Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಾವ್ಯಶ್ರೀ ಕಾಂತ್‍ರಾಜ್‍ಗೆ ಕರ್ನಾಟಕ ಕನ್ನಡ ರತ್ನ ಪ್ರಶಸ್ತಿ*
  • *ಯುವ ವೈಭವ ಕಾರ್ಯಕ್ರಮ : ಸೆಂಟ್ ಆನ್ಸ್ ಪದವಿ ಕಾಲೇಜಿಗೆ ಸಮಗ್ರ ಚಾಂಪಿಯನ್ ಪಟ್ಟ*
  • *ನೆಲ್ಲಿಹುದಿಕೇರಿ ಗ್ರಾಮಸ್ಥರಿಂದ ಶಾಸಕ ಡಾ.ಮಂತರ್ ಗೌಡ ಅವರಿಗೆ ಸನ್ಮಾನ : ಸರ್ಕಾರದ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಲು ಕರೆ* 
  • *ಕೊಡಗು : ವಿದ್ಯುತ್ ಅಡಚಣೆ : ಸಹಾಯವಾಣಿ ಕೇಂದ್ರ ಆರಂಭ*
  • *ಮುಂಗಾರು : ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕ್ರಮವಹಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*
  • *ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಶೇ.100 ರಷ್ಟು ಫಲಿತಾಂಶ ಪಡೆದ ಶಾಲೆಯ ಮುಖ್ಯ ಶಿಕ್ಷಕರಿಗೆ ಸಾಧನಸಿರಿ ಪ್ರಶಸ್ತಿ ಪ್ರದಾನ*
  • *ಮಡಿಕೇರಿಯಲ್ಲಿ ಮಾವು ಮತ್ತು ಹಲಸಿನ ಮೇಳ ಆರಂಭ*
  • *ದುಬಾರೆ ದುರ್ಘಟನೆ : ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡ ರಾಜ್ಯ ಉಪ ಲೋಕಾಯುಕ್ತ*
  • *ಪ್ರಸನ್ನ ಭಟ್ ವಿರುದ್ಧ ದೂರು*
  • *ಮೇ 22 ರಿಂದ ಮಾವು ಮತ್ತು ಹಲಸು ಮೇಳ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೂಡಿಗೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ  : ಶಿಕ್ಷಣದಿಂದ ಸಮಸಮಾಜ ನಿರ್ಮಾಣ ಸಾಧ್ಯ : ರಾಮಚಂದ್ರ ರಾಜೇ ಅರಸ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೂಡಿಗೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ  : ಶಿಕ್ಷಣದಿಂದ ಸಮಸಮಾಜ ನಿರ್ಮಾಣ ಸಾಧ್ಯ : ರಾಮಚಂದ್ರ ರಾಜೇ ಅರಸ್*

