
ನಾಪೋಕ್ಲು ಜ.3 NEWS DESK : ಸ್ಥಳೀಯ ಗ್ರಾಮ ಪಂಚಾಯಿತಿ ಹಾಗೂ ಎಮ್ಮೆಮಾಡು ಗ್ರಾಮ ಪಂಚಾಯಿತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಗ್ರಾಮ ಅಭಿವೃದ್ಧಿ ಅಧಿಕಾರಿ ಚೋಂದಕ್ಕಿ ಅವರನ್ನು ಆತ್ಮೀಯವಾಗಿ ಗೌರವಿಸಿ ಬೀಳ್ಕೊಡಲಾಯಿತು. ನಾಪೋಕ್ಲು ಗ್ರಾಮ ಪಂಚಾಯಿತಿಯಲ್ಲಿ ಗ್ರಾಮಾಭಿವೃದ್ಧಿ ಅಧಿಕಾರಿಗಳಾಗಿ ಚೋಂದಕ್ಕಿ ಅವರು ಏಳು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದು, ಇದೀಗ ನಿವೃತ್ತಿ ಹೊಂದಿದ ಕಾರಣ ಎಮ್ಮೆಮಾಡು ಹಾಗೂ ನಾಪೋಕ್ಲು ಗ್ರಾಮ ಪಂಚಾಯಿತಿ ವತಿಯಿಂದ ಸನ್ಮಾನಿಸಿ ಬೀಳ್ಕೊಡಲಾಯಿತು. ನಾಪೋಕ್ಲು ಪಂಚಾಯಿತಿ ಅಧ್ಯಕ್ಷ ವನಜಾಕ್ಷಿ ರೇಣುಕೇಶ್ ಅವರ ಅಧ್ಯಕ್ಷತೆ ನಡೆದ ಕಾರ್ಯಕ್ರಮದಲ್ಲಿ ತಾಲ್ಲೂಕು ಪಂಚಾಯತಿ ಕಾರ್ಯ ನಿರ್ವಹಣಾಧಿಕಾರಿ ಚಂದ್ರಶೇಖರ್, ಬಲ್ಲಮಾವಟ್ಟಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಚೌರಿರ ಶರತ್, ನಾಪೋಕ್ಲು ಗ್ರಾಮ ಪಂಚಾಯಿತಿಯ ಉಪಾಧ್ಯಕ್ಷರು ಕಂಗಂಡ ಶಶಿ ಮಂದಣ್ಣ ಹಾಗೂ ಸದಸ್ಯರ, ಸಿಬ್ಬಂದಿ, ಎಮ್ಮೆಮಾಡು ಗ್ರಾಮ ಪಂಚಾಯಿತಿಯ ಅಧ್ಯಕ್ಷ ಚಂಬರಂಡ ಐಸಮ್ಮ, ಸದಸ್ಯರ ಹಾಗೂ ಸಿಬ್ಬಂದಿ ಉಪಸಿತರಿದ್ದರು.
ವರದಿ : ದುಗ್ಗಳ ಸದಾನಂದ.











