುದಾಗಿದೆ. ಪ್ರತಿಯೊಬ್ಬರೂ ಹುಟ್ಟುವಾಗ ವಿಶ್ವಮಾನವರಾಗಿ, ಬೆಳೆಯುತ್ತಾ ಅಲ್ಪಮಾನವರಾಗುತ್ತಾರೆ ಎಂಬುದನ್ನು ಕುವೆಂಪು ಅವರು ಸಾರಿದ್ದಾರೆ ಎಂದರು. ಕುವೆಂಪು ಅವರ ಕಾದಂಬರಿಗಳು, ಬರಹ, ಸಾಹಿತ್ಯ, ಕವನಗಳು ಇಡೀ ಮಾನವ ಕುಲದ ದೃಷ್ಟಿಕೋನವನ್ನು ಬದಲಾಯಿಸುವಲ್ಲಿ ಸಹಕಾರಿಯಾಗಿದೆ. ಅವರ ಶ್ರೇಷ್ಠ ಗ್ರಂಥ ರಾಮಾಯಣ ದರ್ಶನಂ ವಿವಿಧ ಆಯಾಮಗಳನ್ನು ಒಳಗೊಂಡಿದೆ ಎಂದು ಆರ್.ಐಶ್ವರ್ಯ ಅವರು ನುಡಿದರು. ಕನ್ನಡಕ್ಕಾಗಿ ಕೈಎತ್ತು, ಓ ನನ್ನ ಚೇತನ, ಆಗು ನೀ ಅನಿಕೇತನ ಎಂಬ ಅದ್ಭುತ ಗೀತೆ ರಚನೆ ಮಾಡಿದ್ದಾರೆ. ಹೀಗೆ ಹಲವು ಕೃತಿಗಳನ್ನು ರಚಿಸುವ ಮೂಲಕ ವಿಶ್ವಮಾನವ ಸಂದೇಶವನ್ನು ನೀಡಿದ್ದಾರೆ. ಕುವೆಂಪು ಅವರ ಒಂದೊಂದು ಅಧ್ಯಯನ ಪ್ರತಿಯೊಬ್ಬರಲ್ಲಿ ಅಗಾಧ ಪರಿಣಾಮ ಬೀರುತ್ತದೆ ಎಂದು ಆರ್.ಐಶ್ವರ್ಯ ಅವರು ಹೇಳಿದರು. ಕುವೆಂಪು ಅವರು ಮೌಢ್ಯ, ಕಂದಾಚಾರ ಹೋಗಲಾಡಿಸಲು ಶ್ರಮಿಸಿದ್ದಾರೆ. ಕಾನೂರು ಹೆಗ್ಗಡತಿ ಕೃತಿಯಲ್ಲಿ ಮಲೆನಾಡಿನ ಚಿತ್ರಣವನ್ನು ಸುಂದರವಾಗಿ ಕಟ್ಟಿಕೊಟ್ಟಿದ್ದಾರೆ. ಸಮಾಜದಲ್ಲಿ ಯಾರೂ ಮುಖ್ಯರಲ್ಲ. ಯಾರೂ ಅಮುಖ್ಯರಲ್ಲ ಎಂಬುದನ್ನು ಸಾರಿದ್ದಾರೆ ಎಂದರು. ಕುವೆಂಪು ಅವರ ಕೃತಿಗಳು ಒಂದೊಂದು ಹಾಡು ಭಾವಗೀತೆಯಾಗಿದೆ. ಬೆರಳ್ಗೆ ಕೊರಳ್ ಸೇರಿದಂತೆ ಹಲವು ನಾಟಕಗಳನ್ನು ಬರೆಯುವ ಮೂಲಕ ಕನ್ನಡ ನಾಡಿನ ಅಸ್ಮಿತೆಯನ್ನು ಎತ್ತಿ ಹಿಡಿದಿದ್ದಾರೆ. ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಎಂಬ ಸಂದೇಶ ಸಾರಿದ್ದು, ಕುವೆಂಪು ಅವರ ಪರಿಕಲ್ಪನೆಯಲ್ಲಿ ಎಲ್ಲರೂ ನಡೆಯಬೇಕು ಎಂದರು. ಕನ್ನಡ ಸಾಹಿತ್ಯ ಪರಿಷತ್ ಪ್ರಧಾನ ಕಾರ್ಯದರ್ಶಿ ಮುನೀರ್ ಅಹಮ್ಮದ್ ಅವರು ಮಾತನಾಡಿ ರಾಷ್ಟ್ರಕವಿ ಕುವೆಂಪು ಅವರು ಯುಗದ ಕವಿ, ಜಗದ ಕವಿ, ರಸ ಋಷಿಗಳ ಕವಿಯಾಗಿದ್ದು, ಕನ್ನಡ ಸಾಹಿತ್ಯ ಲೋಕದ ವಿಸ್ಮಯ ಎಂದು ನುಡಿದರು. ಜಾತಿ, ಧರ್ಮ, ಪಂಥಗಳನ್ನು ಬಿಟ್ಟು ಎಲ್ಲರೂ ವಿಶ್ವ ಪಥದಲ್ಲಿ ಸಾಗಬೇಕು ಎಂದು ಹೇಳಿದ್ದಾರೆ, ನವೀಲು, ಪಕ್ಷಿಕಾಶಿ, ಶೂದ್ರ ತಪಸ್ವಿ, ಹಲವು ಸಾಹಿತ್ಯ ಕೃತಿಗಳನ್ನು ರಚಿಸಿದ್ದು, ಕುವೆಂಪು ಅವರಿಗೆ ಪ್ರಶಸ್ತಿಗಳು ಮನೆ ಬಾಗಿಲಿಗೆ ಹುಡುಕಿಕೊಂಡು ಬಂದಿವೆ ಎಂದರು. ಬೊಮ್ಮನಹಳ್ಳಿಯ ಕಿಂದರಿಜೋಗಿ ಮಕ್ಕಳ ಮನಸ್ಸಿನಲ್ಲಿ ಉಳಿದಿವೆ. ಈ ಕೃತಿಯಲ್ಲಿ ವ್ಯಕ್ತಿತ್ವವನ್ನು ಕತೆಯಲ್ಲಿ ರೂಪಿಸಿದ್ದಾರೆ. ಮಲೆನಾಡಿನ ಚಿತ್ರಣ, ನಿಸರ್ಗದ ಪ್ರೇಮ ಸಾರಿದ್ದಾರೆ. ಕುವೆಂಪು ಅವರ ಒಂದೊಂದು ಕೃತಿಯು ಕೂಡ ಒಂದೊಂದು ಅನುಭವವಾಗಿದೆ ಎಂದು ವಿವರಿಸಿದರು. ಕುವೆಂಪು ಅವರ ವಿಚಾರಧಾರೆಗಳನ್ನು ತಿಳಿದುಕೊಂಡಲ್ಲಿ ವೈಜ್ಞಾನಿಕತೆಯನ್ನು ಬೆಳೆಸಿಕೊಳ್ಳಬಹುದು ಎಂದು ಮುನೀರ್ ಅಹ್ಮದ್ ಅವರು ಹೇಳಿದರು. ಜಾನಪದ ಪರಿಷತು ಜಿಲ್ಲಾ ಅಧ್ಯಕ್ಷರಾದ ಬಿ.