ಜನವರಿ 1, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ ಜ.1 NEWS DESK : ಕೂಡಿಗೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭವು ಸಂಭ್ರಮದಿಂದ ನಡೆಯಿತು. ಕೂಡಿಗೆ ಡಯಟ್ ಪ್ರಾಂಶುಪಾಲ ರಾಮಚಂದ್ರರಾಜೇ ಅರಸ್ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಎಂಬ ವಿಷಯವಾರು ಕೀಳೆರಿಮೆ ಹಾಗೂ ವ್ಯತ್ಯಾಸವನ್ನು ಮನಸ್ಸಿನಲ್ಲಿ ಇಟ್ಟುಕೊಳ್ಳಬಾರದು. ಅವರ ಇಚ್ಛೆ ಹಾಗೂ ಆಸಕ್ತಿಗೆ ಅನುಗುಣವಾಗಿ ವಿಷಯಗಳನ್ನು ಆಯ್ಕೆ ಮಾಡಿಕೊಂಡಿದ್ದಾರೆ.  ಎಲ್ಲಾ ವಿಭಾಗಗಳು ಮುಖ್ಯವಾಗಿವೆ. ಚನ್ನಾಗಿ ಓದಿ ಉತ್ತಮ ಅಂಕಗಳಿಸಿದಲ್ಲಿ ನಿರ್ದಿಷ್ಟ ಗುರಿ ಮುಟ್ಟಲು ಸಾಧ್ಯವಿದೆ ಎಂದರು. ಈ ಕಾಲೇಜಿನಲ್ಲಿ ಹೆಣ್ಣು ಮಕ್ಕಳ ಪ್ರಮಾಣ ಜಾಸ್ತಿ ಇದೆ. ಹೆಣ್ಣು ಮಕ್ಕಳು ಶಿಕ್ಷಣ ಪಡೆಯಲು ಹೆಚ್ಚಿನ ಆದ್ಯತೆ ನೀಡಲಾಗಿದೆ.ಅದು ನಿಮ್ಮ ಹಕ್ಕು ಕೂಡ ಆಗಿದೆ. ಹೆಣ್ಣು ಮಕ್ಕಳು ವಿದ್ಯಾವಂತರಾದಲ್ಲಿ ಸಮಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದರು.  ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಬಡ‌ಕುಟುಂಬದಲ್ಲಿ ಹುಟ್ಟಿದ್ದರು ಕೂಡ ಅವರು ಪುಸ್ತಕಗಳನ್ನು ಸಂಗ್ರಹಿಸಿ ಅಧ್ಯಯನ ಮಾಡುತ್ತಿದ್ದರು. ಈ ಹಿನ್ನೆಲೆಯಲ್ಲಿ ಅವರು ವಿಶ್ವದಲ್ಲಿಯೇ ಶ್ರೇಷ್ಠ ಜ್ಞಾನಿ ಎನಿಸಿಕೊಂಡರು. ಈ ಮಾದರಿಯನ್ನು ವಿದ್ಯಾರ್ಥಿಗಳು ಅನುಸರಿಸಬೇಕು. ಪುಸ್ತಕಗಳನ್ನು ಖರೀದಿಸಿ ಅಧ್ಯಯನ ಮಾಡಬೇಕು ಆಗ ಮಾತ್ರ ತಮ್ಮ ಜ್ಞಾನಾಭಿವೃದ್ಧಿ ಹೊಂದಲು ಸಾಧ್ಯ ಎಂದರು. ಕೂಡಿಗೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಎಸ್.ಎ.ಯೋಗೇಶ್ ಮಾತನಾಡಿ, ವಿದ್ಯಾರ್ಥಿ ನಿರಂತರ ಅಧ್ಯಯನಶೀಲತೆ ಮೈಗೂಡಿಸಿಕೊಂಡು ಕಠಿಣ ಪರಿಶ್ರಮದೊಂದಿಗೆ ಓದಿದಾಗ  ಭವಿಷ್ಯ ಉಜ್ವಲವಾಗುತ್ತದೆ. ಪೋಷಕರು ಹಾಗೂ ಶಿಕ್ಷಕರು ಹೊಂದಿರುವ ನಿರೀಕ್ಷೆಯನ್ನು ಹುಸಿಮಾಡಬಾರದು. ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿ ಸಂಸ್ಥೆಗೆ, ಶಿಕ್ಷಕರಿಗೆ ಹಾಗೂ ಪೋಷಕರಿಗೆ ಕೀರ್ತಿತರಬೇಕು ಎಂದರು.  ಕಾಲೇಜಿನ‌ ಪ್ರಾಂಶುಪಾಲ ಹಂಡ್ರಂಗಿ‌ ನಾಗರಾಜು ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳು ಸಮಯವನ್ನು ವ್ಯರ್ಥಮಾಡಬಾರದು, ಮೊಬೈಲ್ ಮತ್ತು ಟಿವಿಗಳಿಂದ ದೂರ ಉಳಿದು ಓದಿನ‌ಕಡೆಗೆ ಆಸಕ್ತಿ ತೋರಬೇಕು ಎಂದರು. ಶಿಕ್ಷಕರು ಹೇಳಿಕೊಟ್ಟ ಪಾಠವನ್ನು ತಪ್ಪದೇ ಅಂದೆ ಓದಬೇಕು. ಪಿಯುಸಿ ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟವಾಗಿದೆ.ವಿದ್ಯಾರ್ಥಿ ಕಠಿಣ ಪರಿಶ್ರಮ ದಿಂದ ಚೆನ್ನಾಗಿ ಓದಿ ಉತ್ತಮ ಅಂಕಗಳೊಂದಿಗೆ ಶೇ.ನೂರು ಫಲಿತಾಂಶ ತರಬೇಕು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ನಾಗಪ್ಪ ಯಾಲಕ್ಕಿಕಟ್ಟೆ, ಕಾವೇರಮ್ಮ, ಹನುಮರಾಜು, ರಮೇಶ್ ಮತ್ತಿತರರು ಪಾಲ್ಗೊಂಡಿದ್ದರು. ವಿದ್ಯಾರ್ಥಿಗಳಾದ ಫಾತಿಮತ್ ಸನಾ, ಲಯನ ಸ್ವಾಗತಿಸಿದರು‌. ಲಾವಣ್ಯ ವಂದಿಸಿದರು. ಕಾಲೇಜಿನಲ್ಲಿ ನಡೆದ ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಕಾಲೇಜು ಆಡಳಿತ ಮಂಡಳಿ ಉಪಾಧ್ಯಕ್ಷ ಹೆಚ್.ಕೆ.ಸೋಮಶೇಖರ್, ನಿರ್ದೇಶಕ ಈರಪ್ಪ ಬಹುಮಾನ ವಿತರಣೆ ಮಾಡಿದರು. ಉಪನ್ಯಾಸಕ ಸತೀಶ್ ಅವರು ಕಾಲೇಜು ವರದಿ‌ ವಾಚನ ಮಾಡಿದರು. ಇದೇ ಸಂದರ್ಭ ಡಯಟ್ ಪ್ರಾಂಶುಪಾಲ ರಾಮಚಂದ್ರ ರಾಜೇ ಅರಸ್ ಹಾಗೂ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಯೋಗೇಶ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ನಂತರ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಭರತನಾಟ್ಯ, ಜಾನಪದ ನೃತ್ಯ , ಸಮೂಹ ನೃತ್ಯ ಪ್ರದರ್ಶಿಸಿದರು. ಹಾಗೂ ವಿದ್ಯಾರ್ಥಿಗಳು ಹಾಡುಗಳನ್ನು ಹಾಡುವ ಮೂಲಕ ಪ್ರೇಕ್ಷಕರ ಮನರಂಜಿಸಿದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕಾವ್ಯಶ್ರೀ ಕಾಂತ್‍ರಾಜ್‍ಗೆ ಕರ್ನಾಟಕ ಕನ್ನಡ ರತ್ನ ಪ್ರಶಸ್ತಿ*

