Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಸುದೀರ್ಘ ಅವಧಿಗೆ ಸಿಎಂ ಎಂಬ ದಾಖಲೆ : ಜನರ ಆಶೀರ್ವಾದಿಂದ ಸಾಧ್ಯವಾಗಿದೆ : ಮುಖ್ಯಮಂತ್ರಿ ಸಿದ್ದರಾಮಯ್ಯ
ಇತ್ತೀಚಿನ ಸುದ್ದಿಗಳು ಕರ್ನಾಟಕ

ಸುದೀರ್ಘ ಅವಧಿಗೆ ಸಿಎಂ ಎಂಬ ದಾಖಲೆ : ಜನರ ಆಶೀರ್ವಾದಿಂದ ಸಾಧ್ಯವಾಗಿದೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ಜನವರಿ 5, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮೈಸೂರು ಜ.5 NEWS DESK : ಮಾಜಿ ಸಿಎಂ ದಿವಂಗತ ದೇವರಾಜ್ ಅರಸ್ ಅವರ ಮುಖ್ಯಮಂತ್ರಿಯ ಸುದೀರ್ಘ ಅವಧಿಯ ದಾಖಲೆ ಮುರಿದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನರ ಆಶೀರ್ವಾದದಿಂದ ಇದು ಸಾಧ್ಯವಾಗಿದೆ ಎಂದು ತಿಳಿಸಿದರು. ಅವರು ಇಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮಾಜಿ ಸಿಎಂ ದಿವಂಗತ ದೇವರಾಜ್ ಅರಸ್ ಅವರ ಮುಖ್ಯಮಂತ್ರಿಯ ಸುದೀರ್ಘ ಅವಧಿಯ ದಾಖಲೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ ಮುರಿಯಲಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಜನರ ಆಶೀರ್ವಾದದಿಂದ ಇದು ಸಾಧ್ಯವಾಗಿದೆ. ಅರಸು ರವರು ಮೈಸೂರಿನವರೇ ಆಗಿರುವುದು ಸಂತೋಷದ ಸಂಗತಿ. ತಾಲ್ಲೂಕು ಬೋರ್ಡ್ ಸದಸ್ಯನಾದ ನಂತರದ ನನ್ನ ರಾಜಕೀಯ ಜೀವನದಲ್ಲಿ ಸಚಿವನಾಗುವ ಮತ್ತು ಮುಖ್ಯಮಂತ್ರಿಯಾಗುವ ನಿರೀಕ್ಷೆಯಿರಲಿಲ್ಲ. 13 ಚುನಾವಣೆಗಳನ್ನೂ ಎದುರಿಸಿ 8ಕ್ಕೂ ಹೆಚ್ಚು ಬಾರಿ ಗೆಲುವು ಸಾಧಿಸಿದ್ದೇನೆ ಎಂದರು. :: ದಾಖಲೆಗಳು ಮುರಿಯಲೆಂದೇ ನಿರ್ಮಾಣವಾಗುತ್ತವೆ :: ಕಡಿಮೆ ಜನಸಂಖ್ಯೆಯ ಅರಸು ಸಮುದಾಯದವರಾಗಿದ್ದ ದೇವರಾಜ ಅರಸು ಅವರು ಜನಪ್ರಿಯ ನಾಯಕರಾಗಿದ್ದರು. ಅಂತಹ ಮಹಾನ್ ನಾಯಕನಿಗೂ ಮತ್ತು ನನಗೂ ಹೋಲಿಕೆ ಸರಿಯಲ್ಲ. ಅರಸು ಅವರ ಅವಧಿಯಲ್ಲಿ ರಾಜ್ಯದ ಪರಿಸ್ಥಿತಿ ವಿಭಿನ್ನವಾಗಿತ್ತು. ಅವರು ಒಂದು ಬಾರಿ ಚುನಾವಣೆಯನ್ನು ಸರ್ವಾನುಮತದಿಂದಲೂ ಆಯ್ಕೆಯಾಗಿದ್ದರು. ದಾಖಲೆಗಳು ಮುರಿಯಲೆಂದೇ ನಿರ್ಮಾಣವಾಗುತ್ತವೆ. ಪ್ರಸ್ತುತ ನಾನು ಪೂರೈಸಲಿರುವ ಅವಧಿಯನ್ನು ಮೀರಲಿರುವ ಮತ್ತೊಬ್ಬ ನಾಯಕರೂ ಬರಬಹುದು. ನನಗಿಂತ ಹೆಚ್ಚಿನ ಬಾರಿ ಬಜೆಟ್ ಮಂಡಿಸುವ ನಾಯಕರೂ ಮುಂದೆ ಬರಬಹುದು. ಸಾಧನಾ ಸಮಾವೇಶ ಆಯೋಜಿಸುವ ಬಗ್ಗೆ ನಿರ್ಧಾರ ಕೈಗೊಂಡಿಲ್ಲ ಎಂದರು. :: ಸಂಪುಟ ಪುನರ್ರಚನೆ- ಕಾಂಗ್ರೆಸ್ ವರಿಷ್ಠರೊಂದಿಗೆ ಚರ್ಚಿಸಿ ನಿರ್ಧಾರ :: ಬಜೆಟ್ ತಯಾರಿಯನ್ನು ಸಂಕ್ರಾಂತಿಯ ನಂತರ ಪ್ರಾರಂಭಿಸಲಾಗುವುದು.ಸಂಪುಟ ಪುನರ್ರಚನೆಯ ಬಗ್ಗೆ ಕಾಂಗ್ರೆಸ್ ವರಿಷ್ಠರಾದ ರಾಹುಲ್ ಗಾಂಧಿಯವರೊಂದಿಗೆ ಚರ್ಚಿಸಲಾಗುವುದು. ಅವರು ಸಮಯ ನೀಡಿದರೆ ಚರ್ಚಿಸಲಿರುವುದಾಗಿ ತಿಳಿಸಿದರು. :: ಬಳ್ಳಾರಿ ಘಟನೆ-ತನಿಖೆಯ ನಂತರ ಸತ್ಯಾಸತ್ಯತೆ ತಿಳಿಯಲಿದೆ ::  ಬಳ್ಳಾರಿ ನಡೆದ ಸಂರ್ಘಷದಲ್ಲಿ ಕಾಂಗ್ರೆಸ್ ಕಾರ್ಯಕರ್ತ ಬಲಿಯಾಗಿರುವ ಘಟನೆಯ ತನಿಖೆಯನ್ನು ಸಿಐಡಿ ಗೆ ವಹಿಸಲಾಗುವುದೇ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ಈ ಬಗ್ಗೆ ಗೃಹ ಸಚಿವರೊಂದಿಗೆ ಚರ್ಚಿಸುತ್ತೇನೆ. ಪೊಲೀಸ್ ತನಿಖೆಯ ನಂತರ ಘಟನೆಯ ಸತ್ಯಾಸತ್ಯತೆ ತಿಳಿಯಲಿದೆ ಎಂದರು. :: ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ದೊಡ್ಡ ಅನ್ಯಾಯ ::  ಜಿಎಸ್ ಟಿ ಕಡಿತ, ವಿಬಿ ಜಿ ರಾಮ್ ಜಿ ಯೋಜನೆ ಜಾರಿಯಂತಹ ಕೇಂದ್ರದ ಕ್ರಮಗಳ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡುತ್ತಾ, ರಾಜ್ಯಕ್ಕೆ ಜಿಎಸ್ ಟಿ ಯಿಂದ ವಾರ್ಷಿಕವಾಗಿ 12 ರಿಂದ 15 ಸಾವಿರ ಕೋಟಿ ರೂ.