ಮಡಿಕೇರಿ NEWS DESK ಜ.2 : ಕೊಡಗು ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಎಸ್.ಜೆ.ಸೋಮಶೇಖರ್ ಅವರು ಶುಕ್ರವಾರ ಅಧಿಕಾರ ವಹಿಸಿಕೊಂಡರು. ಜಿ.ಪಂ ಸಿಇಒ ಆನಂದ್ ಪ್ರಕಾಶ್ ಮೀನಾ ಅವರಿಂದ ಅಧಿಕಾರ ಸ್ವೀಕರಿಸಿದರು. ನೂತನ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ, ಡಿಎಫ್ಒ ಅಭಿಷೇಕ್ , ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಉಪ ವಿಭಾಗಾಧಿಕಾರಿ ನಿಖಿಲ್ ಚಕ್ಕಿ, ತಹಶಿಲ್ದಾರರಾದ ಪ್ರವೀಣ್ ಕುಮಾರ್, ಕಿರಣ್ ಗೌರಯ್ಯ, ಶ್ರೀಧರ, ವಿವಿಧ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ಅಭಿನಂದಿಸಿದರು. ನೂತನ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಈ ಹಿಂದೆ ಪಂಚಾಯತ್ ರಾಜ್ ಇಲಾಖೆಯಲ್ಲಿ ಆಯುಕ್ತರಾಗಿ, ಚಿತ್ರದುರ್ಗ ಜಿಲ್ಲೆಯಲ್ಲಿ ಜಿ.ಪಂ.ಸಿಇಒ ಆಗಿ ಕರ್ತವ್ಯ ನಿರ್ವಹಿಸಿದ್ದಾರೆ.