ಜಿ.ಅನಂತ ಶಯನ ಅವರು ಮಾತನಾಡಿ ಕುವೆಂಪು ಅವರ ಬರಹಗಳಲ್ಲಿ ಹೊಸ ಹೊಸ ಆಲೋಚನೆಗಳು ಹಾಗೂ ವೈಚಾರಿಕತೆಯನ್ನು ಕಾಣಬಹುದಾಗಿದೆ ಎಂದರು. ಪ್ರಮುಖರಾದ ಎಚ್.ಎಲ್.ದಿವಾಕರ ಅವರು ಮಾತನಾಡಿ ಕುವೆಂಪು ಅವರ ಪ್ರತಿಮೆ ಇರುವ ಜಾಗವನ್ನು ಉದ್ಯಾನವನ ಮಾದರಿಯಲ್ಲಿ ಅಭಿವೃದ್ಧಿ ಪಡಿಸಬೇಕು ಎಂದು ಅವರು ಸಲಹೆ ಮಾಡಿದರು. ಮೋಹನ್ ಮೌರ್ಯ ಅವರು ಮಾತನಾಡಿ ಕುವೆಂಪು ಅವರ ಆದರ್ಶ ಹಾಗೂ ಆಶಯಗಳನ್ನು ಅವರ ಬರಹಗಳ ಅಧ್ಯಯನ ಮಾಡಿ ತಿಳಿದುಕೊಳ್ಳಬೇಕು ಎಂದರು. ಕುವೆಂಪು ಅವರ ರಾಮಾಯಣ ದರ್ಶನಂ ಕುರಿತು ಏರ್ಪಡಿಸಲಾಗಿದ್ದ ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಪ್ರಮಾಣ ಪತ್ರವನ್ನು ಗಣ್ಯರು ನೀಡಿದರು. ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕದ ಅಧ್ಯಕ್ಷರಾದ ಎಂ.ಪಿ.ಕೇಶವ ಕಾಮತ್, ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷರಾದ ಟಿ.ಪಿ.ರಮೇಶ್, ಸರ್ವೋದಯ ಸಮಿತಿ ಅಧ್ಯಕ್ಷರಾದ ಅಂಬೆಕಲ್ಲು ಕುಶಾಲಪ್ಪ, ಒಕ್ಕಲಿಗರ ಸಂಘದ ಅಧ್ಯಕ್ಷರಾದ ಎಸ್.ಎಂ.ಚಂಗಪ್ಪ, ಸಾಹಿತಿ ಉ.ರಾ.ನಾಗೇಶ್ ಇತರರು ಇದ್ದರು. ಶಿಕ್ಷಕಿ ಜಯಲಕ್ಷ್ಮಿ ಮತ್ತು ತಂಡದವರು ನಾಡಗೀತೆ ಹಾಡಿದರು. ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕುಮಾರ ಸ್ವಾಗತಿಸಿದರು. ಮಣಜೂರು ಮಂಜುನಾಥ್ ನಿರೂಪಿಸಿ ವಂದಿಸಿದರು. ಸಭಾ ಕಾರ್ಯಕ್ರಮಕ್ಕೂ ಮೊದಲು ನಗರದ ಡಿಸಿಸಿ ಬ್ಯಾಂಕ್ ಬಳಿಯಿರುವ ರಾಷ್ಟ್ರಕವಿ ಕುವೆಂಪು ಅವರ ಪ್ರತಿಮೆಗೆ ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ತಹಶೀಲ್ದಾರ್ ಶ್ರೀಧರ, ಕೆ.ಪಿ.ಚಂದ್ರಕಲಾ, ತಹಶೀಲ್ದಾರ್ ಶ್ರೀಧರ, ಟಿ.ಪಿ.ರಮೇಶ್, ಕೇಶವ ಕಾಮತ್, ಲಯನ್ಸ್ ಸಂಸ್ಥೆಯ ಅಧ್ಯಕ್ಷರಾದ ಮದನ್, ಅಂಬೆಕಲ್ಲು ನವೀನ್, ಪೌರಾಯುಕ್ತರಾದ ಹೆಚ್.ಆರ್.ರಮೇಶ್, ಆರ್.ಪಿ.ಚಂದ್ರಶೇಖರ್, ಮೋಹನ್ ಕುಮಾರ್ ಇತರರು ಮಾಲಾರ್ಪಣೆ ಹಾಗೂ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕುಮಾರ್, ಸ್ಕೌಟ್ಸ್ ಮತ್ತು ಗೈಡ್ಸ್ ಶಿಕ್ಷಕಿಯರು, ವಿವಿಧ ಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಇತರರು ಇದ್ದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಪರಿಹಾರಕ್ಕಿಂತಲೂ ಅಮೂಲ್ಯವಾದದ್ದು ಮನುಷ್ಯನ ಜೀವ : ಕಾಡಾನೆ ಸೆರೆಗೆ ಶಾಸಕರ ಸೂಚನೆ*

