ಮಡಿಕೇರಿ NEWS DESK ಜ.5 : ವಿದ್ಯಾರ್ಥಿನಿಯರೇ ಭಯ ಬೇಡ, ನಿಮ್ಮೊಂದಿಗೆ ನಾವಿದ್ದೇವೆ ಎಂದು ಕೊಡಗು ಜಿಲ್ಲಾ ನೂತನ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ ಅಭಯ ನೀಡಿದ್ದಾರೆ. ವಿದ್ಯಾರ್ಥಿನಿಯರು, ಮಹಿಳೆಯರ ಮತ್ತು ಮಕ್ಕಳ ರಕ್ಷಣೆ, ಕಾನೂನು ಅರಿವು, ಜಾಗೃತಿ ಶಿಕ್ಷಣ ನೀಡುವ ನಿಟ್ಟಿನಲ್ಲಿ ಸರ್ಕಾರದ ಮಹತ್ವದ ಯೋಜನೆಯಾದ ‘ಅಕ್ಕ ಪಡೆ’ಗೆ ಇಂದು ಜಿಲ್ಲಾ ಪೊಲೀಸ್ ಕಚೇರಿ ಆವರಣದಲ್ಲಿ ಚಾಲನೆ ನೀಡಿ ಅವರು ಮಾತನಾಡಿದರು. ಈ ಸಂದರ್ಭ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳು, ವಿದ್ಯಾರ್ಥಿನಿಯರು ಹಾಗೂ ಮಹಿಳೆಯರು ಹಾಜರಿದ್ದರು.