ಮೇ 22, 2026

*ಯುವ ವೈಭವ ಕಾರ್ಯಕ್ರಮ : ಸೆಂಟ್ ಆನ್ಸ್ ಪದವಿ ಕಾಲೇಜಿಗೆ ಸಮಗ್ರ ಚಾಂಪಿಯನ್ ಪಟ್ಟ*

ಮೇ 22, 2026

*ನೆಲ್ಲಿಹುದಿಕೇರಿ ಗ್ರಾಮಸ್ಥರಿಂದ ಶಾಸಕ ಡಾ.ಮಂತರ್ ಗೌಡ ಅವರಿಗೆ ಸನ್ಮಾನ : ಸರ್ಕಾರದ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಲು ಕರೆ* 

ಮೇ 22, 2026

*ಯುವ ವೈಭವ ಕಾರ್ಯಕ್ರಮ : ಸೆಂಟ್ ಆನ್ಸ್ ಪದವಿ ಕಾಲೇಜಿಗೆ ಸಮಗ್ರ ಚಾಂಪಿಯನ್ ಪಟ್ಟ*

ಮೇ 22, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಮೇ 22 NEWS DESK : ಕೊಡಗು ವಿಶ್ವವಿದ್ಯಾನಿಲಯದ ಚಿಕ್ಕ ಅಳುವಾರದಲ್ಲಿ ನಡೆದ ವಿಶ್ವವಿದ್ಯಾನಿಲಯ ಮಟ್ಟದ ಯುವ ವೈಭವ…

*ನೆಲ್ಲಿಹುದಿಕೇರಿ ಗ್ರಾಮಸ್ಥರಿಂದ ಶಾಸಕ ಡಾ.ಮಂತರ್ ಗೌಡ ಅವರಿಗೆ ಸನ್ಮಾನ : ಸರ್ಕಾರದ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಲು ಕರೆ* 

ಮೇ 22, 2026

*ಕೊಡಗು : ವಿದ್ಯುತ್ ಅಡಚಣೆ : ಸಹಾಯವಾಣಿ ಕೇಂದ್ರ ಆರಂಭ*

ಮೇ 22, 2026

*ಮುಂಗಾರು : ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕ್ರಮವಹಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*

ಮೇ 22, 2026

*ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಶೇ.100 ರಷ್ಟು ಫಲಿತಾಂಶ ಪಡೆದ ಶಾಲೆಯ ಮುಖ್ಯ ಶಿಕ್ಷಕರಿಗೆ ಸಾಧನಸಿರಿ ಪ್ರಶಸ್ತಿ ಪ್ರದಾನ*

ಮೇ 22, 2026

*ಮಡಿಕೇರಿಯಲ್ಲಿ ಮಾವು ಮತ್ತು ಹಲಸಿನ ಮೇಳ ಆರಂಭ*

ಮೇ 22, 2026

*ದುಬಾರೆ ದುರ್ಘಟನೆ : ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡ ರಾಜ್ಯ ಉಪ ಲೋಕಾಯುಕ್ತ*

ಮೇ 22, 2026

*ಪ್ರಸನ್ನ ಭಟ್ ವಿರುದ್ಧ ದೂರು*

ಮೇ 22, 2026

*ಮೇ 22 ರಿಂದ ಮಾವು ಮತ್ತು ಹಲಸು ಮೇಳ*

ಮೇ 21, 2026

*ಮಡಿಕೇರಿ : ಮೇ 22 ರಂದು ನೇರ ಸಂದರ್ಶನ*

ಮೇ 21, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.