ಮಡಿಕೇರಿ ಜ.3 NEWS DESK : ಮಡಿಕೇರಿ ನಗರ ಠಾಣೆ ಮತ್ತು ಮಡಿಕೇರಿ ಸಂಚಾರ ಠಾಣೆಗೆ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ ಭೇಟಿ ನೀಡಿ ಠಾಣೆಯ ಕಾರ್ಯವೈಖರಿಯನ್ನು ಪರಿಶೀಲಿಸಿದರು. ಅಧಿಕಾರಿ ಮತ್ತು ಸಿಬ್ಬಂದಿಗಳೊಂದಿಗೆ ಸಭೆ ನಡೆಸಿ ಕಾನೂನು ಸುವ್ಯವಸ್ಥೆ, ಅಪರಾಧ ತಡೆ ಮತ್ತು ಪತ್ತೆ, ಸಂಚಾರ ಸುವ್ಯವಸ್ಥೆ ಮುಂತಾದ ವಿಚಾರಗಳ ಬಗ್ಗೆ ಚರ್ಚಿಸಿ ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು.











