ಮಡಿಕೇರಿ ಜ.2 NEWS DESK : 33/11 ಕೆ.ವಿ. ಮೂರ್ನಾಡು ವಿದ್ಯುತ್ ವಿತರಣಾ ಉಪ ಕೇಂದ್ರದಿಂದ ಹೊರಹೊಮ್ಮುವ ಎಫ್1 ಪಾರಾಣೆ ಫೀಡರ್‍ಗಳಲ್ಲಿ ಜನವರಿ, 03 ರಂದು ಬೆಳಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಮಾರ್ಗದ ಕಾಮಗಾರಿ ನಡೆಸಬೇಕಾಗಿರುವುದರಿಂದ ಈ ಮಾರ್ಗದಿಂದ ವಿದ್ಯುತ್ ಸರಬರಾಜಾಗುವ ಬಲಮುರಿ, ಪಾರಾಣೆ, ಬಾವಲಿ, ಕೈಕಾಡು, ಕಿರಂದಾಡು, ಎಡಪಾಲ, ಕಡಂಗ, ಕರಡ, ಚೇಯ್ಯಂಡಾಣೆ, ಚೇಲವಾರ, ಮರಂದೋಡ, ಕೋಕೇರಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.










