Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
  • *ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*
  • *ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ವಿ.ಬಾಡಗ : ಕ್ರೀಡಾ ತರಬೇತಿ ಕೇಂದ್ರದ ಜಾಗ ಪರಿಶೀಲಿಸಿದ ಶಾಸಕ ಎ.ಎಸ್.ಪೊನ್ನಣ್ಣ*
ಇತ್ತೀಚಿನ ಸುದ್ದಿಗಳು

*ವಿ.ಬಾಡಗ : ಕ್ರೀಡಾ ತರಬೇತಿ ಕೇಂದ್ರದ ಜಾಗ ಪರಿಶೀಲಿಸಿದ ಶಾಸಕ ಎ.ಎಸ್.ಪೊನ್ನಣ್ಣ*

January 5, 20262 Mins Read
Share
Facebook Twitter LinkedIn Pinterest WhatsApp Email

ಮಡಿಕೇರಿ ಜ.5 NEWS DESK : ಜಿಲ್ಲೆಯ ವಿ.ಬಾಡಗ ಗ್ರಾಮದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಕ್ರೀಡಾ ತರಬೇತಿ ಕೇಂದ್ರದ ಜಾಗಕ್ಕೆ ಪತ್ರಕರ್ತರೊಂದಿಗೆ ಮುಖ್ಯಮಂತ್ರಿ ಕಾನೂನು ಸಲಹೆಗಾರ, ವೀರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಭೇಟಿ ನೀಡಿ ಮುಂದಿನ ಕಾರ್ಯಯೋಜನೆಯ ಬಗ್ಗೆ ಮಾಹಿತಿ ನೀಡಿದರು. ಕ್ರೀಡಾ ತರಬೇತಿ ಕೇಂದ್ರದ ಕುರಿತು ತಿಳಿದುಕೊಳ್ಳುವ ನಿಟ್ಟಿನಲ್ಲಿ ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ವಿ.ಬಾಡಗಕ್ಕೆ ತೆರಳಿದ ಹಿನ್ನೆಲೆ ಸ್ಥಳಕ್ಕೆ ಶಾಸಕರು ಆಗಮಿಸಿದರು. ಈ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕರು, ವಿ.ಬಾಡಗ ಗ್ರಾಮದಲ್ಲಿ 11.5 ಎಕರೆಯಲ್ಲಿ ಕ್ರೀಡಾ ಸಂಕೀರ್ಣ ನಿರ್ಮಾಣಕ್ಕೆ ಉದ್ದೇಶಿಸಲಾಗಿದೆ. ಅಥ್ಲೆಟಿಕ್‍ಟ್ರ್ಯಾಕ್, ಹಾಕಿ ಟರ್ಫ್, ವಾಲಿಬಾಲ್, ಟೆನ್ನಿಸ್, ಒಲಂಪಿಕ್ ಅಳತೆಯ ಸ್ವಿಮ್ಮಿಂಗ್ ಪೂಲ್, ಶೂಟಿಂಗ್‍ರೇಂಜ್ ಹೀಗೆ ನಾನಾ ಬಗೆಯ ಕ್ರೀಡೆಗಳಿಗೆ ಪೂರಕ ವಾತಾವರಣ ಸೃಷ್ಟಿಸಲಾಗುವುದು. ಮುಖ್ಯಮಂತ್ರಿಗಳನ್ನು ಆಹ್ವಾನಿಸಿ ಭೂಮಿಪೂಜೆ ನೆರವೇರಿಸುವಚಿಂತನೆ ಇದೆ. 