ಬೆಂಗಳೂರು ಡಿ.30 NEWS DESK : ರಾಜ್ಯದಾದ್ಯಂತ ವೈಕುಂಠ ಏಕಾದಶಿಯ ಸಂಭ್ರಮ ಮನೆ ಮಾಡಿದೆ. ನಗರದ ಹಲವು ವಿಷ್ಣು, ವೆಂಕಟೇಶ್ವರ, ಗೊವಿಂದನ ದೇವಾಲಯಗಳಲ್ಲಿ ಮುಂಜಾನೆ 4 ಗಂಟೆಯಿಂದಲೇ ಸುಪ್ರಭಾತ ಸೇವೆ ಸೇರಿದಂತೆ ವಿಶೇಷ ಪೂಜೆಗಳು ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ದೇವಾಲಯಗಳಿಗೆ ಭಕ್ತರ ಸಾಗರ ಹರಿದು ಬರುತ್ತಿದೆ.










