ಮಡಿಕೇರಿ ಜ.6 NEWS DESK : ಪೊನ್ನಂಪೇಟೆ ಹಾಗೂ ಗೋಣಿಕೊಪ್ಪ ಠಾಣೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಕಾನೂನು ಸುವ್ಯವಸ್ಥೆ ಬಗ್ಗೆ ಚರ್ಚಿಸಿದರು. ಇದೇ ಸಂದರ್ಭ ಸಿಬ್ಬಂದಿ ವಸತಿ ಗೃಹ ಸಮುಚ್ಚಯಕ್ಕೆ ಭೇಟಿ ನೀಡಿ ಸಿಬ್ಬಂದಿಗಳ ಕುಂದು ಕೊರತೆ, ಮೂಲಭೂತ ಸೌಕರ್ಯಗಳ ಬಗ್ಗೆ ಪರಿಶೀಲನೆ ನಡೆಸಿದರು. ಅಲ್ಲದೆ ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು.