ಮಾರ್ಚ್ 10, 2026

*ಹಮ್ಮಿಯಾಲದಲ್ಲಿ ಸಾರಿಗೆ ಸಮಸ್ಯೆ : ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 10, 2026

*ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*

ಮಾರ್ಚ್ 9, 2026

*ಹಮ್ಮಿಯಾಲದಲ್ಲಿ ಸಾರಿಗೆ ಸಮಸ್ಯೆ : ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 10, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.10 : ಮಡಿಕೇರಿ- ಮುಕ್ಕೋಡ್ಲು- ಹಮ್ಮಿಯಾಲ ನಡುವೆ ಸಂಚರಿಸುತ್ತಿದ್ದ ಬಸ್ ನಿಯಮಿತವಾಗಿ ಬಾರದೆ ಇರುವುದರಿಂದ ಗ್ರಾಮಸ್ಥರು…

*ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*

ಮಾರ್ಚ್ 9, 2026

*ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*

ಮಾರ್ಚ್ 9, 2026

*ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*

ಮಾರ್ಚ್ 9, 2026

*ಕ.ಸಾ.ಪ ದತ್ತಿ ಕಾರ್ಯಕ್ರಮ : ಕೊಡಗಿನ ಸಂಸ್ಕೃತಿಯ ಮೂಲ ಸ್ವರೂಪ ಪ್ರಕೃತಿ ಆರಾಧನೆ : ಮಧೋಶ್ ಪೂವಯ್ಯ*

ಮಾರ್ಚ್ 9, 2026

*ಪಂಜರಪೇಟೆ ಕೊಡವ ಕೇರಿಯಿಂದ ವೃದ್ಧಾಶ್ರಮಕ್ಕೆ ಭೇಟಿ*

ಮಾರ್ಚ್ 9, 2026

*ಕೊಡವ ಕೂಟಾಳಿಯಡ ಕೂಟದಿಂದ ಸಾಧಕ ಮಹಿಳೆಯರಿಗೆ ಸನ್ಮಾನ*

ಮಾರ್ಚ್ 9, 2026

*ಆಫ್ ರೋಡ್ ಚಾಲೆಂಜರ್ಸ್ ಸ್ಪರ್ಧೆ : ಮಡಿಕೇರಿಯ ಜತೀನ್ ಕರ್ಕೆರ ಹಾಗೂ ಹಾರ್ಧಿಕ್ ಕರ್ಕೆರ ದ್ವಿತೀಯ*

ಮಾರ್ಚ್ 9, 2026

*ಸೋಮವಾರಪೇಟೆಯಲ್ಲಿ ಬಿಜೆಪಿ ಮಂಡಲ ಯುವ ಮೋರ್ಚಾದಿಂದ ಪ್ರತಿಭಟನೆ*

ಮಾರ್ಚ್ 9, 2026

*ಕಾಡಾನೆ ದಾಳಿಗೆ ಗ್ರಾ.ಪಂ ಮಾಜಿ ಸದಸ್ಯೆ ಬಲಿ*

ಮಾರ್ಚ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.