
ನಾಪೋಕ್ಲು ಜ.5 NEWS DESK : ಕೊಡಗಿನ ಕಿಗ್ಗಾಲು ಗ್ರಾಮದ ಎಂ.ಎಸ್.ನಿಧಿ ತ.ರಾ.ಸು. ಪ್ರಶಸ್ತಿ ಲಭಿಸಿದೆ. ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಶ್ರೀ ಕಲಾಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಂ.ಎಸ್.ನಿಧಿ ಅವರಿಗೆ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಬೆಂಗಳೂರಿನ ಜನ್ಮಭೂಮಿ ಸಾಂಸ್ಕೃತಿಕ ನಾಗರೀಕ ವೇದಿಕೆಯ ವತಿಯಿಂದ ದ್ವಿತೀಯ ಪಿ.ಯು.ವಾರ್ಷಿಕ ಪರೀಕ್ಷೆಯಲ್ಲಿ ಕನ್ನಡದಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಸಾಧಕ ವಿದ್ಯಾರ್ಥಿಗಳಿಗೆ ನೀಡುವ ತ.ರಾ.ಸು. ಪ್ರಶಸ್ತಿಯನ್ನು ಕೊಡಗಿನ ಎಂ.ಎಸ್.ನಿಧಿ ಪಡೆದುಕೊಂಡಿದ್ದಾರೆ. ಕಳೆದ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ಕಾರಣ ಈ ಪ್ರಶಸ್ತಿಗೆ ಅವರನ್ನು ಆಯ್ಕೆಗೊಳಿಸಲಾಗಿತ್ತು. ಬೆಂಗಳೂರಿನ ಗಾರ್ಡನ್ ಸಿಟಿ ವಿಶ್ವವಿದ್ಯಾಲಯ ಎಂಜಿನಿಯರಿಂಗ್ ವಿದ್ಯಾರ್ಥಿಯಾಗಿರುವ ನಿಧಿ ಕಾಂತೂರು-ಮೂರ್ನಾಡು ಗ್ರಾಮ ಪಂಚಾಯಿತಿಯ ಕಿಗ್ಗಾಲು ಗ್ರಾಮದ ನಿವಾಸಿ ಮೊಟ್ಟೆಮನೆ ಶ್ರೀಧರ್ ಮತ್ತು ರೈನಾ ದಂಪತಿಯ ಪುತ್ರಿ.
ವರದಿ : ದುಗ್ಗಳ ಸದಾನಂದ.









