ಮಡಿಕೇರಿ NEWS DESK ಜ.6 : ಗೋಣಿಕೊಪ್ಪಲು ಚೇಂಬರ್ ಆಫ್ ಕಾಮರ್ಸ್ ನ ಕೋಶಾಧಿಕಾರಿ ಪಿ.ಮನೋಹರ್(64) ಅವರು ಇಂದು ಬೆಳಗ್ಗೆ ಪೊನ್ನಂಪೇಟೆಯ ತಮ್ಮ ನಿವಾಸದಲ್ಲಿ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.
ವರ್ತಕರಾಗಿರುವ ಪಿ.ಮನೋಹರ್ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದರು. ಗೋಣಿಕೊಪ್ಪಲು ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಸುನಿಲ್ ಮಾದಪ್ಪ, ಪ್ರಧಾನ ಕಾರ್ಯದರ್ಶಿ ಪ್ರಭಾಕರ್ ನೆಲ್ಲಿತ್ತಾಯ ಮತ್ತಿತರ ಪ್ರಮುಖರು ಮನೋಹರ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.










