ನಾಪೋಕ್ಲು ಡಿ.31 NEWS DESK : ಕೂರುಳಿ ಸುಭಾಷ್ ನಗರದ ನಾಗದೇವರ ವಾರ್ಷಿಕ ಉತ್ಸವವು ಶ್ರದ್ಧಾಭಕ್ತಿಯಿಂದ ಸಂಪನ್ನಗೊಂಡಿತ್ತು. ಉತ್ಸವದ ಅಂಗವಾಗಿ ನಾಗದೇವರಿಗೆ ವಿವಿಧ ಪೂಜಾ ಕೈಂಕರ್ಯಗಳು ಜರುಗಿತು. ಬೆಳಿಗ್ಗೆ ಗಣಪತಿ ಹೋಮ, ನಾಗನಿಗೆ ಹೂವಿನಿಂದ ಅಲಂಕಾರ, ಪಂಚಾಮೃತ ಅಭಿಷೇಕ, ಮಂಗಳಾರತಿ, ಮಹಾಪೂಜೆ ಸೇರಿದಂತೆ ವಿವಿಧ ಪೂಜಾ ಕಾರ್ಯಗಳನ್ನು ನೆರವೇರಿತು. ಭಕ್ತಾದಿಗಳಿಗೆ ತೀರ್ಥ ಪ್ರಸಾದ ವಿತರಿಸಲಾಯಿತು. ನಂತರ ಅನ್ನದಾನ ನಡೆಯಿತು. ಉತ್ಸವದಲ್ಲಿ ಭಕ್ತಾದಿಗಳು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡು ವಿಶೇಷ ಪೂಜೆ, ಪ್ರಾರ್ಥನೆ ನೆರವೇರಿಸಿದರು. ಪೂಜಾ ವಿಧಿ ವಿಧಾನಗಳನ್ನು ಭಗವತಿ ದೇವಾಲಯದ ಅರ್ಚಕರಾದ ಹರೀಶ್ ಕೇಕುಣ್ಣಾಯ ಅವರ ಮುಂದಾಳತ್ವದಲ್ಲಿ ನೆರವೇರಿತು. ಈ ಸಂದರ್ಭ ದೇವಾಲಯದ ಆಡಳಿತ ಮಂಡಳಿಯ ಅಧ್ಯಕ್ಷರಾದ ಲೋಕೇಶ್ ಪದಾಧಿಕಾರಿಗಳು, ಸದಸ್ಯ, ಊರ ಮತ್ತು ಪರವೂರಿನ ಭಕ್ತಾದಿಗಳು ಅಧಿಕ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
ವರದಿ : ದುಗ್ಗಳ ಸದಾನಂದ.