ಗಳು ನಷ್ಟವಾಗುತ್ತಿದ್ದು, ಇದು ಕೇಂದ್ರ ಸರ್ಕಾರ ರಾಜ್ಯಕ್ಕೆ ಮಾಡುತ್ತಿರುವ ಅನ್ಯಾಯ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಕಾಲದಿಂದಲೂ ಮ ನರೇಗಾ ಯೋಜನೆಗೆ ಸಂಪೂರ್ಣವಾಗಿ ಕೇಂದ್ರವೇ ಅನುದಾನ ನೀಡುತ್ತಿತ್ತು. ಆದರೆ ಈಗ ಈ ಯೋಜನೆಯನ್ನು ರದ್ದುಪಡಿಸಿದ್ದು, ಇದರಿಂದ ಕಾರ್ಮಿಕರು, ಸನ್ಣರೈತರು,ಮಹಿಳೆಯರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು, ಬಡವರಿಗೆ ನೀಡಲಾಗುತ್ತಿದ್ದ ಕೆಲಸದ ದಿನಗಳನ್ನು ಕಡಿಮೆಯಾಗಲಿದ್ದು, ಜನರ ಮೂಲಭೂತ ಹಕ್ಕಿಗಳನ್ನು ಕಸಿದುಕೊಳ್ಳಲಾಗುತ್ತಿದೆ. ಇದು ಅಸಂವಿಧಾನಿಕ ಕ್ರಮ. ಈ ಕಾಯ್ದೆಯಂತೆ ಕಾಮಗಾರಿಗಳಿಗೆ ಕೇಂದ್ರ ಮತ್ತು ರಾಜ್ಯ 60:40 ರಷ್ಟು ಅನುದಾನವನ್ನು ನೀಡಬೇಕಾಗಿದೆ. ಇದರಿಂದ ರಾಜ್ಯಸರ್ಕಾರದ ಮೇಲೆ ಸುಮಾರು 3000 ಕೋಟಿ ರೂ.ಗಳ ಹೊರೆ ಬೀಳಲಿದೆ ಎಂದರು. :: ಹುಲಿ ಸೆರೆಗೆ ಅರಣ್ಯ ಇಲಾಖೆಗೆ ಸೂಚನೆ ::  ಮೈಸೂರಿನ ವಿಮಾನ ನಿಲ್ದಾಣದಲ್ಲಿ ಹುಲಿ ಕಾಣಿಸಿಕೊಳ್ಳುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ಬಗ್ಗೆ ನಾಳೆ ಅರಣ್ಯ ಇಲಾಖೆಯೊಂದಿಗೆ ಸಭೆ ನಿಗಧಿಯಾಗಿದೆ. ರಾಜ್ಯದಲ್ಲಿ ಹುಲಿಗಳ ಸಂಖ್ಯೆ ಗಣನೀಯವಾಗಿ ಹೆಚ್ಚಿದ್ದು, ಅರಣ್ಯಗಳಿಂದ ಜನರ ಪ್ರದೇಶದಲ್ಲಿ ಕಾಣಿಸಿಕೊಳ್ಳುತ್ತಿದೆ. ಹುಲಿಯನ್ನು ಸೆರೆಹಿಡಿಯಲು ಸಿಬ್ಬಂದಿ ಕ್ರಮಕೈಗೊಳ್ಳಲು ಸೂಚನೆ ನೀಡಲಾಗಿದ್ದು, ಸೆರೆಹಿಡಿದ ಹುಲಿಗಳನ್ನು ಮತ್ತೊಂದು ಅರಣ್ಯ ಪ್ರದೇಶಕ್ಕೆ ವರ್ಗಾಯಿಸಲು ಸೂಚಿಸಲಾಗಿದೆ ಎಂದರು. :: ಬಲೂನ್ ಸ್ಪೋಟ ಪ್ರಕರಣ- ಮೃತರ ಕುಟುಂಬಗಳಿಗೆ 5 ಲಕ್ಷ ರೂ.ಪರಿಹಾರ ::  ಮೈಸೂರಿನ ಅರಮನೆಯ ಮುಂಭಾಗದಲ್ಲಿ ಬಲೂನ್ ಸ್ಪೋಟದಲ್ಲಿ ಮೃತರಾದ ಮಹಿಳೆಯರಿಗೆ ತಲಾ 5 ಲಕ್ಷ ರೂ. ಪರಿಹಾರವನ್ನು ನೀಡಲಾಗುವುದು ಎಂದರು.

