ವಿರಾಜಪೇಟೆ ಡಿ.29 NEWS DESK : ವಿರಾಜಪೇಟೆ ತಾಲ್ಲೂಕಿನ ಅರೇಮೇರಿ ಎಸ್‍ಎಂಎಸ್ ವಿದ್ಯಾಪೀಠ ಶಾಲೆಯಲ್ಲಿ ವಸುದೈವ ಕುಟುಂಬಕಂ ಎಂಬ ದ್ಯೇಯ ವಾಕ್ಯದಡಿ ಶಾಲಾ ವಾರ್ಷಿಕೋತ್ಸವ ಹಾಗೂ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ಶಾಲಾ ಮೈದಾನದಲ್ಲಿ ಸಂಭ್ರಮದಿಂದ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿಗಳ ಕಾನೂನು ಸಲಗಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು, ವಸುದೈವ ಕುಟುಂಬಕಂ ಎಂಬ ಧ್ಯೇಯ ವಾಕ್ಯದೊಂದಿಗೆ ನಡೆಯುತ್ತಿರುವ ಈ ವಾರ್ಷಿಕೋತ್ಸವವು, ಸಂಸ್ಥೆಯ ವಿಶಾಲ ಮನೋಭಾವ ಹಾಗೂ ಧ್ಯೇಯವನ್ನು ಸಾರುತ್ತದೆ ಹಾಗೂ ಪ್ರಪಂಚವೇ ಒಂದು ಕುಟುಂಬ ಎಂದು ಸಾರುವ ಈ ಧ್ಯೇಯ ವಾಕ್ಯವು ನಮ್ಮೆಲ್ಲರ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ದಶಕಗಳಿಂದ ಅರಮೇರಿ ವಿದ್ಯಾಸಂಸ್ಥೆಯು ವಿದ್ಯಾರ್ಥಿಗಳಿಗೆ ಉತ್ತಮ ರೀತಿಯಲ್ಲಿ ಸೌಲಭ್ಯವನ್ನು ಒದಗಿಸುತ್ತ ವಿದ್ಯಾರ್ಜನೆ ಮಾಡುತ್ತಾ ಬಂದಿದೆ. ಇಲ್ಲಿ ವ್ಯಾಸಂಗ ಮಾಡಿರುವ ವಿದ್ಯಾರ್ಥಿಗಳು ಈಗಾಗಲೇ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಉತ್ತಮ ಹೆಸರನ್ನು ಪಡೆದು, ನಾಡಿನ ಒಳಿತಿಗಾಗಿ ಸೇವೆ ಸಲ್ಲಿಸುತ್ತಿದ್ದಾರೆ ಎಂದು ಸಂತೋಷ ವ್ಯಕ್ತಪಡಿಸಿದರು. ಇಲ್ಲಿ ವಿದ್ಯಾರ್ಜನೆ ಮಾಡುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಶುಭ ಕೋರಿದ ಶಾಸಕರು, ಸಂಸ್ಥೆಯ ಆದರ್ಶವನ್ನು ಎಲ್ಲರೂ ಪಾಲಿಸುತ್ತಾ ಜೀವನದಲ್ಲಿ ಯಶಸ್ಸು ಕಾಣಬೇಕೆಂದು ಶುಭ ಹಾರೈಸಿದರು. ವಾರ್ಷಿಕೋತ್ಸವದಲ್ಲಿ ಸಂಭ್ರಮಿಸುತ್ತಿರುವ ವಿದ್ಯಾರ್ಥಿಗಳು ಇದೇ ಸಂಭ್ರಮವನ್ನು ಮುಂದಿನ ದಿನ ಪರೀಕ್ಷೆಯಲ್ಲಿ ಸಹ ಉತ್ತಮ ಅಂಕ ಗಳಿಸುವತ್ತ ಮುಂದುವರಿಸಬೇಕು ಎಂದು ಕಿವಿಮಾತು ಹೇಳಿದರು. ತುಮಕೂರು ಸಿದ್ದಗಂಗಾ ಮಠದ ಶ್ರೀ ಶ್ರೀ ಸಿದ್ದಲಿಂಗ ಸ್ವಾಮೀಜಿ ಮಾತನಾಡಿ, ಉತ್ತಮ ಶಿಕ್ಷಣ ಸಂಸ್ಥೆಗಳಿಂದ ವಿದ್ಯೆ ಪಡೆದು ಸಮಾಜದ ಉನ್ನತ ಮಟ್ಟದಲ್ಲಿ ಏರಲು ಸಹಕಾರವಾಗಲು ಸಾಧ್ಯವಾಗಿದೆ ಎಂದು ಶಿಕ್ಷಣ ಸಂಸ್ಥೆಗೆ ಶುಭ ಕೋರಿದರು. ಸಂಸ್ಥೆಯ ರೂವಾರಿಗಳು, ಕಳಂಚೇರಿ ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಮಾತನಾಡಿ ಅರಮೇರಿ ಎಂಬ ಚಿಕ್ಕ ಗ್ರಾಮದಲ್ಲಿ ಉತ್ತಮವಾದ ಶಿಕ್ಷಣ ಸಂಸ್ಥೆಯನ್ನು ಕಟ್ಟುವುದು ಸುಲಭದ ಮಾತಲ್ಲ. ಈ ನಿಟ್ಟಿನಲ್ಲಿ ಶಿಕ್ಷಕರ ಹಾಗೂ ಗ್ರಾಮಸ್ಥರ, ವಿದ್ಯಾರ್ಥಿಗಳ ಹಾಗೂ ಆಡಳಿತ ಮಂಡಳಿಯವರ ಸಹಕಾರದಿಂದ ಎಸ್‍ಎಂಎಸ್ ಎಂಬ ವಿದ್ಯಾ ಸಂಸ್ಥೆಯು ಇವತ್ತು ಬೆಳೆದು ನಿಂತಿದೆ. ಈ ಎಲ್ಲಾ ಬೆಳೆವಣಿಗೆಗೆ ಲಿಂಗೈಕ್ಯ ಶ್ರೀ ಶ್ರೀ ಶಾಂತಮಲ್ಲ ಸಾಮೀಜಿಗಳೇ ಕಾರಣಕರ್ತರು ಎಂದರು. ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಚೆಪ್ಪುಡೀರ ಅರುಣ್ ಮಾಚಯ್ಯ ಮಾತನಾಡಿ ದೇಶದಲ್ಲಿ ಹಲವಾರು ವಿಶ್ವವಿದ್ಯಾನಿಲಯಗಳು ಕಾರ್ಯಾಚರಿಸುತ್ತಿದ್ದು ಅದರಲ್ಲಿ ವಿಶ್ವದಲ್ಲಿ ಹೆಸರುಗಳಿಸಿದಂತಹ ವಿಶ್ವ ವಿದ್ಯಾನಿಲಯಗಳಿಂದ ವಿದ್ಯಾರ್ಹತೆ ಪಡೆದ ವಿದ್ಯಾರ್ಥಿಗಳು ದೇಶ ಮತ್ತು ವಿದೇಶದಲ್ಲೂ ಉನ್ನತ ಕ್ಷೇತ್ರದಲ್ಲಿದ್ದು ವಸುದೈವ ಕುಟುಂಬಕಂ ಎಂಬುವ ನುಡಿಗಟ್ಟನ್ನು ವಿವರಿದರು ಮತ್ತು ಈ ಸಂಸ್ಥೆಯು ಇನ್ನು ಎತ್ತರಕ್ಕೆ ಬೆಳೆಯಲಿ ಎಂದು ಶುಭ ಕೋರಿದರು. ಪ್ರಾಂಶುಪಾಲರಾದ ಕುಸುಮ್ ಟಿಟ್ಟೋ ಅವರು ಶಾಲೆಯ ಪ್ರಾರಂಭ ಮತ್ತು ಪ್ರಸ್ತುತ ಶಾಲೆಯ ಕಾರ್ಯ ವೈಖರಿಗಳ ಬಗ್ಗೆ ವಿವರಿಸಿದರು. ಅರಮೇರಿ ವಿದ್ಯಾ ಸಂಸ್ಥೆಯ ಕಾರ್ಯದರ್ಶಿ ವಿರೂಪಾಕ್ಷಯ್ಯ ಮಾತನಾಡಿದರು. ಕಾರ್ಯಕ್ರಮದಲ್ಲಿ ಪೂರ್ವ ವಿದ್ಯಾರ್ಥಿಗಳಲ್ಲಿ ಉನ್ನತ ಕ್ಷೇತ್ರದಲ್ಲಿ ಗುರುತಿಸಿರುವುದನ್ನು ಮನಗಂಡು ಸಂಸ್ಥೆ ವತಿಯಿಂದ ಸನ್ಮಾನಿಸಲಾಯಿತು. ಸಂಸ್ಥೆ ವತಿಯಿಂದ ಶಾಸಕರಾದ ಎ.ಎಸ್ ಪೆÇನ್ನಣ್ಣ, ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಅರುಣ್ ಮಾಚಯ್ಯ, ಮತ್ತು ಸಂಸ್ಥೆಯ ಕಾರ್ಯದರ್ಶಿ ವಿರೊಪಾಕ್ಷಯ್ಯ ಅವರನ್ನು ಸನ್ಮಾನಿಸಲಾಯಿತು. ವೇದಿಕೆ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿಶ್ವದ ಹಲವು ರಾಷ್ಟ್ರಗಳ ಕಲಾ ಪ್ರಕಾರಗಳು ಮತ್ತು ಎನ್‍ಸಿಸಿ ಸ್ಕೌಟ್ಸ್ ಅಂಡ್ ಗೈಡ್ಸ್, ಪಾಂಚಜನ್ಯ ಪೆರೇಡ್ ಅತ್ಯಂತ ಶಿಸ್ತಿನಿಂದ ನೋಡುಗರ ಗಮನ ಸೆಳೆಯಿತು.











