ನಾಪೋಕ್ಲು ಜ.1 NEWS DESK : ಹೊದ್ದೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯಾಗಿ ಹೆಚ್.ವಿ.ವತ್ಸಲ ಅಧಿಕಾರ ಸ್ವೀಕರಿಸಿದರು. ಇದೇ ಸಂದರ್ಭ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯಾಗಿ 2019 ರಿಂದ 2025 ರವರೆಗೆ ಪಿಡಿಒ ಆಗಿ ಉತ್ತಮ ಸೇವೆ ಸಲ್ಲಿಸಿ ಇದೀಗ ನಿರ್ಗಮಿಸುತ್ತಿರು ಎ.ಎ ಅಬ್ದುಲ್ಲ ಅವರನ್ನು ಗುರುವಾರ ಪಂಚಾಯಿತಿ ವತಿಯಿಂದ ಆತ್ಮೀಯವಾಗಿ ಮತ್ತು ಗೌರವಪೂರ್ವಕ ಸನ್ಮಾನಿಸಿ ಬೀಳ್ಕೊಡಲಾಯಿತು. ಪಂಚಾಯತಿ ಸಭಾಂಗಣದಲ್ಲಿ ಆಯೋಜಿಸಿದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಂಚಾಯಿತಿಯ ಅಧ್ಯಕ್ಷರಾದ ಹೆಚ್.ಎ.ಹಂಸ ಅವರು ವಹಿಸಿ ಮಾತನಾಡಿ, ಗ್ರಾಮದ ಸರ್ವತೋಮುಖ ಅಭಿವೃದ್ಧಿಗೆ ಎಲ್ಲಾ ರೀತಿಯ ಸಹಕಾರವನ್ನು ನೀಡುವುದಾಗಿ ಹೇಳಿದರು. ಈ ಸಂದರ್ಭ ಪಂಚಾಯಿತಿ ಉಪಾಧ್ಯಕ್ಷ ಅನುರಾಧ, ಸದಸ್ಯರುಗಳು, ಸಿಬ್ಬಂದಿ ವರ್ಗದವರು ಹಾಜರಿದ್ದರು.
ವರದಿ : ದುಗ್ಗಳ ಸದಾನಂದ.










