ನಾಪೋಕ್ಲು ಜ.2 NEWS DESK : ಹಳೆ ತಾಲೂಕಿನ ಅಂಗನವಾಡಿ ಕೇಂದ್ರದಲ್ಲಿ ಹೊಸ ವರ್ಷಾಚರಣೆಯನ್ನು ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಆಚರಿಸಲಾಯಿತು. ಬಾಲ ವಿಕಾಸ ಸಲಹಾ ಸಮಿತಿ ಅಧ್ಯಕ್ಷರಾದ ಸೋನಿ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಅಂಗನವಾಡಿ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು ಇದರಲ್ಲಿ ತರಕಾರಿಗಳ ಬಳಕೆ ಹಾಗೂ ಉಪಯೋಗಗಳ ಬಗ್ಗೆ ನೃತ್ಯ ರೂಪಕ ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು. ಕಾರ್ಯಕ್ರಮದ ಅತಿಥಿಗಳಾಗಿ ಕೊಳಕೇರಿ ಗ್ರಾಮದ ಕಾಫಿ ಬೆಳೆಗಾರ ಕುಂಡಿಯೊಳಂದ ಬಿಪಿನ್ ಮತ್ತು ತಾಲೂಕು ಸ್ತ್ರೀಶಕ್ತಿ ಗುಂಪಿನ ಕಾರ್ಯದರ್ಶಿ ಅನಿತಾ ಹಾಗೂ ಪ್ರಮುಖರು ಭಾಗವಹಿಸಿದ್ದರು. ಹಾಗೂ ಕೇಕ್ ಕತ್ತರಿಸಿ ದಿನದ ಮಹತ್ವದ ಬಗ್ಗೆ ಮಾತನಾಡಿ ತಮ್ಮ ಅನಿಸಿಕೆ ವ್ಯಕ್ತಪಡಿಸಿ ಶುಭ ಹಾರೈಸಿದರು. ಮಕ್ಕಳ ಪ್ರಾರ್ಥನೆಯೊಂದಿಗೆ ಪ್ರಾರಂಭಗೊಂಡ ಕಾರ್ಯಕ್ರಮವನ್ನು ಅಂಗನವಾಡಿ ಕಾರ್ಯಕರ್ತೆ ಭಾಗವತಿ ಸ್ವಾಗತಿಸಿ ನಿರೂಪಿಸಿ ವಂದಿಸಿದರು. ಈ ಸಂದರ್ಭ ಸ್ತ್ರೀ ಶಕ್ತಿ ಗುಂಪಿನ ಹಾಗೂ ಬಾಲ ವಿಕಾಸ ಸಮಿತಿ ಸದಸ್ಯರು ಪೆÇೀಷಕರು ಉಪಸ್ಥಿತರಿದ್ದರು.
ವರದಿ : ದುಗ್ಗಳ ಸದಾನಂದ.