Follow us Follow us
Share. WhatsApp Facebook Twitter Email Telegram Copy Link

Related Posts

ಸುಂಟಿಕೊಪ್ಪದಲ್ಲಿ ಅ.20ರಂದು 56ನೇ ವರ್ಷದ ಆಯುಧಪೂಜಾ ಸಮಾರಂಭ

ಅಕ್ಟೋಬರ್ 12, 2026

ಸುಂಟಿಕೊಪ್ಪದಲ್ಲಿ ಅ.15ರಂದು 19ನೇ ವರ್ಷದ ಓಣಂ ಆಚರಣೆ

ಅಕ್ಟೋಬರ್ 12, 2026

ಕಂಬಿಬಾಣೆಯಲ್ಲಿ 71ನೇ ವರ್ಷದ ನವರಾತ್ರಿ ಉತ್ಸವಕ್ಕೆ ಚಾಲನೆ: ಶ್ರೀದೇವಿ ಮಹಾತ್ಮೆ ಯಕ್ಷಗಾನ ಪ್ರದರ್ಶನ

ಅಕ್ಟೋಬರ್ 12, 2026

ಸುಂಟಿಕೊಪ್ಪದಲ್ಲಿ ಅ.15ರಂದು 19ನೇ ವರ್ಷದ ಓಣಂ ಆಚರಣೆ

ಅಕ್ಟೋಬರ್ 12, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸುಂಟಿಕೊಪ್ಪ, NEWS DESK ಅ.12: ಸುಂಟಿಕೊಪ್ಪ ಮಲಯಾಳಿ ಸಮಾಜದ ವತಿಯಿಂದ 19ನೇ ವರ್ಷದ ಓಣಂ ಆಚರಣೆಯು ಅಕ್ಟೋಬರ್ 15ರಂದು ಸುಂಟಿಕೊಪ್ಪದ…

ಕಂಬಿಬಾಣೆಯಲ್ಲಿ 71ನೇ ವರ್ಷದ ನವರಾತ್ರಿ ಉತ್ಸವಕ್ಕೆ ಚಾಲನೆ: ಶ್ರೀದೇವಿ ಮಹಾತ್ಮೆ ಯಕ್ಷಗಾನ ಪ್ರದರ್ಶನ

ಅಕ್ಟೋಬರ್ 12, 2026

ಮಡಿಕೇರಿ ದಸರಾದಲ್ಲಿ ಕಾಫಿ ಘಮ: 54 ಮಳಿಗೆಗಳಲ್ಲಿ ಕಾಫಿ ಲೋಕ ಅನಾವರಣ

ಅಕ್ಟೋಬರ್ 12, 2026

ವಿರಾಜಪೇಟೆ ಕಾವೇರಿ ಕಾಲೇಜಿನ ಬಾಲಕರ ತಂಡಕ್ಕೆ ರನ್ನರ್ಸ್ ಟ್ರೋಫಿ

ಅಕ್ಟೋಬರ್ 12, 2026

ಎಸ್‌ಐಆರ್ ವಿರುದ್ಧ ಕೊಡಗು ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ; ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹಿಸಿ ರಸ್ತೆ ತಡೆ

ಅಕ್ಟೋಬರ್ 12, 2026

ಬೆಂಗಳೂರಿನಿಂದ ಮೈಸೂರಿಗೆ ದಕ್ಷಿಣ ಕರ್ನಾಟಕ ಅಂಚೆ ವಲಯದ ಪ್ರಧಾನ ಕಚೇರಿ ಸ್ಥಳಾಂತರಕ್ಕೆ ತಾತ್ವಿಕ ಒಪ್ಪಿಗೆ

ಅಕ್ಟೋಬರ್ 12, 2026

ಸೋಮೇಶ್ವರ ದೇವಾಲಯದಲ್ಲಿ 21ನೇ ವರ್ಷದ ಶರನ್ನವರಾತ್ರಿ ಉತ್ಸವಕ್ಕೆ ಚಾಲನೆ

ಅಕ್ಟೋಬರ್ 12, 2026

ಹಿರಿಯ ಹಾಕಿ ಆಟಗಾರ್ತಿ ದೇವರಾಜಮ್ಮ ಅವರಿಗೆ ನಾಡೋಜ ಕಮಲ ಹಂಪನಾ ರಾಜ್ಯಪ್ರಶಸ್ತಿ

ಅಕ್ಟೋಬರ್ 12, 2026

ಕುಂಜಿಲ ಸರ್ಕಾರಿ ಶಾಲೆಗೆ ಹೆಮ್ಮೆಯ ದುಬೈ ಕನ್ನಡ ಸಂಘದಿಂದ ಆಟೋಪಕರಣ, ಪೀಠೋಪಕರಣಗಳ ಕೊಡುಗೆ; ಸರ್ಕಾರಿ ಶಾಲೆ ಉಳಿಸಿ ಅಭಿಯಾನದಡಿ ವಿದ್ಯಾರ್ಥಿಗಳಿಗೆ ಸೌಲಭ್ಯಗಳ ಹಸ್ತಾಂತರ

ಅಕ್ಟೋಬರ್ 12, 2026

ಮಡಿಕೇರಿ ದಸರಾ ವಿದ್ಯುತ್ ದೀಪಾಲಂಕಾರ ಅಸಮರ್ಪಕ: ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿ ಆಕ್ಷೇಪ

ಅಕ್ಟೋಬರ್ 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.