11.5 ಎಕರೆಜಾಗ ಜಿಲ್ಲಾಡಳಿತದಿಂದ ಕ್ರೀಡಾ ಇಲಾಖೆಗೆ ಹಸ್ತಾಂತರಿಸುವ ಕೆಲಸವಾಗಿದೆ ಎಂದರು. ರಾಜ್ಯಸಭಾ ಸದಸ್ಯ ಅಜಯ್ ಮಕಾನ್ ಅವರು ಈ ಯೋಜನೆ ಕಾರ್ಯತಗಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗುವ ಸಂದರ್ಭ ಅಜಯ್ ಮಕಾನ್ ಅವರ ಪ್ರಮಾಣ ಪತ್ರವನ್ನು ತಯಾರಿಸುವ ಜವಾಬ್ದಾರಿ ನನಗೆ ನೀಡಿದ್ದರು. ಅಂದಿನಿಂದ ಅವರೊಂದಿಗೆ ನಿಕಟ ಸಂಪರ್ಕ ಹೊಂದಿದ್ದೇನೆ. ರಾಜ್ಯಸಭಾ ಕಲಾಪದ ವೇಳೆ ಕೊಡಗಿನ ಕ್ರೀಡಾ ಚಟುವಟಿಕೆ, ಕೊಡವ ಕೌಟುಂಬಿಕ ಹಾಕಿ ವಿಶ್ವದಾಖಲೆ ಬಗ್ಗೆಯ ಶ್ಲಾಘಿಸಿ ಮಾತನಾಡಿದ್ದರು. ಅದಲ್ಲದೆ ಅವರು ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದ ಸಂದರ್ಭ ಕ್ರೀಡಾ ಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದರು. ಕಲಾಪದಲ್ಲಿ ಅವರು ಪ್ರಸ್ತಾಪಿಸಿದ ನಂತರ ಅವರ ಆಸಕ್ತಿಯನ್ನು ತಿಳಿದು ಸಂಪರ್ಕಿಸಿದಾಗ ಕ್ರೀಡಾ ಸಂಕೀರ್ಣ, ತರಬೇತಿಕೇಂದ್ರ ನಿರ್ಮಾಣಕ್ಕೆ ಅವರ 6 ವರ್ಷದ ಎಲ್ಲಾ ಅನುದಾನ ನೀಡಲಾಗುವುದು ಎಂದು ಭರವಸೆ ನೀಡಿದ್ದರು. ಮೊದಲು ಕಾನೂರಿನಲ್ಲಿ ಕ್ರೀಡಾ ತರಬೇತಿ ಕೇಂದ್ರ ನಿರ್ಮಾಣಕ್ಕೆ ಜಾಗ ಗುರುತಿಸಲಾಗಿತ್ತು. ಆದರೆ, ತಾಂತ್ರಿಕ ಸಮಸ್ಯೆಯಿಂದ ಇದು ಸಾಧ್ಯವಾಗಿಲಿಲ್ಲ. ಅನಂತರ ವಿ.ಬಾಡಗ ಗ್ರಾಮದಲ್ಲಿ ಜಾಗ ಗುರುತಿಸಲಾಯಿತು ಎಂದು ವಿವರಿಸಿದರು. ರಾಜ್ಯಸಭಾ ಸದಸ್ಯರಿಂದ ಅನುದಾನ ದೊರೆಯುತ್ತದೆ. ವೈಯಕ್ತಿಕವಾಗಿ ತಾನು ಹಣ ನೀಡಿದ್ದೇನೆ. ಇಲ್ಲಿ ವಸತಿ ನಿಲಯವನ್ನು ನಿರ್ಮಿಸಲಾಗುವುದು. ಕಾಮಗಾರಿ ಪೂರ್ಣಗೊಳಿಸಲು 3 ವರ್ಷ ಸಮಯ ಬೇಕಾಗಿದೆ. ಹಂತಹಂತವಾಗಿ ನಿರ್ಮಾಣಕಾರ್ಯ ನಡೆಯಲಿದೆ. ಮುಖ್ಯಮಂತ್ರಿಯೊಂದಿಗೆ ಈ ವಿಚಾರವಾಗಿ ಚರ್ಚಿಸಲಾಗಿದೆ. ಅನುದಾನ ನೀಡಲು ಬೇಡಿಕೆ ಸಲ್ಲಿಸಿದ್ದೇನೆ. ಕೇಂದ್ರದ ಸಹಾಯವನ್ನು ಪಡೆಯಲಾಗುವುದು. ಇದಕ್ಕೆ ಅಜಯ್ ಮಕಾನ್ ನೆರವು