ವಿರಾಜಪೇಟೆ ಡಿ.30 NEWS DESK : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವಿರಾಜಪೇಟೆ ತಾಲ್ಲೂಕು ಶಾಖೆಯ ವತಿಯಿಂದ ವಿರಾಜಪೇಟೆ ತಾಲೂಕು ಮಟ್ಟದ ಮಹಾಸಭೆಯನ್ನು ಜ.4 ರಂದು ನಡೆಯಲಿದೆ ಎಂದು ಸಂಘದ ಅಧ್ಯಕ್ಷರಾದ ಕೆ.ಎಂ ತಿಮ್ಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಸಲಾಗುವುದು ಎಂದು ಕೆ.ಎಂ. ತಿಮ್ಮಯ್ಯ ಹೇಳಿದರು. ವಿರಾಜಪೇಟೆ ಪ್ರೆಸ್‍ಕ್ಲಬ್‍ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿರಾಜಪೇಟೆಯ ಅಂಬೇಡ್ಕರ್ ಭವನದಲ್ಲಿ ಪೂರ್ವಹ್ನ 10 ಗಂಟೆಗೆ ನಡೆಯಲಿರುವ ಮಹಾಸಭೆಯಲ್ಲಿ ನೌಕರರ ಹಿತರಕ್ಷಣೆ ಮತ್ತು ವಿವಿಧ ಬೇಡಿಕೆಗಳ ಬಗ್ಗೆ ಚರ್ಚಿಸಲಾಗುವುದು. ಇದೇ ಸಂದರ್ಭದಲ್ಲಿ ಉತ್ತಮ ಸೇವೆ ಸಲ್ಲಿಸಿದ ನೌಕರರನ್ನು ಮತ್ತು ಶಿಕ್ಷಣ ಸೇವೆ ಮತ್ತು ಕ್ರೀಡಾ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡಿದ ನೌಕರರ ಮಕ್ಕಳನ್ನು ಸನ್ಮಾನಿಸಲಾಗುವುದು. ಕಾರ್ಯಕ್ರಮದಲ್ಲಿ ವಿರಾಜಪೇಟೆ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ, ವಿಧಾನ ಪರಿಷತ್ ಸದಸ್ಯ ಮಂಡೇಪಂಡ ಸುಜಾ ಕುಶಾಲಪ್ಪ, ತಹಶೀಲ್ದಾರ್ ಪ್ರವೀಣ್ ಕುಮಾರ್, ಕೊಡಗು ಜಿಲ್ಲಾ ಗ್ಯಾರೆಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಹಾಗು ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ ಎಂದು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಕಾರ್ಯದರ್ಶಿ ಬಿ.ಟಿ.ದೇವರಾಜ್, ಖಜಾಂಚಿ ಎನ್.ಎಸ್.ಬಸವರಾಜ್, ರಾಜ್ಯ ಪರಿಷತ್ ಸದಸ್ಯರಾದ ಈ ಸುರೇಂದ್ರ ಉಪಸ್ಥಿತರಿದ್ದರು.











