ವಿರಾಜಪೇಟೆ ಡಿ.30 NEWS DESK : ಪೆರಾಜೆ ಗ್ರಾಮಕ್ಕೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಭೇಟಿ ನೀಡಿದರು. ವಿವಿಧ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ ಹಾಗೂ ನೂತನ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಶಾಸಕರು, ಸರಕಾರ ವತಿಯಿಂದ ಈಗಾಗಲೇ ತಮ್ಮ ಅವಧಿಯಲ್ಲಿ ಪೆರಾಜೆ ಗ್ರಾಮಕ್ಕೆ ಸುಮಾರು 19 ಕೋಟಿಗೂ ಅಧಿಕ ಅನುದಾನ ಅಭಿವೃದ್ಧಿ ಕಾಮಗಾರಿಗಾಗಿ ನೀಡಲಾಗಿದೆ ಎಂದು ಹೇಳಿದರು.