ನೀಡಲಿದ್ದಾರೆ. ಜಿಲ್ಲೆ ಹಿಂದೆಂದೂ ಕಾಣದ ಯೋಜನೆ ಕಾರ್ಯಗತವಾಗುತ್ತದೆ. ಅವಕಾಶ ಹಾಗೂ ತರಬೇತಿ ಕೊರತೆಯಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಳೀಯ ಪ್ರತಿಭೆಗಳು ಪ್ರತಿನಿಧಿಸಲು ಸಾಧ್ಯವಾಗುತ್ತಿಲ್ಲ. ಕ್ರೀಡಾತರಬೇತಿ ಕೇಂದ್ರಕ್ಕೆ ಅಂದಾಜು ರೂ.40 ಕೋಟಿ ಬೇಕಾಗಿದೆ. ರಾಜ್ಯಸಭಾ ಸದಸ್ಯರಿಂದ 25 ಕೋಟಿ ದೊರೆಯುವ ನಿರೀಕ್ಷೆ ಇದೆ. ರಾಜ್ಯ ಸರಕಾರದಿಂದ 15 ಕೋಟಿಪಡೆಯುವ ಕೆಲಸವಾಗುತ್ತಿದೆ. ಆಯವ್ಯಯದಲ್ಲಿಯೂ ಇದು ಘೋಷಣೆಯಾಗುವ ವಿಶ್ವಾಸವಿದೆ ಎಂದರು. ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಾಚರಣಿಯಂಡ ಅನು ಕಾರ್ಯಪ್ಪ ನೇತೃತ್ವದಲ್ಲಿ ಪತ್ರಕರ್ತರತಂಡ ವಿ. ಬಾಡಗಕ್ಕೆ ತೆರಳಿತು. ಈ ವೇಳೆ ಬಿ.ಶೆಟ್ಟಿಗೇರಿ ಗ್ರಾ.ಪಂ. ಅಧ್ಯಕ್ಷ ಕೊಲ್ಲೀರ ಬೋಪಣ್ಣ, ತಾ.ಪಂ. ಮಾಜಿ ಅಧ್ಯಕ್ಷ ಉಮೇಶ್ ಕೇಚಮಯ್ಯ ಸೇರಿದಂತೆ ಇನ್ನಿತರ ಪ್ರಮುಖರು ಹಾಜರಿದ್ದರು.

 

Share. Facebook Twitter Pinterest LinkedIn Tumblr Email WhatsApp
Previous Article*ಕೊಡಗು : ಕಾಫಿಕೊಯ್ಲು ಮಾಡಿ ಸಂಭ್ರಮಿಸಿದ ಪತ್ರಕರ್ತರು*
Next Article *ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ಪದಾಧಿಕಾರಿಗಳೊಂದಿಗೆ ಶಾಸಕ ಎ.ಎಸ್.ಪೊನ್ನಣ್ಣ ಸಭೆ : ಶಾಶ್ವತ ಅನುದಾನಕ್ಕೆ ಪ್ರಯತ್ನಿಸುವ ಭರವಸೆ*

Related Posts

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

ಮಡಿಕೇರಿ NEWS DESK ಫೆ.11 : ಪಿ.ಕೃಷ್ಣೇಗೌಡ ಅವರ ನೇತೃತ್ವದ ಕರ್ನಾಟಕ ರಕ್ಷಣಾ ವೇದಿಕೆಯ ಸ್ವಾಭಿಮಾನಿ ಬಣದ ನೂತನ ಜಿಲ್ಲಾಧ್ಯಕ್ಷರಾಗಿ…

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026

*ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.